ಕರಡಿ ಸಂಗಣ್ಣ ಕಾಂಗ್ರೆಸ್ ಸೇರ್ಪಡೆ
ಕರಡಿ ಸಂಗಣ್ಣ ಕಾಂಗ್ರೆಸ್ ಸೇರ್ಪಡೆ

ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಕರಡಿ ಸಂಗಣ್ಣ ಕಾಂಗ್ರೆಸ್ ಸೇರ್ಪಡೆ ನಂತರ ಡಿಕೆಶಿ ಹೇಳಿಕೆ

ಸಂಸದ ಸಂಗಣ್ಣ ಕರಡಿ ಅವರು ಲೋಕಸಭಾ ಸದಸ್ಯತ್ವ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ ಬೆನ್ನಲ್ಲೇ, ಬುಧವಾರ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್‌ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.

ಬೆಂಗಳೂರು: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಸಂಸದ ಸಂಗಣ್ಣ ಕರಡಿ ಅವರು ಲೋಕಸಭಾ ಸದಸ್ಯತ್ವ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ ಬೆನ್ನಲ್ಲೇ, ಬುಧವಾರ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್‌ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.

ಸವದಿಯವರು ಹೇಳುತ್ತಿದ್ದರು, ಕರಡಿ ಸಂಗಣ್ಣ ಅವರನ್ನು ನಾನೇ ದಳದಿಂದ ಬಿಜೆಪಿಗೆ ಸೇರಿಸಿದ್ದೆ ಎಂದು. ಸರಳ, ಸಜ್ಜನಿಕೆಯ ನಾಯಕ. ಬಿಜೆಪಿ ಸುಮ್ಮನೆ ಅಬ್ಬರ ಮಾಡುತ್ತಿರುವ ಹೊತ್ತಿನಲ್ಲಿ ಅವರು ಕಾಂಗ್ರೆಸ್ ಸೇರುತ್ತಿದ್ದಾರೆ. ಏಕೆಂದರೆ ಕಾಂಗ್ರೆಸ್ ಪಕ್ಷದ ನೀತಿ, ಸಿದ್ಧಾಂತ, ಕಾರ್ಯಕ್ರಮಗಳನ್ನು ಅವರು ಮೆಚ್ಚಿದ್ದಾರೆ. ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳು ಬಿಜೆಪಿಯನ್ನು ರಾಜ್ಯದಲ್ಲಿ ತೊಳೆದು ಹಾಕುತ್ತಿವೆ. ಬೆಳಗಾವಿಯ ಗಾಂಧಿ ಬಾವಿಯಿಂದ ನೀರನ್ನು ತೆಗೆದು ಕೊಳೆ ತೊಳೆದಂತೆ, ರಾಜ್ಯದ ಜನತೆ ಬಿಜೆಪಿಯನ್ನು ಗುಡಿಸಿ ಹಾಕುತ್ತಾರೆ.

ಕರಡಿ ಸಂಗಣ್ಣ ಅವರು ತಳಮಟ್ಟದ ರಾಜಕಾರಣದಿಂದ ಬೆಳೆದವರು. ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರಾಗಿ ನಂತರ 1999 ರಲ್ಲಿ ಜೆಡಿಯು ಪಕ್ಷದಿಂದ ಶಾಸಕರಾಗಿದ್ದರು. ನಂತರ ಎರಡು ಬಾರಿ ಸಂಸದರಾಗಿದ್ದರು. ಕೊಪ್ಪಳ ಭಾಗದಲ್ಲಿ ಭಾರಿ ಜನಸಂಪರ್ಕ ಹೊಂದಿರುವ ವ್ಯಕ್ತಿ. ಇದೇ ವೇಳೆ ಮಾತನಾಡಿದ ಡಿಕೆ ಶಿವಕುಮಾರ್, ಕಾಂಗ್ರೆಸ್ ಗ್ಯಾರಂಟಿಗಳನ್ನು ಮುಟ್ಟುವುದು ಬಿಜೆಪಿ- ದಳದ ಹಣೆಯಲ್ಲಿ ಬರೆದಿಲ್ಲ. ಇದಕ್ಕೆ ಕಾಂಗ್ರೆಸ್ ಅವಕಾಶ ಕೊಡುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಕರಡಿ ಸಂಗಣ್ಣ ಕಾಂಗ್ರೆಸ್ ಸೇರ್ಪಡೆ
ಕೊಪ್ಪಳ ಸಂಸದ ಕರಡಿ ಸಂಗಣ್ಣ ಬಿಜೆಪಿಗೆ ಗುಡ್ ಬೈ; ನಾಳೆ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ಕೇಂದ್ರದಲ್ಲಿ ಎನ್ ಡಿಎ ಅಧಿಕಾರಕ್ಕೆ ಬಂದರೆ ಗ್ಯಾರಂಟಿಗಳನ್ನು ತೆಗೆದುಹಾಕುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಆದರೆ ಯಡಿಯೂರಪ್ಪ, ಕುಮಾರಸ್ವಾಮಿ, ಅಶೋಕ ಅವರಿಗೆ ಗ್ಯಾರಂಟಿಗಳನ್ನು ಮುಟ್ಟಲು ರಾಜ್ಯದ ಜನ ಅವಕಾಶ ನೀಡುವುದಿಲ್ಲ.

ಕಾಂಗ್ರೆಸ್ ಪಕ್ಷದ ಮೇಲಿನ ಜನರ ಪ್ರೀತಿ ಕಂಡು ಅವರಿಗೆ ಅಸೂಯೆ ಆಗಿದೆ. ಆದ ಕಾರಣ ನಮ್ಮ ತಾಯಂದಿರ ಬಗ್ಗೆ ಮಾತನಾಡುತ್ತಿದ್ದಾರೆ. ತಾಯಂದಿರು ದಾರಿ ತಪ್ಪಿದ್ದಾರೆ ಎಂದು ಹೇಳಿಕೆ ನೀಡಿರುವ ಅವರಿಗೆ ರಾಜ್ಯದ ಜನರೇ ಉತ್ತರ ನೀಡಲಿದ್ದಾರೆ” ಎಂದು ಹೇಳಿದರು.

ಐದು ಬೆರಳು ಸೇರಿ ಕೈ ಮುಷ್ಠಿಯಾಯಿತು, ಐದು ಗ್ಯಾರಂಟಿಗಳು ಸೇರಿ ಕೈ ಗಟ್ಟಿಯಾಯಿತು ಎನ್ನುವುದಕ್ಕೆ ನಿಮ್ಮ ಹೇಳಿಕೆಗಳೇ ಸಾಕ್ಷಿ. ಗೀತಾ ಶಿವರಾಜ್ ಕುಮಾರ್ ಅವರ ನಾಮಪತ್ರ ಸಲ್ಲಿಕೆ ವೇಳೆ ಪಕ್ಷ ಭೇದ ಮರೆತು ಸೇರಿದ್ದ ಜನರನ್ನು ನೋಡಿದ ನಂತರ ಅನಿಸಿತು, ಯಾವುದೇ ಕಾರಣಕ್ಕೂ ಯಡಿಯೂರಪ್ಪ ಅವರ ಸುಪುತ್ರ ರಾಘವೇಂದ್ರ ಗೆಲ್ಲಲು ಸಾಧ್ಯವಿಲ್ಲ . ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಹಾಗೂ ಗ್ಯಾರಂಟಿಗಳ ಅಲೆಯಿದೆ. ಇಡೀ ದೇಶವೇ ಕರ್ನಾಟಕದ ಕಡೆಗೆ ತಿರುಗಿ ನೋಡುತ್ತಿದೆ. ಮಂಗಳವಾರ ಕೇರಳ ರಾಜ್ಯ ಪ್ರವಾಸಕ್ಕೆ ಹೋಗಿದ್ದೆ, ಅಲ್ಲಿಯೂ ಸಹ ಕಾಂಗ್ರೆಸ್ 20 ಸ್ಥಾನಗಳನ್ನು ಗೆಲ್ಲಲಿದೆ.

Advertisement

X
Kannada Prabha
www.kannadaprabha.com