ಬಿಜೆಪಿಯಲ್ಲಿ ಒಕ್ಕಲಿಗರಿಗೆ ಸ್ಥಾನವಿಲ್ಲ: ಡಿಕೆ ಶಿವಕುಮಾರ್

ಬಿಜೆಪಿಯಲ್ಲಿ ಒಕ್ಕಲಿಗ ಸಮುದಾಯಕ್ಕೆ ಸ್ಥಾನವಿಲ್ಲ ಎಂದು ಆರೋಪಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಕಾಂಗ್ರೆಸ್ ಪರವಾಗಿ ಕೆಲಸ ಮಾಡಿ ಎಂದು ಒಕ್ಕಲಿಗರಿಗೆ ಕರೆ ನೀಡಿದ್ದಾರೆ.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ಮೈಸೂರು: ಬಿಜೆಪಿಯಲ್ಲಿ ಒಕ್ಕಲಿಗ ಸಮುದಾಯಕ್ಕೆ ಸ್ಥಾನವಿಲ್ಲ ಎಂದು ಆರೋಪಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಕಾಂಗ್ರೆಸ್ ಪರವಾಗಿ ಕೆಲಸ ಮಾಡಿ ಎಂದು ಒಕ್ಕಲಿಗರಿಗೆ ಕರೆ ನೀಡಿದ್ದಾರೆ.

ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಒಕ್ಕಲಿಗ ಸದಸ್ಯರ ಸಭೆಯಲ್ಲಿ ಪಾಲ್ಗೊಂಡು ಡಿಕೆ.ಶಿವಕುಮಾರ್ ಅವರು ಮಾತನಾಡಿದರು.

ಬಿಜೆಪಿಯಲ್ಲಿ ಒಕ್ಕಲಿಗರಿಗೆ ಸ್ಥಾನವಿಲ್ಲ, ಭವಿಷ್ಯದಲ್ಲಿ ಜೆಡಿಎಸ್ ಗೆಲ್ಲಲು ಸಾಧ್ಯವಿಲ್ಲ, ಹೀಗಾಗಿ ನೀವು ನನಗೆ ಶಕ್ತಿ ತುಂಬಬೇಕು ಎಂದು ಹೇಳಿದರು.

ಮೈಸೂರಿನಲ್ಲಿ ಒಕ್ಕಲಿಗ ಸಮುದಾಯಕ್ಕೆ ರಕ್ಷಣೆ ಇಲ್ಲದಂತಾಗಿದೆ, ನಾಯಕತ್ವದ ಪ್ರಶ್ನೆಯೂ ಎದುರಾಗಿದೆ ಎಂಬುದು ನನಗೆ ಗೊತ್ತಿದೆ. ಈಗ ಸಚಿವ ವೆಂಕಟೇಶ್ ಹಾಗೂ ಹರೀಶ್ ಗೌಡ ಮುಂದಾಳತ್ವ ವಹಿಸಿಕೊಂಡಿದ್ದಾರೆ. ನಾನು ನಿಮ್ಮೂರಿನ ಅಳಿಯ. ನನಗೂ ದೊಡ್ಡ ಜವಾಬ್ದಾರಿ ಇದೆ. ನೀವು ತಲೆ ಕಡೆಸಿಕೊಳ್ಳಲು ಹೋಗಬೇಡಿ. ಸ್ವಲ್ಪ ದಿನ ಅಷ್ಟೇ. ಚಲುವರಾಯಸ್ವಾಮಿ, ಕೃಷ್ಟೇಗೌಡ ಬಂದು ನನ್ನ ಹತ್ರ ನ್ಯಾಯ ಆಡ್ತಿದ್ರು. ಭಾಗದ ನ್ಯಾಯ ಆಡ್ತಿದ್ರು. ನೀವು ಆಡೊದು ಬೇಡ. ನಿಮ್ಮ ನ್ಯಾಯ ನಡೆಯುವುದಿಲ್ಲ. ಇದೆಲ್ಲ ದೆಹಲಿಯಲ್ಲಿ ನಡೆಯಬೇಕು ಎಂದು ಹೇಳಿದ್ದೇನೆ. ದೆಹಲಿಯಲ್ಲಿ ಏನು ಆಗಬೇಕು ಅದು ತೀರ್ಮಾನ ಆಗಿದೆ. ಅದರ ಬಗ್ಗೆ ಚರ್ಚೆ ಬೇಡ, ಇದು 5 ವರ್ಷದ ಸರ್ಕಾರ ಅಲ್ಲ, 10 ವರ್ಷದ ಸರ್ಕಾರ. ನೀವು ಬೆಂಬಲವಾಗಿ ಎಂದು ತಿಳಿಸಿದರು.

ಡಿಕೆ ಶಿವಕುಮಾರ್
ಕಾಂಗ್ರೆಸ್ 'ಒಕ್ಕಲಿಗ' ಅಸ್ತ್ರಕ್ಕೆ BJP ಟಕ್ಕರ್; NDA ಅಭ್ಯರ್ಥಿಗಳಿಂದ ನಿರ್ಮಲಾನಂದ ಶ್ರೀ ಭೇಟಿ!

47 ವರ್ಷಗಳ ನಂತರ ಒಕ್ಕಲಿಗ ವ್ಯಕ್ತಿಗೆ ಟಿಕೆಟ್ ನೀಡಲಾಗಿದೆ. ನಮ್ಮ ಅಭ್ಯರ್ಥಿ ಪಕ್ಷದ ಸಾಮಾನ್ಯ ಕಾರ್ಯಕರ್ತ. ಅವರ ಗೆಲುವಿನ ಜವಾಬ್ದಾರಿ ನಿಮ್ಮ ಮೇಲಿದೆ ಎಂದರು.

ಬಳಿಕ ಹೆಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಪೈಪೋಟಿ ಬದಿಗಿಟ್ಟು ಸಿಎಂ ಮಾಡಿದ್ದೆವು, ಆದರೆ, ಅದನ್ನು ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ, ಈಗ ನಾನು ವಿಷ ಹಾಕಿದ್ದೇನೆ ಎಂದು ಹೇಳುತ್ತಿದ್ದಾರೆ, ಜೆಡಿಎಸ್ ಅನ್ನು ನಾವು ಮುಗಿಸುವ ಅಗತ್ಯವಿಲ್ಲ. ಬಿಜೆಪಿಯೇ ಮುಗಿಸಿಬಿಡುತ್ತದೆ ಎಂದು ಹೇಳಿದರು.

ಹಾಸನದಲ್ಲಿ ಮೊಮ್ಮಗನ ಗೆಲುವನ್ನು ಖಚಿತಪಡಿಸಿಕೊಳ್ಳಲು ದೇವೇಗೌಡರಿಂದ ಸಾಧ್ಯವಿಲ್ಲ. ಅಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜನರೇ ವಿರೋಧ ವ್ಯಕ್ತಪಡಿಸಿದ್ದಾರೆ .ನನ್ನ ಸಹೋದರನ ವಿರುದ್ಧ ಕುಮಾರಸ್ವಾಮಿ ಸ್ಪರ್ಧಿಸಬೇಕಿತ್ತು. ಅಲ್ಲಿ ಶಾಸಕರಾಗಿರಲಿಲ್ಲವೇ? ಸಿಎಸ್ ಪುಟ್ಟರಾಜು ಹೆಸರು ಸುಳಿವು ನೀಡಿ ಇದೀಗ ಮಂಡ್ಯದಿಂದ ಸ್ಪರ್ಧಿಸುತ್ತಿದ್ದಾರೆ. ಅವರ ಪಾಳಯದಲ್ಲಿ ಪಕ್ಷದ ಕಾರ್ಯಕರ್ತರಿಗೆ ಯಾವುದೇ ಬೆಳವಣಿಗೆ ಇಲ್ಲ ಎಂದು ಹೇಳಿದರು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com