ಸಚಿವ ಡಿ. ಸುಧಾಕರ್
ಸಚಿವ ಡಿ. ಸುಧಾಕರ್

ನೀತಿ ಸಂಹಿತೆ ಉಲ್ಲಂಘನೆ ಆರೋಪ: ಸಚಿವ ಡಿ ಸುಧಾಕರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಇತ್ತೀಚೆಗೆ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿಗಳಿಂದ ವಿಶೇಷ ಅನುದಾನದ ಭರವಸೆಯ ಹೇಳಿಕೆ ನೀಡಿದ ಸಚಿವ ಡಿ ಸುಧಾಕರ್ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ರಾಜ್ಯ ಘಟಕ ಸೋಮವಾರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ಬೆಂಗಳೂರು: ಇತ್ತೀಚೆಗೆ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿಗಳಿಂದ ವಿಶೇಷ ಅನುದಾನದ ಭರವಸೆಯ ಹೇಳಿಕೆ ನೀಡಿದ ಸಚಿವ ಡಿ ಸುಧಾಕರ್ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ರಾಜ್ಯ ಘಟಕ ಸೋಮವಾರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ಈ ಸಂಬಂಧ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿರುವ ಬಿಜೆಪಿ, ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿ ಗ್ರಾಮದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡಿದ ಸಚಿವರು, ಲೀಡ್ ಬಂದರೆ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ 25 ಕೋಟಿ ರೂಪಾಯಿ ವಿಶೇಷ ಅನುದಾನ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಆರೋಪಿಸಿದೆ.

ಸಚಿವ ಡಿ. ಸುಧಾಕರ್
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಈಶ್ವರಪ್ಪ ವಿರುದ್ಧ FIR ದಾಖಲು

"ಈ ಹೇಳಿಕೆಯು ಮತದಾರರ ಮೇಲೆ ಅನಗತ್ಯ ಪ್ರಭಾವ ಬೀರಲಿದ್ದು, ಅಂತಿಮವಾಗಿ ಮುಂಬರುವ ಲೋಕಸಭಾ ಚುನಾವಣೆಯ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಜನರನ್ನು ಹಾದಿ ತಪ್ಪಿಸುವ, ತಪ್ಪು ಭಾಷಣಕ್ಕಾಗಿ ಸಚಿವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.

Related Stories

No stories found.

Advertisement

X
Kannada Prabha
www.kannadaprabha.com