ಹಿಟ್ಲರ್‌ನಂತೆ ಪ್ರಜಾಪ್ರಭುತ್ವಕ್ಕೆ ಮೋದಿ ಕಂಟಕ: ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಮತ್ತು ಬಿಜೆಪಿಯವರು ಹಿಟ್ಲರ್‌, ಮುಸಲೋನಿ ಸಿದ್ಧಾಂತಗಳಲ್ಲಿ ನಂಬಿಕೆ ಇಟ್ಟವರು. ಮೋದಿ ಅವರ ಕೈಯಲ್ಲಿ ದೇಶದ ಪ್ರಜಾಪ್ರಭುತ್ವ, ಸಂವಿಧಾನ ಸುರಕ್ಷಿತವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.
Chief Minister Siddaramaiah with Congress leaders at an election rally in Chamarajanagar on Friday
ಚಾಮರಾಜನಗರದಲ್ಲಿ ಶುಕ್ರವಾರ ಕಾಂಗ್ರೆಸ್ ಮುಖಂಡರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯPhoto | Udayashankar S, EPS
Updated on

ಮೈಸೂರು: ಪ್ರಧಾನಿ ಮೋದಿ ಮತ್ತು ಬಿಜೆಪಿಯವರು ಹಿಟ್ಲರ್‌, ಮುಸಲೋನಿ ಸಿದ್ಧಾಂತಗಳಲ್ಲಿ ನಂಬಿಕೆ ಇಟ್ಟವರು. ಮೋದಿ ಅವರ ಕೈಯಲ್ಲಿ ದೇಶದ ಪ್ರಜಾಪ್ರಭುತ್ವ, ಸಂವಿಧಾನ ಸುರಕ್ಷಿತವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.

ಕೊಳ್ಳೇಗಾಲದಲ್ಲಿ ಹಮ್ಮಿಕೊಳ್ಳಲಾಗಿದ್ದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, 400 ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದರೆ ಸಂವಿಧಾನವನ್ನು ಬದಲಿಸುತ್ತೇವೆಂದು ಬಿಜೆಪಿ ಹೇಳುತ್ತಿದೆ. ದೇಶದಲ್ಲಿಂದು ಸಂವಿಧಾನವು ಅಪಾಯದಲ್ಲಿದೆ. ಪ್ರಧಾನಿ ಪ್ರಜಾಪ್ರಭುತ್ವದ ವಿರುದ್ಧದ “ಸರ್ವಾಧಿಕಾರಿ” ಆಗಿ ಬದಲಾಗಿದ್ದಾರೆ. ಹೀಗಾಗಿ, ಜನರು ಬಿಜೆಪಿ ಹಾಗೂ ಮೋದಿಯವರನ್ನು ಮತದಾರರು ತಿರಸ್ಕರಿಸಬೇಕು ಎಂದು ಹೇಳಿದರು.

ಇದೇ ವೇಳೆ ಮೋದಿಯನ್ನು ಯುರೋಪಿಯನ್ ಸರ್ವಾಧಿಕಾರಿಗಳಾದ ಬೆನಿಟೊ ಮುಸೊಲಿನಿ ಮತ್ತು ಹಿಲ್ಟರ್‌ಗೆ ಸಿದ್ದರಾಮಯ್ಯ ಅವರು ಹೋಲಿಸಿ ವಾಗ್ದಾಳಿ ನಡೆಸಿದು.

ಮೋದಿ ಅವರು 10 ವರ್ಷಗಳಿಂದ ಪ್ರಧಾನಿಯಾಗಿದ್ದಾರೆ. ಪ್ರಧಾನಿಯಾಗುವುದಕ್ಕೂ ಮುಂಚೆ ಅವರು ಬಹಳಷ್ಟು ಹೇಳಿಕೊಂಡಿದ್ದರು. ಆದರೆ, 10 ವರ್ಷಗಳಲ್ಲಿ ಅದನ್ನು ಹೇಳಿದಂತೆ ಮಾಡಿದ್ದಾರೆಯೇ ಎಂಬುದನ್ನು ಜನರು ಪರಿಶೀಲಿಸಬೇಕು. ಅಧಿಕಾರಕ್ಕೆ ಬಂದ ಆರೇ ತಿಂಗಳಲ್ಲಿ ವಿದೇಶದಿಂದ ಕಪ್ಪು ಹಣ ತರುತ್ತೇವೆ ಎಂದು ಹೇಳಿದ್ದರು. ಖಾತೆಗೆ ರೂ.15 ಲಕ್ಷ ಹಾಕುವಾಗಿ ಘೋಷಿಸಿದ್ದರು. ಕಪ್ಪು ಹಣ ಬಂತಾ? ಖಾತೆಗೆ ಜಮೆ ಆಯಿತಾ? ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುವ ಭರವಸೆ ನೀಡಿದ್ದರು. ಅದರಂತೆ 20 ಕೋಟಿ ಉದ್ಯೋಗ ಸೃಷ್ಟಿಯಾಗಬೇಕಿತ್ತು. ಆದರೆ 20 ಲಕ್ಷವೂ ಆಗಿಲ್ಲ. ಅಚ್ಚೇ ದಿನ್‌ ಬರುತ್ತದೆ ಎಂದಿದ್ದರು. 10 ವರ್ಷಗಳಲ್ಲಿ ಬಂತಾ? ಸಬ್‌ಕಾ ಸಾತ್‌ ಸಬ್‌ಕಾ ವಿಕಾಸ್‌ ಎಂದು ಘೋಷಿಸಿದ್ದರು. ಆದರೆ, ಬಡವರು ಅಭಿವೃದ್ಧಿಯಾಗಲಿಲ್ಲ. ಅಂಬಾನಿ, ಅದಾನಿ, ಟಾಟಾ, ಬಿರ್ಲಾಗಳು ಅಭಿವೃದ್ಧಿ ಹೊಂದಿದರು’ ಎಂದು ಕಿಡಿಕಾರಿದರು.

ಸ್ವಾಮಿನಾಥನ್‌ ವರದಿ ಜಾರಿಗೆ ತರಲಿಲ್ಲ. ಪೆಟ್ರೋಲ್‌, ಡೀಸೆಲ್‌ ಅಡುಗೆ ಅನಿಲ ಸಿಲಿಂಡರ್‌ ಬೆಲೆ ಹೆಚ್ಚಾಗಿದೆ. ರೈತರ ಆದಾಯ ದುಪ್ಪಟ್ಟು ಮಾಡುವ ಹೇಳಿಕೆಯೂ ಸುಳ್ಳಾಗಿದೆ. 10 ವರ್ಷಗಳ ಅವಧಿಯಲ್ಲಿ ಮೋದಿ ಪ್ರಧಾನಿಯಾಗಿ ಸಂಪೂರ್ಣವಾಗಿ ವಿಫಲವಾಗಿದ್ದಾರೆ. ಮತ್ತೆ 10 ವರ್ಷ ಪ್ರಧಾನಿಯಾಗಲು ಹೊರಟಿದ್ದಾರೆ. ಇಂತಹವರಿಗೆ ಮತ ಹಾಕಬೇಕಾ? ಬಿಜೆಪಿ ಯಾವಾಗಲೂ ನುಡಿದಂತೆ ನಡೆದಿಲ್ಲ. ಹಾಗಾಗಿ, ಬಿಜೆಪಿಗೆ ಮತ ಹಾಕಬೇಡಿ ಎಂದು ಕರೆ ನೀಡಿದರು.

ಎಸ್ಸಿ ಮತ್ತು ಎಸ್ಟಿಗಳಿಗೆ ವಿಶೇಷ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ದಲಿತರಿಗೆ ಗುತ್ತಿಗೆ ಮತ್ತು ಬಡ್ತಿಯಲ್ಲಿ ಮೀಸಲಾತಿಯನ್ನು ತಂದಿದ್ದು ಕಾಂಗ್ರೆಸ್ ಸರ್ಕಾರ ಎಂಬುದನ್ನು ದಲಿತರು ತಿಳಿದುಕೊಳ್ಳಬೇಕು ಎಂದರು.

Chief Minister Siddaramaiah with Congress leaders at an election rally in Chamarajanagar on Friday
NDA ಗೆ ಕೇಂದ್ರದಲ್ಲಿ ಸರ್ಕಾರ ರಚಿಸುವಷ್ಟು ಸೀಟು ಬರಲ್ಲ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ಗೆ ಚುನಾವಣೆಯಲ್ಲಿ ಸೋಲುವ ಭಯ ಉಂಟಾಗಿದೆ. ಅದಕ್ಕಾಗಿ ಮೈತ್ರಿ ಮಾಡಿಕೊಂಡಿದ್ದಾರೆ. ಎರಡೂ ಪಕ್ಷಗಳಿಗೆ ತತ್ವ, ಸಿದ್ಧಾಂತ ಇಲ್ಲ. ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳನ್ನೂ ರೂಪಿಸಿಕೊಂಡಿಲ್ಲ. ಕಾಂಗ್ರೆಸ್‌ ಸೋಲಿಸುವುದೊಂದೇ ಅವರ ಗುರಿ. ಬಡವರು, ರೈತರು, ಅಲ್ಪಸಂಖ್ಯಾತರು, ಮಹಿಳೆಯರ ಪರವಾಗಿ ಏನು ಮಾಡಿದ್ದೇವೆ ಎಂದು ಹೇಳಿಕೊಳ್ಳಲು ಅವರಿಗೆ ಯಾವುದೇ ಸಾಧನೆಗಳಿಲ್ಲ ಎಂದು ವ್ಯಂಗ್ಯವಾಡಿದರು.

ಹಿಂದಿನ ಅವಧಿಯಲ್ಲಿ ಮುಖ್ಯಮಂತ್ರಿಗಳಾಗಿದ್ದ ಎಚ್‌.ಡಿ.ಕುಮಾರಸ್ವಾಮಿ, ಬಿ.ಎಸ್‌.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರು ಏನೂ ಅಭಿವೃದ್ಧಿ ಕೆಲಸ ಮಾಡಲಿಲ್ಲ. ಹೇಳಿಕೊಳ್ಳುವುದಕ್ಕೇ ಸಾಧನೆಗಳೇ ಇಲ್ಲ. ಮೋದಿ ಬಿಟ್ಟರೆ ಚುನಾವಣಾ ವಿಷಯಗಳೇ ಇಲ್ಲ. ಮೋದಿ ಅವರ ಮುಖವಾಡ ಇಟ್ಟುಕೊಂಡು ‘ಮೋದಿಗೆ ಮತ‌ ಕೊಡಿ’ ಎಂದು ಕೇಳುತ್ತಿದ್ದಾರೆಂದು ಕುಟುಕಿದರು.

ನಮಗೆ ಅಧಿಕಾರ ಕೊಟ್ಟರೆ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಹೇಳಿದ್ದೆವು. ಅದರಂತೆ ಸರ್ಕಾರ ರಚನೆಯಾಗುತ್ತಲೇ ಎಲ್ಲ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ಜನರಿಗೆ ಅನುಕೂಲವಾಗಿದೆ. ನುಡಿದಂತೆ ನಡೆದಿದ್ದೇವೆ. ಈ ಬಾರಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮಹಿಳೆಯರ ಖಾತೆಗೆ ರೂ.1 ಲಕ್ಷ ಹಾಕುವುದಾಗಿ ಘೋಷಣೆ ಮಾಡಿದ್ದೇವೆ. ಸ್ವಾಮಿನಾಥನ್‌ ವರದಿ ಜಾರಿಗೆ ತರುವ ಭರವಸೆ ಕೊಟ್ಟಿದ್ದೇವೆ. ನಾವು ಚುನಾವಣೆ ಉದ್ದೇಶಕ್ಕೆ ಹೇಳುತ್ತಿಲ್ಲ. ಏನೂ ಹೇಳುತ್ತೇವೆಯೋ, ಅದನ್ನೇ ಮಾಡುತ್ತೇವೆಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com