ಏಪ್ರಿಲ್ 17 ರಂದು ರಾಜ್ಯಕ್ಕೆ ರಾಹುಲ್ ಗಾಂಧಿ ಭೇಟಿ, ಪ್ರಿಯಾಂಕಾ ವೇಳಾಪಟ್ಟಿ ಸಿದ್ಧಪಡಿಸಲಾಗುತ್ತಿದೆ: ಡಿಕೆ ಶಿವಕುಮಾರ್

ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಕರ್ನಾಟಕಕ್ಕೆ ಆಗಮಿಸಲಿದ್ದು, ಮಂಡ್ಯ ಮತ್ತು ಕೋಲಾರ ಲೋಕಸಭಾ ಕ್ಷೇತ್ರದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಕರ್ನಾಟಕಕ್ಕೆ ಆಗಮಿಸಲಿದ್ದು, ಮಂಡ್ಯ ಮತ್ತು ಕೋಲಾರ ಲೋಕಸಭಾ ಕ್ಷೇತ್ರದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳವಾರ ಹೇಳಿದ್ದಾರೆ.

ಲೋಕಸಭೆ ಚುನಾವಣೆ ಘೋಷಣೆಯಾದ ಬಳಿಕ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ರಾಜ್ಯಕ್ಕೆ ಮೊದಲ ಬಾರಿ ಭೇಟಿ ನೀಡುತ್ತಿದ್ದಾರೆ.

ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಶಿವಕುಮಾರ್, ರಾಹುಲ್ ಗಾಂಧಿ ಅವರು ಬುಧವಾರ ಮಧ್ಯಾಹ್ನ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿಂದ ಮಂಡ್ಯಕ್ಕೆ ತೆರಳಲಿದ್ದಾರೆ ಎಂದರು.

ರಾಹುಲ್ ಗಾಂಧಿ
ಸಾಂವಿಧಾನಿಕ ಸಂಸ್ಥೆಗಳು ಪ್ರಧಾನಿಯ ವೈಯಕ್ತಿಕ ಆಸ್ತಿಯಲ್ಲ: ರಾಹುಲ್ ಗಾಂಧಿ

ನಂತರ ರಾಹುಲ್ ಗಾಂಧಿ ಅವರು ಮಂಡ್ಯದಿಂದ ಕೋಲಾರಕ್ಕೆ ತೆರಳಿ ಅಲ್ಲಿಂದ ಬೆಂಗಳೂರು ಮೂಲಕ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಡಿಸಿಎಂ ತಿಳಿಸಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ರಾಜ್ಯ ಪ್ರವಾಸದ ಕುರಿತು ಕೇಳಿದ ಪ್ರಶ್ನೆಗೆ, ಡಿಸಿಎಂ ಶಿವಕುಮಾರ್ ಅವರು, ಅವರ ವೇಳಾಪಟ್ಟಿ ಸಿದ್ಧಪಡಿಸಲಾಗುತ್ತಿದೆ ಮತ್ತು ಕರ್ನಾಟಕ ಭೇಟಿಯ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com