ಸಿಟಿ ರವಿಗೆ ಅನ್ಯಾಯವಾಗಿದೆ, ಸರಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ: ಬಿಎಸ್ ಯಡಿಯೂರಪ್ಪ

ಪಕ್ಷದ ಮುಖಂಡ ಸಿಟಿ ರವಿ ಅವರಿಗೆ ಅನ್ಯಾಯವಾಗಿದ್ದು, ಅವರಿಗೆ ಸೂಕ್ತ ಸ್ಥಾನಮಾನ ಕಲ್ಪಿಸಲು ಎಲ್ಲ ರೀತಿಯ ಪ್ರಯತ್ನ ಮಾಡುತ್ತೇನೆ ಎಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪರ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ

ಚಿಕ್ಕಮಗಳೂರು: ಪಕ್ಷದ ಮುಖಂಡ ಸಿಟಿ ರವಿ ಅವರಿಗೆ ಅನ್ಯಾಯವಾಗಿದ್ದು, ಅವರಿಗೆ ಸೂಕ್ತ ಸ್ಥಾನಮಾನ ಕಲ್ಪಿಸಲು ಎಲ್ಲ ರೀತಿಯ ಪ್ರಯತ್ನ ಮಾಡುತ್ತೇನೆ ಎಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪರ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿಟಿ ರವಿ ಅವರು ವಿಧಾನಸಭೆಯಲ್ಲಿ ಇರಬೇಕಿತ್ತು. ವಿಧಾನಸಭೆ ಅಥವಾ ವಿಧಾನಪರಿಷತ್ತಿನಲ್ಲಿ ಸಿಟಿ ರವಿ ಅವರಿಗೆ ಅವಕಾಶ ನೀಡುವ ಮೂಲಕ ಅನ್ಯಾಯ ಸರಿಪಡಿಸಲು ನಾನು ಎಲ್ಲ ರೀತಿಯ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಮಾತನಾಡಿದ ಸಿಟಿ ರವಿ, ಪಕ್ಷದ ಮುಖಂಡರ ಹೆಸರಿನಲ್ಲಿ ನನ್ನ ವಿರುದ್ಧ ಸುಳ್ಳು ಪ್ರಚಾರ ಕೈಗೊಂಡಿದ್ದರಿಂದ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದೇನೆ. 4 ಬಾರಿ ಶಾಸಕನಾಗಿದ್ದಾಗ ಹೆಚ್ಚು ಕೆಲಸ ಮಾಡಿದ್ದೆ. ಆದರೂ, ಈ ಬಾರಿ ಚುನಾವಣೆಯಲ್ಲಿ ಸೋತೆ. ಚುನಾವಣೆ ಸಂದರ್ಭದಲ್ಲಿ ಕೆಲಸಗಳ ಕುರಿತು ಚರ್ಚೆ ಆಗಲಿಲ್ಲ, ಅಪಪ್ರಚಾರವಾಯಿತು ಎಂದರು.

ಬಿಎಸ್ ಯಡಿಯೂರಪ್ಪ
BSY ಸಂಧಾನಕ್ಕೂ ಬಗ್ಗದ ಬಿಜೆಪಿ ಭಿನ್ನರು; ಹೊರೆಯಾದ ಮೈತ್ರಿ! (ಸುದ್ದಿ ವಿಶ್ಲೇಷಣೆ)

ನನ್ನ ಹಣೆ ಬರಹ ಕೆಟ್ಟಿತ್ತು. ಜೆಡಿಎಸ್ ಕೂಡ ನನ್ನ ವಿರುದ್ಧವಾಗಿಯೇ ಕೆಲಸ ಮಾಡಿತ್ತು. ಜೆಡಿಎಸ್ ಅಭ್ಯರ್ಥಿ ಇದ್ದರೂ ನನ್ನ ವಿರುದ್ಧ ಕೆಲಸ ಮಾಡಲಾಯಿತು. ನಮ್ಮ ನಾಯಕರ ಹೆಸರನ್ನೂ ಬಳಸಿಕೊಂಡು ನನ್ನ ಬಗ್ಗೆ ಅಪಪ್ರಚಾರ ಮಾಡಿದರು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com