ಹಾಸನ: ರಾಜಕೀಯ ತಿರುವು ಪಡೆದುಕೊಳ್ತಾ ಬಿಜೆಪಿ ಕಾರ್ಯಕರ್ತನ ಮೇಲಿನ ಹಲ್ಲೆ ಘಟನೆ!

ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಹಾಗೂ ಜಿಲ್ಲಾ ಪೊಲೀಸರು ಬೆಂಬಲ ನೀಡಿದ್ದಾರೆ ಎಂದು ಹಾಸನ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಆರೋಪಿಸಿದ್ದಾರೆ.
ಪ್ರಜ್ವಲ್ ರೇವಣ್ಣ, ಕೆಎನ್ ರಾಜಣ್ಣ
ಪ್ರಜ್ವಲ್ ರೇವಣ್ಣ, ಕೆಎನ್ ರಾಜಣ್ಣ

ಹಾಸನ: ಹಾಸನದಲ್ಲಿ ಶುಕ್ರವಾರ ಬಿಜೆಪಿ ಕಾರ್ಯಕರ್ತ ವಿಜಯಕುಮಾರ್ ಮೇಲೆ ಹಲ್ಲೆ ನಡೆಸಿರುವ ಘಟನೆ ರಾಜಕೀಯ ತಿರುವು ಪಡೆದುಕೊಳ್ಳುವಂತಿದೆ. ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಹಾಗೂ ಜಿಲ್ಲಾ ಪೊಲೀಸರು ಬೆಂಬಲ ನೀಡಿದ್ದಾರೆ ಎಂದು ಹಾಸನ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಆರೋಪಿಸಿದ್ದಾರೆ.

ವಿಜಯ್ ಕುಮಾರ್ ತನ್ನ ಅಂಗಡಿಯಲ್ಲೇ ಐವರ ತಂಡದಿಂದ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಪ್ರಜ್ವಲ್ ರೇವಣ್ಣ, ಕಾಂಗ್ರೆಸ್ ಹಿರಿಯ ನಾಯಕರ ಅಡ್ಡಿಯಿಂದ ಕಿಡಿಗೇಡಿಗಳ ವಿರುದ್ಧ ಪೊಲೀಸರು ಸೆಕ್ಷನ್ 307ರಡಿ ಪ್ರಕರಣ ದಾಖಲಿಸಿಲ್ಲ ಎಂದು ಹೇಳಿದರು.ಕುತೂಹಲಕಾರಿ ವಿಷಯವೇನೆಂದರೆ ಮೂರು ಗಂಟೆಗಳ ಅವಧಿಯಲ್ಲಿ ವಿಜಯ್ ಕುಮಾರ್ ಪೊಲೀಸರಿಗೆ ಎರಡು ಪ್ರತ್ಯೇಕ ದೂರು ಸಲ್ಲಿಸಿದ್ದಾರೆ.

ಆಡಳಿತ ಪಕ್ಷದ ಚುನಾಯಿತ ಪ್ರತಿನಿಧಿಗಳ ಇಚ್ಛೆಯಂತೆ ಪೊಲೀಸರು ನಡೆದುಕೊಳ್ಳುತ್ತಿದ್ದು, ದುಷ್ಕರ್ಮಿಗಳ ಪರವಾಗಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಪ್ರಜ್ವಲ್ ಆರೋಪಿಸಿದ್ದಾರೆ. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾ ಪೊಲೀಸರಿಗೂ ದೂರವಾಣಿ ಕರೆ ಮಾಡಿದ್ದಾರೆ ಎನ್ನಲಾಗಿದೆ. ಪೊಲೀಸರ ವಿರುದ್ಧ ಸರಣಿ ದೂರುಗಳ ಸುರಿಮಳೆಗೈದ ಪ್ರಜ್ವಲ್, ಪೊಲೀಸರು ಒತ್ತಡದಲ್ಲಿದ್ದಾರೆ ಎಂದು ಹೇಳಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಗಂಭೀರ ಕ್ರಮ ಕೈಗೊಳ್ಳುವಲ್ಲಿ ವಿಫಲರಾದ ಪರಿಣಾಮವಾಗಿ ಅಪರಾಧಿಗಳಿಗೆ ಜಾಮೀನು ಸಿಕ್ಕಿದೆ ಎಂದು ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ, ಕೆಎನ್ ರಾಜಣ್ಣ
ಹಾಸನದಲ್ಲಿ ಮುಗಿಯದ ಬೇಗುದಿ: ಪ್ರೀತಂ ಗೌಡರನ್ನು ಟೀಕಿಸಿದ್ದ ಬಿಜೆಪಿ ಕಾರ್ಯಕರ್ತನಿಗೆ ಹಿಗ್ಗಾಮುಗ್ಗಾ ಥಳಿತ!

ಶಸ್ತ್ರಾಸ್ತ್ರಗಳಿಂದ ಕೊಲೆ ಯತ್ನ ನಡೆದಿದೆ ಎಂದು ಹೇಳಿದ್ದರೂ ಪೊಲೀಸರು ದುಷ್ಕರ್ಮಿಗಳ ವಿರುದ್ಧ ಸೆಕ್ಷನ್ 307 ಪ್ರಕರಣವನ್ನು ದಾಖಲಿಸಿಲ್ಲ. ಸಮಸ್ಯೆ ತಾರ್ಕಿಕ ಅಂತ್ಯ ಕಾಣುವವರೆಗೂ ಹೋರಾಟ ನಡೆಸುವುದಾಗಿ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. ಘಟನೆಯನ್ನು ಹಾಸನ ನಗರ ಬ್ರಾಹ್ಮಣ ಮಹಾಸಭಾ ಸದಸ್ಯರು ಖಂಡಿಸಿದ್ದು, ತಪ್ಪಿತಸ್ಥರ ವಿರುದ್ಧ ಪೊಲೀಸರು ಗಂಭೀರ ಕ್ರಮ ಕೈಗೊಳ್ಳಬೇಕು ಹಾಗೂ ಮುಂದೆ ಇಂತಹ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಕೂಡ ಶುಕ್ರವಾರ ವಿಜಯಕುಮಾರ್ ಅವರನ್ನು ಭೇಟಿಯಾಗಿದ್ದರು. ಈ ಸಂಬಂಧ ಐವರನ್ನು ಬಂಧಿಸಿರುವ ಪೊಲೀಸರು ಶನಿವಾರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಆದರೆ, ಹಲ್ಲೆ ವಿಷಯ ತೀವ್ರ ಚರ್ಚೆಗೆ ಗ್ರಾಸವಾಯಿತು. ಮಾಧ್ಯಮವೊಂದಕ್ಕೆ ಸಂದರ್ಶನವೊಂದರಲ್ಲಿ ಪ್ರೀತಂ ಜೆ ಗೌಡ ವಿರುದ್ಧ ಆರೋಪ ಮಾಡಿದ್ದಕ್ಕೆ ಬಿಜೆಪಿ ಕಾರ್ಯಕರ್ತರು ವಿಜಯಕುಮಾರ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ದ್ವೇಷದಿಂದ ಈ ಘಟನೆ ನಡೆದಿದೆ ಎಂದು ಕೆಲವರು ಹೇಳುತ್ತಿದ್ದಾರೆ.

ರಾಜಕೀಯ ಲಾಭಕ್ಕಾಗಿ ಜೆಡಿಎಸ್ ಬೆಂಬಲಿಗರು ಉದ್ದೇಶಪೂರ್ವಕವಾಗಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುವಂತೆ ಒತ್ತಾಯಿಸಿದ್ದಾರೆ ಎಂದು ದೃಢಪಡಿಸದ ಮೂಲಗಳು ತಿಳಿಸಿವೆ. ಈ ಆರೋಪವನ್ನು ಜೆಡಿಎಸ್‌ನ ಹಿರಿಯ ನಾಯಕರೊಬ್ಬರು ತಳ್ಳಿ ಹಾಕಿದ್ದಾರೆ. ಅದೇನೇ ಇರಲಿ ಸಮಾಜದ ವಿವಿಧ ವರ್ಗಗಳ ಜನರು ಹಾಗೂ ಬಿಜೆಪಿ ಕಾರ್ಯಕರ್ತರು ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಬಿಜೆಪಿಯ ಮಾಜಿ ಶಾಸಕ ಪ್ರೀತಂ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಈ ಬಗ್ಗೆ ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com