ಮತದಾರರೊಂದಿಗೆ 'ಡೀಲ್' ವಿಡಿಯೋ ವೈರಲ್: ಡಿಸಿಎಂ ಡಿಕೆಶಿಯಿಂದ ಅಧಿಕಾರ ದುರ್ಬಳಕೆ ಎಂದ ಬಿಜೆಪಿ

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಹೌಸಿಂಗ್ ಸೊಸೈಟಿಯ ನಿವಾಸಿಗಳ ಮತ ಯಾಚಿಸಿದ ವಿಡಿಯೋವನ್ನು ಹಂಚಿಕೊಂಡ ಬಿಜೆಪಿ ನಾಯಕ ಅಮಿತ್ ಮಾಳವೀಯ.
ಡಿ ಕೆ ಶಿವಕುಮಾರ್
ಡಿ ಕೆ ಶಿವಕುಮಾರ್

ಬೆಂಗಳೂರು: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಹೌಸಿಂಗ್ ಸೊಸೈಟಿಯ ನಿವಾಸಿಗಳ ಮತ ಯಾಚಿಸಿದ ವಿಡಿಯೋವನ್ನು ಹಂಚಿಕೊಂಡ ಬಿಜೆಪಿ ನಾಯಕ ಅಮಿತ್ ಮಾಳವೀಯ ಅವರು, ಡಿಸಿಎಂ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಬುಧವಾರ ಆರೋಪಿಸಿದ್ದಾರೆ.

ವಿಡಿಯೋ ಕ್ಲಿಪ್‌ನಲ್ಲಿ, ಶಿವಕುಮಾರ್ ಅವರು ತಾವು "ವ್ಯವಹಾರ ಒಪ್ಪಂದ"ಕ್ಕಾಗಿ ಬಂದಿದ್ದು, ಹೌಸಿಂಗ್ ಸೊಸೈಟಿಯ 2,510 ಮನೆಗಳ 6,424 ಮತಗಳು ತಮ್ಮ ಅಭ್ಯರ್ಥಿ(ಸಹೋದರ ಡಿ ಕೆ ಸುರೇಶ್ )ಗೆ ಹೋದರೆ ಕಾವೇರಿ ನದಿ ನೀರು ಪೂರೈಕೆ ಮತ್ತು ನಾಗರಿಕ ಸೌಕರ್ಯಗಳ ಅಗತ್ಯಕ್ಕೆ ಸಂಬಂಧಿಸಿದ ಪ್ರಮುಖ ಸಮಸ್ಯೆಗಳನ್ನು ಮೂರು ತಿಂಗಳೊಳಗೆ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.

ವಿಡಿಯೋ ತುಣುಕನ್ನು ಶೇರ್ ಮಾಡಿರುವ ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಮಾಳವಿಯಾ, ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜನರು ಯಾರಿಗೆ ಮತ ಹಾಕಿದರೂ ಅವರಿಗೆ ಸೌಲಭ್ಯಗಳನ್ನು ಒದಗಿಸುವುದು ಸಚಿವರಾಗಿ ನಿಮ್ಮ ಜವಾಬ್ದಾರಿಯಾಗಿದೆ ಎಂದು ತಿರುಗೇಟು ನೀಡಿದ್ದಾರೆ.

ಡಿ ಕೆ ಶಿವಕುಮಾರ್
ಕಾಂಗ್ರೆಸ್ ಮಾಜಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಗೆ ಶೋಭಾ ಕರಂದ್ಲಾಜೆ ಆಫರ್; ಇಂದು ಬಿಜೆಪಿ ಸೇರ್ಪಡೆ

ಕರ್ನಾಟಕದ ಡೆಪ್ಯೂಟಿ ಸಿಎಂ, ಡಿ.ಕೆ.ಶಿವಕುಮಾರ್ ಅವರು ಅಧಿಕಾರ ದುರುಪಯೋಗ ಮಾಡಿಕೊಂಡು, ತಮ್ಮ ಸಹೋದರ ಡಿ.ಕೆ.ಸುರೇಶ್ ಅವರ ಕ್ಷೇತ್ರದಲ್ಲಿ ದೊಡ್ಡ ಹೌಸಿಂಗ್ ಸೊಸೈಟಿಯ ಮತದಾರರ ಸುಲಿಗೆ ಮಾಡುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಕೇಂದ್ರ ಚುನಾವಣಾ ಆಯೋಗವನ್ನು ಟ್ಯಾಗ್ ಮಾಡಿದ ಅವರು, ಈ ಪ್ರಕರಣದಲ್ಲಿ ಬಹು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಮತ್ತು ಬೆದರಿಕೆಯನ್ನು ಗಮನಿಸುವಂತೆ ಒತ್ತಾಯಿಸಿದ್ದಾರೆ.

ಈ ವೀಡಿಯೊಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಅಪಾರ್ಟ್ಮೆಂಟ್ ಅಥವಾ ಇತರೆ ಯಾವುದೇ ನಾಗರಿಕರ ಸಮಸ್ಯೆಗಳನ್ನು ಪರಿಹರಿಸುವುದು ತಮ್ಮ ಕರ್ತವ್ಯ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com