ಸಿದ್ದರಾಮಯ್ಯ ಮೂಲ ನಮ್ಮ ಕಾಂಗ್ರೆಸ್ ಅಲ್ಲ: ಡಿ.ಕೆ. ಸುರೇಶ್

ಸಿದ್ದರಾಮಯ್ಯ ಮೂಲ ಕಾಂಗ್ರೆಸ್ ಪಕ್ಷವಲ್ಲ. ಬೇರೆ ಪಕ್ಷದಿಂದ ಬಂದವರು, ಆದರೂ, ನಾವು ಅವರಿಗೆ ಅವಕಾಶ ಮಾಡಿಕೊಟ್ಟಿದ್ದೇವೆಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭಾ ಚುನಾವಣಾ ಅಭ್ಯರ್ಥಿ ಡಿ.ಕೆ ಸುರೇಶ್‌ ಹೇಳಿದ್ದಾರೆ.
ಸಂಸದ ಡಿ.ಕೆ.ಸುರೇಶ್
ಸಂಸದ ಡಿ.ಕೆ.ಸುರೇಶ್

ರಾಮನಗರ: ಸಿದ್ದರಾಮಯ್ಯ ಮೂಲಕ ಕಾಂಗ್ರೆಸ್ ಪಕ್ಷವಲ್ಲ. ಬೇರೆ ಪಕ್ಷದಿಂದ ಬಂದವರು, ಆದರೂ, ನಾವು ಅವರಿಗೆ ಅವಕಾಶ ಮಾಡಿಕೊಟ್ಟಿದ್ದೇವೆಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭಾ ಚುನಾವಣಾ ಅಭ್ಯರ್ಥಿ ಡಿ.ಕೆ ಸುರೇಶ್‌ ಹೇಳಿದ್ದಾರೆ.

ರಾಮನಗರದಲ್ಲಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿರುವ ಅವರು, ಸಿದ್ದರಾಮಯ್ಯ ಅವರು ಬೇರೆ ಪಕ್ಷದಿಂದ ಬಂದವರು ಆದರೂ ನಾವು ಅವರಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. 2ನೇ ಬಾರಿಗೆ ಮುಖ್ಯಮಂತ್ರಿ ಆಗಿದ್ದಾರೆ, ನಮ್ಮ ನಾಯಕರಾಗಿದ್ದಾರೆ ಎಂದು ಹೇಳಿದರು.

ಸಂಸದ ಡಿ.ಕೆ.ಸುರೇಶ್
ಬಿಜೆಪಿಯವರು ಕತ್ರಿ ಹಾಕೋದ್ರಲ್ಲಿ ನಿಸ್ಸೀಮರು: ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ ಅವರು ರಾಜ್ಯಕ್ಕೆ ಹೊಸ ಕಾಯಕಲ್ಪ ಕೊಟ್ಟಿದ್ದಾರೆ. ಬಡವರಿಗಾಗಿ ಒಂದಷ್ಟು ಕಾರ್ಯಕ್ರಮ ಕೊಟ್ಟಿದ್ದಾರೆ. ಹಾಗಾಗಿ ಹಣೇಲಿ ಬರೆದಿದ್ದರೆ ಎಲ್ಲಾ ಆಗುತ್ತೆ, ಬರೆದಿಲ್ಲ ಎಂದರೆ ಏನೂ ಮಾಡೋಕಾಗಲ್ಲ ಎಂದು ತಿಳಿಸಿದರು.

ಜೆಡಿಎಸ್‌ ನಾಯಕರು ಸಿದ್ದರಾಮಯ್ಯ ಅವರಿಗೆ ಬೀಗ ಹಾಕಿ ಕೂರಿಸಿದ್ದರು. ಅಮಾನತು ಮಾಡಿದ್ದರು. ಆದರೆ, ಅವರ ಯೋಗ ಅಲ್ಲಿ ಬರೆದಿರಲಿಲ್ಲ, ಇಲ್ಲಿ (ಕಾಂಗ್ರೆಸ್) ಬರೆದಿತ್ತು. ಹಾಗೆಯೇ ನಿಮ್ಮ ಯೋಗ ಸಹ ಬರೆದಿರಬಹುದು. ಯಾರನ್ನೂ ಅಡ್ಡ ಹಾಕೋಕೆ ಹೋಗಬೇಡಿ, ಪಕ್ಷ ಬೆಳೆಯುವ ನಿಟ್ಟಿನಲ್ಲಿ ಕೆಲಸ ಮಾಡಿ ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com