ಪ್ರಧಾನಿ ಮೋದಿಯನ್ನು ಹಿಟ್ಲರ್, ಮುಸಲೋನಿಗೆ ಹೋಲಿಸಿ ಅವಹೇಳನ ಆರೋಪ: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು

ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್, ಮುಸಲೋನಿಗೆ ಹೋಲಿಸಿ ಅವಹೇಳನ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳಬೇಕು, ಅವರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಡಬೇಕು ಎಂದು ಒತ್ತಾಯಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ಸಲ್ಲಿಸಿದೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್, ಮುಸಲೋನಿಗೆ ಹೋಲಿಸಿ ಅವಹೇಳನ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳಬೇಕು, ಅವರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಡಬೇಕು ಎಂದು ಒತ್ತಾಯಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ಸಲ್ಲಿಸಿದೆ.

ಶಾಸಕ ಎಸ್, ಸುರೇಶ್ ಕುಮಾರ್ ಮತ್ತು ಬಿಜೆಪಿ ಕಾನೂನು ಪ್ರಕೋಷ್ಠದ ರಾಜ್ಯ ಘಟಕದ ಅಧ್ಯಕ್ಷ ವಿವೇಕ್ ಎಸ್ . ರೆಡ್ಡಿ ನೇತೃತ್ವದ ನಿಯೋಗ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಅವರನ್ನು ಶನಿವಾರ ಭೇಟಿ ಮಾಡಿ ದೂರು ಸಲ್ಲಿಸಿತು.

ಸಿಎಂ ಸಿದ್ದರಾಮಯ್ಯ
ಮೋದಿ ರಾಜ್ಯ ಭೇಟಿಗೆ ನನ್ನ ತಕರಾರಿಲ್ಲ, ಆದರೆ ಕರ್ನಾಟಕಕ್ಕೆ ಕೊಟ್ಟ ಕೊಡುಗೆ ತಿಳಿಸಲಿ: ಸಿಎಂ ಸಿದ್ದರಾಮಯ್ಯ

ದೂರು ಸಲ್ಲಿಸಿದ ಬಳಿಕ ಎಎನ್ ಐ ಸುದ್ದಿಸಂಸ್ಥೆ ಜೊತೆಗೆ ಮಾತನಾಡಿದ ಎಸ್, ಸುರೇಶ್ ಕುಮಾರ್, ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕೊಳ್ಳೇಗಾಲದಲ್ಲಿ ಶುಕ್ರವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಸಿದ್ದರಾಮಯ್ಯ ಅವರು ಮೋದಿ ಅವರನ್ನು ಹಿಟ್ಲರ್, ಮುಸಲೋನಿಗೆ ಹೋಲಿಸಿದ್ದಾರೆ. ಮೋದಿ ಅವರು ಸರ್ವಾಧಿಕಾರಿ ಎಂದಿದ್ದಾರೆ. ಮೋದಿ ಅವರ ನಾಯಕತ್ವದಡಿ ಸಂವಿಧಾನ ಅಪಾಯದಲ್ಲಿದ್ದಾರೆ ಎಂದು ಹೇಳಿದ್ದಾರೆ. ಇದು ಅವರ ಹತಾಶೆಯನ್ನು ತೋರಿಸುತ್ತದೆ. ಹೀಗಾಗಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ ಎಂದು ತಿಳಿಸಿದರು.

ಬೇಜವಾಬ್ದಾರಿಯುತ ಹೇಳಿಕೆ ನೀಡುತ್ತಿರುವ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಡಬೇಕು. ಇನ್ನೂ ಮುಂದೆ ಚುನಾವಣಾ ಪ್ರಚಾರ ನಡೆಸದಂತೆ ನಿರ್ಬಂಧ ಹೇರಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಬಿಜೆಪಿ ಮತ್ತು ಬಿಜೆಪಿಯ ಅಭ್ಯರ್ಥಿ ವಚನ ಭ್ರಷ್ಟರು ಎಂದು ಹೇಳಿಕೆ ನೀಡಿರುವ ಮುಖ್ಯಮಂತ್ರಿ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಹಾಗೂ ಮೋದಿ ಅವರನ್ನು ಸರ್ವಾಧಿಕಾರಿ ಎಂದು ಬಿಂಬಿಸಿ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಫೋಸ್ಟ್ ಪ್ರಕಟಿಸಿರುವ ರಾಜ್ಯ ಯುವ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಯಶ್ ಗೌಡ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿ ಬಿಜೆಪಿ ಕಾನೂನು ಪ್ರಕೋಷ್ಠ ಪ್ರತ್ಯೇಕ ದೂರುಗಳನ್ನು ಸಲ್ಲಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com