ರಾಜಕೀಯ

PSI ಹಗರಣದ ಪ್ರಮುಖ ಆರೋಪಿ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಭೋಜನ: ಕಾಂಗ್ರೆಸ್ ಕಿಡಿ

PSI ಹಗರಣ ಹಾಗೂ ಪರೀಕ್ಷಾ ಅಕ್ರಮದ ಪ್ರಮುಖ ಆರೋಪಿಯ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಅವರ ಭರ್ಜರಿ ಭೋಜನ ಸವಿದಿದ್ದಾರೆ ಎಂದು ಕಾಂಗ್ರೆಸ್ ಬುಧವಾರ ಆರೋಪಿಸಿದ್ದಾರೆ.

PSI ಹಗರಣದ ಪ್ರಮುಖ ಆರೋಪಿ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಭೋಜನ: ಕಾಂಗ್ರೆಸ್ ಕಿಡಿ
ಆರ್.ಡಿ ಪಾಟೀಲ್ ಜೊತೆಗೆ ಉಮೇಶ್ ಜಾಧವ್ ಭೋಜನದ ಚಿತ್ರ
Published On :

ಬೆಂಗಳೂರು: PSI ಹಗರಣ ಹಾಗೂ ಪರೀಕ್ಷಾ ಅಕ್ರಮದ ಪ್ರಮುಖ ಆರೋಪಿಯ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಅವರ ಭರ್ಜರಿ ಭೋಜನ ಸವಿದಿದ್ದಾರೆ ಎಂದು ಕಾಂಗ್ರೆಸ್ ಬುಧವಾರ ಆರೋಪಿಸಿದ್ದಾರೆ.

ಈ ಕುರಿತ ಫೋಟೋವೊಂದನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, Dear ಬಿಜೆಪಿ ನೀವೇ ಆರ್.ಡಿ ಪಾಟೀಲ್ ನ ರಕ್ಷಕರು, ನೀವೇ ಆತನ ಬ್ಯಾಕ್ ಬೋನ್ ಎನ್ನುವುದು ಮತ್ತೊಮ್ಮೆ ಬಯಲಾಗಿದೆ.

ಕರ್ನಾಟಕ ಕಂಡ ಪ್ರಮುಖ ಹಗರಣದ ರೂವಾರಿಯೊಂದಿಗೆ ಬಿಜೆಪಿಯವರ ಅಕ್ರಮ ಸಂಬಂಧವು ಸಕ್ರಮ ಸಂಬಂಧವಾಗಿ ಬದಲಾಗಿದೆ ಎಂದು ಕಿಡಿಕಾರಿದೆ.

ಬಿವೈ ವಿಜಯೇಂದ್ರ ಅವರೇ, ಪರೀಕ್ಷಾ ಅಕ್ರಮವಾದಾಗ ಆರ್.ಡಿ ಪಾಟೀಲ್ ತಲೆ ಮರೆಸಿಕೊಳ್ಳಲು ಸಹಕರಿಸಿದ್ದು ಯಾರು? ಕೇಶವಕೃಪವೊ? ಜಗನ್ನಾಥ ಭವನವೋ? ಎಂದು ಪ್ರಶ್ನಿಸಿದ್ದು, ಅಕ್ರಮ ದಂಧೆಕೋರನೊಬ್ಬನೊಂದಿಗೆ ಕುಚಿಕು ಕುಚಿಕು ಸಂಬಂಧ ಹೊಂದಿರುವ ಬಿಜೆಪಿ ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಆರೋಪಿಸಿದ್ದಕ್ಕೆ ಇಂದು ಉತ್ತರ ಸಿಕ್ಕಿದೆಯಲ್ಲವೇ? ಎಂದು ಟೀಕಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.