ದೇವೇಗೌಡರ ಕುಟುಂಬಕ್ಕೆ ಹಿಂದಿನಿಂದಲೂ ಶಿವಕುಮಾರ್ ಮೇಲೆ ಹಗೆತನ: ಡಿಕೆ ಸುರೇಶ್

ದೇವೇಗೌಡರ ಕುಟುಂಬ ಹಿಂದಿನಿಂದಲೂ ಶಿವಕುಮಾರ್ ಅವರ ಮೇಲೆ ಹಗೆತನ ಸಾಧಿಸುತ್ತಿದೆ, ನಮಗೆ ಅವರಂತೆ ದ್ವೇಷದ ಭಾವನೆ ಇಲ್ಲ. ಸಮಾಜದ ಅಭಿವೃದ್ಧಿ ದೃಷ್ಟಿಯಿಂದ ನಾವು ಅವರಿಗೆ ಸಹಕಾರ ನೀಡುತ್ತಾ ಬಂದಿದ್ದೇವೆ.
ಡಿಕೆ ಸುರೇಶ್
ಡಿಕೆ ಸುರೇಶ್

ರಾಮನಗರ: ದೇವೇಗೌಡರ ಕುಟುಂಬ ಹಿಂದಿನಿಂದಲೂ ಶಿವಕುಮಾರ್ ಅವರ ಮೇಲೆ ಹಗೆತನ ಸಾಧಿಸುತ್ತಿದೆ, ನಮಗೆ ಅವರಂತೆ ದ್ವೇಷದ ಭಾವನೆ ಇಲ್ಲ. ಸಮಾಜದ ಅಭಿವೃದ್ಧಿ ದೃಷ್ಟಿಯಿಂದ ನಾವು ಅವರಿಗೆ ಸಹಕಾರ ನೀಡುತ್ತಾ ಬಂದಿದ್ದೇವೆ. ಚುನಾವಣೆ ಸಂದರ್ಭದಲ್ಲಿ ಅವರು ಬೇರೆ ರೀತಿ ವ್ಯಾಖ್ಯಾನ ಮಾಡಿದರೆ ನಾನು ಅದಕ್ಕೆ ಉತ್ತರ ನೀಡಲಾರೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ ಸುರೇಶ್ ಹೇಳಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಅವರ ಒಕ್ಕಲಿಗ ನಾಯಕತ್ವ ಕುರಿತ ಹೇಳಿಕೆಗೆ ತಿರುಗೇಟು ನೀಡಿದರು. ವೈಯಕ್ತಿಕವಾಗಿ ಟೀಕೆ ಮಾಡುತ್ತಿರುವ ಕುಮಾರಸ್ವಾಮಿ ಅವರು ಚುನಾವಣೆ ನಂತರ ಚರ್ಚೆಗೆ ಕರೆಯಲಿ. ಆಗ ನಾನು ಚರ್ಚಿಸಲು ಸಿದ್ಧ ಎಂದು ಸವಾಲು ಹಾಕಿದ್ದಾರೆ.

ಒಕ್ಕಲಿಗರ ನಾಯಕತ್ವ ಯಾರ ಸ್ವತ್ತೂ ಅಲ್ಲ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಾನು ಮಾತ್ರ ಒಕ್ಕಲಿಗರ ನಾಯಕ ಎಂಬ ಭಾವನೆಯನ್ನು ಇಟ್ಟುಕೊಂಡಿಲ್ಲ. ಸಮುದಾಯದವರು ಸ್ವಾಭಿಮಾನಿಗಳು. ಯಾರನ್ನು, ಯಾವಾಗ, ಏನು ಮಾಡಬೇಕೆಂಬುದು ಅವರಿಗೆ ಚನ್ನಾಗಿ ಗೊತ್ತಿದೆ ಎಂದು ಹೇಳಿದ್ದಾರೆ.

ಡಿಕೆ ಸುರೇಶ್
ಕರ್ನಾಟಕದಲ್ಲಿ ಮೋದಿ ಅಲೆ ಇಲ್ಲ, ಡಿಕೆ ಸುರೇಶ್ 2 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು: ಡಿಕೆಶಿ

ಕಾಂಗ್ರೆಸ್–ಜೆಡಿಎಸ್ ಮೈತ್ರಿ ಸರ್ಕಾರ ಬೀಳಿಸುವ ಸಂದರ್ಭದಲ್ಲಿ ಯಾರು ಅದರ ನೇತೃತ್ವ ವಹಿಸಿದ್ದರೋ, ಅವರನ್ನೇ ಕುಮಾರಸ್ವಾಮಿ ಅವರು ಆದಿಚುಂಚನಗಿರಿ ಮಠಕ್ಕೆ ಕರೆದುಕೊಂಡು ಹೋಗಿರುವ ವಿಚಾರವನ್ನು ಮಾತ್ರ ಶಿವಕುಮಾರ್ ಪ್ರಸ್ತಾಪಿಸಿದ್ದಾರೆ. ಕಾಂಗ್ರೆಸ್‌ನ ರಾಜ್ಯ ಘಕಟದ ಅಧ್ಯಕ್ಷರಾಗಿರುವ ಶಿವಕುಮಾರ್ ಅವರ ಮೇಲೆ ಸಮುದಾಯವನ್ನು ಒಗ್ಗಟ್ಟಿನಿಂದ ಮುಂದೆ ತೆಗೆದುಕೊಂಡು ಹೋಗುವ ಜವಾಬ್ದಾರಿ ಇದೆ. ಸಮುದಾಯವೂ ಅವರ ಬೆಂಬಲಕ್ಕಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com