ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ: ಪಕ್ಷ, ಅಭ್ಯರ್ಥಿ ಗೌಣ; ಅಭಿವೃದ್ಧಿಗೆ ಮಾತ್ರ ಮತದಾನ; ಶೋಭಾ-ರಾಜೀವ್ ಗೌಡ ನೇರ ಹಣಾಹಣಿ!

ಕರ್ನಾಟಕ ಮಾತ್ರವಲ್ಲದೆ, ದೇಶದ ಐದು ದೊಡ್ಡ ಲೋಕಸಭಾ ಕ್ಷೇತ್ರಗಳಲ್ಲಿ ಒಂದಾಗಿರುವ ಬೆಂಗಳೂರು ಉತ್ತರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ನಡೆಯಲಿದೆ.
ಶೋಭಾ ಕರಂದ್ಲಾಜೆ ಮತ್ತು ರಾಜೀವ್ ಗೌಡ
ಶೋಭಾ ಕರಂದ್ಲಾಜೆ ಮತ್ತು ರಾಜೀವ್ ಗೌಡ

ಬೆಂಗಳೂರು: ಕರ್ನಾಟಕ ಮಾತ್ರವಲ್ಲದೆ, ದೇಶದ ಐದು ದೊಡ್ಡ ಲೋಕಸಭಾ ಕ್ಷೇತ್ರಗಳಲ್ಲಿ ಒಂದಾಗಿರುವ ಬೆಂಗಳೂರು ಉತ್ತರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ನಡೆಯಲಿದೆ. ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದಲ್ಲಿ ಒಟ್ಟು 32,14,496 ಮತದಾರರಿದ್ದಾರೆ.

ಬಿಜೆಪಿಯ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಕಾಂಗ್ರೆಸ್ ನ ಎಂವಿ ರಾಜೀವ್ ಗೌಡ ನಡುವೆ ಸ್ಪರ್ಧೆಯಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಕೃಷ್ಣ ಬೈರೇಗೌಡ ಅವರನ್ನು ಹಾಲಿ ಸಂಸದ ಡಿವಿ ಸದಾನಂದಗೌಡ 1,47,518 ಮತಗಳ ಅಂತರದಿಂದ ಸೋಲಿಸಿದ್ದರು, ಈಗ ಡಿವಿಎಸ್ ಸ್ಥಾನದಲ್ಲಿ ಶೋಭಾ ಸ್ಪರ್ಧಿಸುತ್ತಿದ್ದಾರೆ.

ಇಬ್ಬರು ಒಕ್ಕಲಿಗ ಅಭ್ಯರ್ಥಿಗಳ ನಡುವಿನ ಪೈಪೋಟಿ ಕುತೂಹಲ ಮೂಡಿಸಿದ್ದು, ಮತದಾರರು ಅಭ್ಯರ್ಥಿಯ ಜಾತಿಯನ್ನು ಮಾತ್ರ ನೋಡದೆ ಹಲವು ಅಂಶಗಳನ್ನೂ ನೋಡುತ್ತಿದ್ದಾರೆ. ಹೆಬ್ಬಾಳ, ಬ್ಯಾಟರಾಯನಪುರ ಮತ್ತು ಯಶವಂತಪುರದ ಭಾಗಗಳಲ್ಲಿ ನೀರಿನ ಸಮಸ್ಯೆ ಪ್ರಮುಖ ಚರ್ಚೆಯ ವಿಷಯವಾಗಿದೆ. ಬೆಂಗಳೂರು ಉತ್ತರದಲ್ಲಿ ಮೊದಲ ಚುನಾವಣೆ 1951 ರಲ್ಲಿ ನಡೆಯಿತು ಮತ್ತು ಕೇಶವ ಮೂರ್ತಿ ಅವರು ಕಾಂಗ್ರೆಸ್ ಟಿಕೆಟ್‌ನಲ್ಲಿ ಸಂಸದರಾಗಿ ಆಯ್ಕೆಯಾದರು. ಈ ಕ್ಷೇತ್ರದಿಂದ ಕಾಂಗ್ರೆಸ್ 12 ಬಾರಿ, ಬಿಜೆಪಿ ನಾಲ್ಕು ಬಾರಿ ಮತ್ತು 1996 ರಲ್ಲಿ ಜೆಡಿಎಸ್ ಒಂದು ಬಾರಿ ಗೆದ್ದಿದೆ.

ಆದರೆ, 2023ರಲ್ಲಿ ವಿಧಾನಸಭಾ ಕ್ಷೇತ್ರಗಳಾದ ಹೆಬ್ಬಾಳ (ಬೈರತಿ ಸುರೇಶ್), ಪುಲಕೇಶಿನಗರ (ಎಸಿ ಶ್ರೀನಿವಾಸ) ಮತ್ತು ಬ್ಯಾಟರಾಯನಪುರ (ಕೃಷ್ಣ ಬೈರೇಗೌಡ) ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಾಯಕರು ಆಯ್ಕೆಯಾಗಿರುವುದರಿಂದ ಈ ಬಾರಿ ಬಿಜೆಪಿಗೆ ಕಠಿಣವಾಗಿದೆ. ಕೆಆರ್ ಪುರಂನಲ್ಲಿ ಬೈರತಿ ಬಸವರಾಜ್ ಬಿಜೆಪಿ ಟಿಕೆಟ್‌ನಲ್ಲಿ ಗೆದ್ದಿದ್ದಾರೆ. ಸೋದರ ಸಂಬಂಧಿ ಬೈರತಿ ಸುರೇಶ್‌ ಸಚಿವರಾಗಿರುವ ಹಿನ್ನೆಲೆಯಲ್ಲಿ ಅವರನ್ನು ತಮ್ಮ ಪರವಾಗಿ ಸೆಳೆಯಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ.

ಶೋಭಾ ಕರಂದ್ಲಾಜೆ ಮತ್ತು ರಾಜೀವ್ ಗೌಡ
ತೇಜಸ್ವಿ ಸೂರ್ಯ vs ಸೌಮ್ಯಾ ರೆಡ್ಡಿ: ಬೆಂಗಳೂರು ದಕ್ಷಿಣ ಕ್ಷೇತ್ರ ಯಾರ ಪಾಲಿಗೆ?

ದಾಸರಹಳ್ಳಿಯಲ್ಲಿ ಕಾಂಗ್ರೆಸ್ ಪಕ್ಷವು ಬಿಜೆಪಿಯೊಂದಿಗೆ ಕೈಜೋಡಿಸಿ, ಮಾಜಿ ಶಾಸಕ ಮಂಜುನಾಥ್ ಕಾಂಗ್ರೆಸ್ ಸೇರಿದ ನಂತರ ಜೆಡಿಎಸ್ ಮತಗಳನ್ನು ಗಳಿಸಬಹುದು ಎಂಬ ವಿಶ್ವಾಸವಿದೆ. ಆದರೆ ಬಿಜೆಪಿ ಕಾರ್ಯಕರ್ತರು ಎಸ್ ಮುನಿರಾಜು ಬೆಂಬಲವಿದೆ ಎಂದು ಭರವಸೆ ವ್ಯಕ್ತ ಪಡಿಸಿದ್ದಾರೆ.

ಬೆಂಗಳೂರಿನ ಪ್ರಮುಖ ಕ್ಷೇತ್ರಗಳಾದ ಮಲ್ಲೇಶ್ವರಂ ಮತ್ತು ಮಹಾಲಕ್ಷ್ಮಿ ಲೇಔಟ್‌ನಲ್ಲಿ ಬಿಜೆಪಿ ಹೆಚ್ಚು ಪ್ರಾಬಲ್ಯ ಹೊಂದಿದೆ. 2019 ರ ಲೋಕಸಭಾ ಚುನಾವಣೆಯಲ್ಲಿ 28,49,250 ಮತದಾರರಲ್ಲಿ ಕೇವಲ 15,60,324 ಜನರು ಮತ ಚಲಾಯಿಸಿದ್ದಾರೆ, ಅಂದರೆ ಶೇಕಡಾ 54.76 ರಷ್ಟು ಮತ ಚಲಾವಣೆಯಾಗಿತ್ತು. ಈ ಬಾರಿ ಎರಡು ಪಕ್ಷಗಳು ಹೆಚ್ಚಿನ ಸಂಖ್ಯೆಯಲ್ಲಿ ಮತದಾರನ್ನು ಸೆಳೆಯಲು ಮುಂದಾಗಿವೆ. ಅಪಾರ್ಟ್‌ಮೆಂಟ್‌ ಗಳಲ್ಲಿ ಕಾಂಗ್ರೆಸ್ ಅಬ್ಬರದ ಪ್ರಚಾರ ನಡೆಸುತ್ತಿದೆ, ಬಿಜೆಪಿ ಮೋದಿ ಅಂಶವನ್ನು ನೆಚ್ಚಿಕೊಂಡಿದೆ. ಶೋಭಾ ಅವರು ‘ಹೊರಗಿನವರು’ ಎಂದು ಕರೆದರೂ, ಉಡುಪಿ-ಚಿಕ್ಕಮಗಳೂರಿನಲ್ಲಿ ‘ಗೋ ಬ್ಯಾಕ್ ಶೋಭಾ’ ಅಭಿಯಾನ ಹೆದರಿಸಿ, ಈಗ ಪ್ರಧಾನಿ ಮೋದಿ ಹೆಸರಿನಲ್ಲಿ ಮತದಾರರನ್ನು ಸೆಳೆಯಲು ಪ್ರಯತ್ನಿಸುತ್ತಿದ್ದಾರೆ.

ಶೋಭಾ ಕರಂದ್ಲಾಜೆ ಮತ್ತು ರಾಜೀವ್ ಗೌಡ
ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ ದೂರು

ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಅಭ್ಯರ್ಥಿಯ ಜನಪ್ರಿಯತೆಯು ಗೌಣವಾಗಿದೆ. 2009ರಲ್ಲಿ ಬಿಜೆಪಿಯ ಡಿ.ಬಿ.ಚಂದ್ರೇಗೌಡ ಅವರು ಚಿಕ್ಕಮಗಳೂರಿನಲ್ಲಿದ್ದರೂ ಬೆಂಗಳೂರು ಉತ್ತರದಿಂದ ಗೆದ್ದಿದ್ದರು. 2014 ಮತ್ತು 2019ರಲ್ಲಿ ಉಡುಪಿ-ಚಿಕ್ಕಮಗಳೂರಿನಿಂದ ಬಿಜೆಪಿಯ ಡಿವಿ ಸದಾನಂದಗೌಡ ಸ್ಪರ್ಧಿಸಿ ಗೆದ್ದಿದ್ದರು. ಶೋಭಾ ಕೂಡ ಉಡುಪಿ- ಚಿಕ್ಕಮಗಳೂರಿನವರು.

ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆಯಾಗಿರುವ ಶೋಭಾ (57) ಅವರು ಬಿಎಸ್ ಯಡಿಯೂರಪ್ಪ ಅವರ ಸಂಪುಟದಲ್ಲಿ ಸಚಿವರಾಗಿದ್ದಾಗ ಮಾಡಿದ ಕೆಲಸಕ್ಕಾಗಿ ಯಶವಂತಪುರ ಮತ್ತು ಕೆಂಗೇರಿಯಲ್ಲಿ ಹೆಚ್ಚು ಮತಗಳನ್ನು ಪಡೆಯುವ ವಿಶ್ವಾಸವಿದೆ.

2023 ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ, ರಾಜೀವ್ ಗೌಡ (60) ಅಪಾರ್ಟ್ಮೆಂಟ್ ಸಂಘಗಳನ್ನು ಓಲೈಸಿ ಕಾಂಗ್ರೆಸ್‌ಗೆ ಅಡಿಪಾಯ ಹಾಕಿದರು. ಕಾಂಗ್ರೆಸ್ ಪ್ರಣಾಳಿಕೆ ಸಿದ್ಧಪಡಿಸುವಲ್ಲಿ ಅವರ ಪಾತ್ರವೂ ಇದೆ. ಇಲ್ಲಿ ರಾಜೀವ್ ಗೌಡ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು ಬಿಜೆಪಿಗೆ ತೀವ್ರ ಪೈಪೋಟಿ ಎದುರಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com