ಇಡೀ ಬೆಂಗಳೂರು ಡಿಕೆಶಿ ಕಪಿಮುಷ್ಠಿಯಲ್ಲಿದೆ: ಹೆಚ್‌ಡಿ ದೇವೇಗೌಡ

ಲೋಕಸಭೆ ಚುನಾವಣೆಯಲ್ಲಿ ವಿವಿಧ ರಾಜ್ಯಗಳಲ್ಲಿ ಮುಖಭಂಗ ಅನುಭವಿಸಿದ ನಂತರ ಕಾಂಗ್ರೆಸ್‌ನ ಹಲವು ಪ್ರಮುಖ ನಾಯಕರು ಪಕ್ಷ ತೊರೆಯಲಿದ್ದಾರೆದು ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಶುಕ್ರವಾರ ಹೇಳಿದರು.
ಮಾಜಿ ಪ್ರಧಾನಿ ದೇವೇಗೌಡ
ಮಾಜಿ ಪ್ರಧಾನಿ ದೇವೇಗೌಡ

ಹಾಸನ: ಲೋಕಸಭೆ ಚುನಾವಣೆಯಲ್ಲಿ ವಿವಿಧ ರಾಜ್ಯಗಳಲ್ಲಿ ಮುಖಭಂಗ ಅನುಭವಿಸಿದ ನಂತರ ಕಾಂಗ್ರೆಸ್‌ನ ಹಲವು ಪ್ರಮುಖ ನಾಯಕರು ಪಕ್ಷ ತೊರೆಯಲಿದ್ದಾರೆದು ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಶುಕ್ರವಾರ ಹೇಳಿದರು.

ಸಕಲೇಶಪುರ ತಾಲೂಕಿನ ಚಂಗಡಿಹಳ್ಳಿಯಲ್ಲಿ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂದೆ ಯಾವುದೇ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯುವುದು ಕಷ್ಟ. ವಿರೋಧ ಪಕ್ಷಗಳ ಪರಿಸ್ಥಿತಿ ಈಗಾಗಲೇ ಕೆಟ್ಟದಾಗಿದ್ದು, ರಾಜ್ಯ ಕಾಂಗ್ರೆಸ್ ನಾಯಕರಿಗೆ ವಿಪಕ್ಷಗಳನ್ನು ತಮ್ಮದೇ ಪಕ್ಷವೆಂದು ಪರಿಗಣಿಸುವ ನೈತಿಕ ಹಕ್ಕಿಲ್ಲ ಎಂದು ಹೇಳಿದರು

ಇದೇ ವೇಳ ಕಾಂಗ್ರೆಸ್ ಬೆಂಬಲದೊಂದಿಗೆ ಪ್ರಧಾನಿಯಾಗಿದ್ದ ಅವಧಿಯನ್ನು ಸ್ಮರಿಸಿದ ಅವರು, ಕಾಂಗ್ರೆಸ್ ನನ್ನ ವಿರುದ್ಧ ಪಿತೂರಿ ನಡೆಸಿತ್ತು. ಕೊಟ್ಟ ಬೆಂಬಲ ಹಿಂಪಡೆದು ನನ್ನನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಸಿತ್ತು ಎಂದು ವಾಗ್ದಾಳಿ ನಡೆಸಿದರು. ಬಳಿಕ I.N.D.I.A ಬಣದಲ್ಲಿ ಯಾವುದೇ ನಾಯಕನಿಗೆ ಪ್ರಧಾನಿಯಾಗುವ ಸಾಮರ್ಥ್ಯವಿಲ್ಲ ಎಂದು ಪುನರುಚ್ಚರಿಸಿದರು.

ನಂತರ ಮಂಡ್ಯ, ಕೋಲಾರ ಮತ್ತು ಹಾಸನ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ ಸೋಲು ಖಚಿತವಾಗುವ ಮೂಲಕ ರಾಜ್ಯದಲ್ಲಿ ಜೆಡಿಎಸ್ ಅನ್ನು ರಾಜಕೀಯವಾಗಿ ಮುಗಿಸಲು ಷಡ್ಯಂತ್ರ ನಡೆಸುತ್ತಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಹೇಳಿಕೆ ವಿರುದ್ಧವೂ ವಾಗ್ದಾಳಿ ನಡೆಸಿದರು.

ಮಾಜಿ ಪ್ರಧಾನಿ ದೇವೇಗೌಡ
ಡಿಕೆಶಿ- ದೇವೇಗೌಡ ಕುಟುಂಬಗಳ 'ಟೈಟಾನಿಕ್' ಘರ್ಷಣೆ: ಹೈವೋಲ್ಟೇಜ್ ಕಣವಾದ ಬೆಂಗಳೂರು ಗ್ರಾಮಾಂತರ; ಮೈತ್ರಿ ಅಭ್ಯರ್ಥಿಗೆ 'ಕ್ಲೀನ್ ಇಮೇಜ್' ವರದಾನ!

ಇಡೀ ಬೆಂಗಳೂರೇ ಶಿವಕುಮಾರ್ ಕಪಿಮುಷ್ಠಿಯಲ್ಲಿ ಸಿಲುಕಿದ್ದು, ಕರ್ನಾಟಕದಿಂದ ವಿವಿಧ ರಾಜ್ಯಗಳ ಚುನಾವಣೆಗೆ ಹಣ ರವಾನೆಯಾಗಿದೆ ಎಂಬ ಆರೋಪದ ಬಗ್ಗೆ ಸಾಕ್ಷ್ಯಾಧಾರ ನೀಡಲು ನಾನು ಸಿದ್ಧನಿದ್ದೇನೆಂದು ಸವಾಲು ಹಾಕಿದರು.

ಶಿವಕುಮಾರ್ ಅವರು ಮತದಾರರನ್ನು ಗೊಂದಲಕ್ಕೀಡು ಮಾಡಲು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನನ್ನ ಅಳಿಯ ಡಾ.ಸಿ.ಎನ್.ಮಂಜುನಾಥ್ ವಿರುದ್ಧ ಒಂದೇ ಹೆಸರಿನ ಮೂವರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ. ಆದರೆ, ಇದು ಫಲ ನೀಡುವುದಿಲ್ಲ. ವಿರೋಧ ಪಕ್ಷಗಳ ಪ್ರಯತ್ನದಿಂದಲ್ಲ ಸಂಸತ್ ಚುನಾವಣೆಯ ನಂತರ ರಾಜ್ಯ ಸರ್ಕಾರ ತಾನಾಗಿಯೇ ಪತನವಾಗಲಿದೆ ಎಂದು ಭವಿಷ್ಯ ನುಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com