ಮಂಡ್ಯದಲ್ಲಿ ಗೌಡ್ರು ಗದ್ದಲ: ಒಕ್ಕಲಿಗ ಹೃದಯ ಭಾಗದಲ್ಲಿ ಅಧಿಪತ್ಯ ಸ್ಥಾಪಿಸಲು ಡಿಕೆಶಿ-ಎಚ್ ಡಿಕೆ ಪೈಪೋಟಿ!

ಒಕ್ಕಲಿಗ ದಿಗ್ಗಜರಾದ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ಅಭ್ಯರ್ಥಿ ಹೆಚ್ ಡಿ ಕುಮಾರಸ್ವಾಮಿ ಮತ್ ತುಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ತಮ್ಮ ಅಧಿಪತ್ಯ ಸ್ಥಾಪಿಸಲು ಮುಂದಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮೈಸೂರು: ರಾಜ್ಯದಲ್ಲಿ ಬಿಸಿಲಿನ ತಾಪ 39 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ ಅದೇ ರೀತಿ, ಮಂಡ್ಯದಲ್ಲಿ 'ಗೌಡರ ಗದ್ದಲ' ವು ಕೂಡ ಉತ್ತುಂಗಕ್ಕೇರಿದೆ. ಒಕ್ಕಲಿಗ ದಿಗ್ಗಜರಾದ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ಅಭ್ಯರ್ಥಿ ಹೆಚ್ ಡಿ ಕುಮಾರಸ್ವಾಮಿ ಮತ್ ತುಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ತಮ್ಮ ಅಧಿಪತ್ಯ ಸ್ಥಾಪಿಸಲು ಮುಂದಾಗಿದ್ದಾರೆ.

2019ರ ಲೋಕಸಭೆ ಚುನಾವಣೆಯಲ್ಲಿ ಅವರ ಕುಮಾರಸ್ವಾಮಿ ಪುತ್ರ ನಿಖಿಲ್ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧ 1.25 ಲಕ್ಷ ಮತಗಳ ಅಂತರದಿಂದ ಸೋತಿದ್ದರು, ಹೀಗಾಗಿ ಮಂಡ್ಯದಿಂದ ಕುಮಾರಸ್ವಾಮಿ ಮೊದಲ ಬಾರಿಗೆ ಕಣಕ್ಕೆ ಇಳಿದಿದ್ದಾರೆ. ಆದರೆ ಬಿಜೆಪಿಯೊಂದಿಗೆ ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿರುವುದರಿಂದ, ರಾಜಕೀಯ ಸಮತೋಲನ ಬದಲಾಗಿದೆ.

223 ಕೋಟಿ ಮೌಲ್ಯದ ಆಸ್ತಿಯನ್ನು ಘೋಷಿಸಿರುವ ‘ಸ್ಟಾರ್ ಚಂದ್ರು’ ಎಂದೇ ಖ್ಯಾತರಾಗಿರುವ ವೆಂಕಟರಮಣೇಗೌಡ ಕಾಂಗ್ರೆಸ್‌ನ ಶ್ರೀಮಂತ ಅಭ್ಯರ್ಥಿಗಳಲ್ಲಿ ಒಬ್ಬರಾಗಿದ್ದು ಕುಮಾರಸ್ವಾಮಿ ವಿರುದ್ಧ ಸ್ಪರ್ಧಿಸಿದ್ದಾರೆ.

ಬರದಿಂದ ರೈತರು ಎದುರಿಸುತ್ತಿರುವ ಸಮಸ್ಯೆಗಳು, ಹಾನಿಗೊಳಗಾದ ಬೆಳೆಗಳು ಮತ್ತು ನೀರಾವರಿ ಕಾಲುವೆಗಳ ಬಗ್ಗೆ ಜೆಡಿಎಸ್ ಮುಖಂಡರು ಮಾತನಾಡುತ್ತಿದ್ದಾರೆ ಮತ್ತು ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಸಾಂದರ್ಭಿಕ ಚಿತ್ರ
ಬೆಂಗಳೂರು ಸುತ್ತಮುತ್ತವೇ ದೇವೇಗೌಡ ಕುಟುಂಬದ ಆಸ್ತಿ ಸಾವಿರ ಎಕರೆ ಇದೆ: ಕುಮಾರಸ್ವಾಮಿ ವಿರುದ್ಧ ಡಿಕೆಶಿ ಆಕ್ರೋಶ

ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತ ನಂತರ, ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ಗೆ ಅದರಲ್ಲೂ ಮಂಡ್ಯದಲ್ಲಿ ಮಾಡು ಇಲ್ಲವೇ ಮಡಿ ಎಂಬ ಹೋರಾಟವಾಗಿದೆ. ಮಂಡ್ಯದ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಏಳರಲ್ಲಿ ಸೋತಿರುವುದರಿಂದ ಲೋಕಸಭೆ ಚುನಾವಣೆಯಲ್ಲಿ ಗೆಲುವು ಪಕ್ಷದ ಪುನರುಜ್ಜೀವನದ ಭರವಸೆ ನೀಡಲಿದೆ. ಇತ್ತೀಚೆಗಿನ ವಿಧಾನ ಪರಿಷತ್ ಚುನಾವಣೆಯಲ್ಲೂ ಜೆಡಿಎಸ್ ಸೋತಿತ್ತು.

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಬೆಂಗಳೂರು ಗ್ರಾಮಾಂತರ, ಹಾಸನ, ತುಮಕೂರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಪ್ರಚಾರ ಮಾಡುತ್ತಿದ್ದರೂ, ಕುಮಾರಸ್ವಾಮಿ ಅವರು ಪ್ರಾದೇಶಿಕ ಪಕ್ಷದ ಸ್ಟಾರ್ ಪ್ರಚಾರಕರಾಗಿದ್ದಾರೆ. ಜೆಡಿಎಸ್ ಅಭ್ಯರ್ಥಿಗಳಲ್ಲದೆ ಬಿಜೆಪಿ ಅಭ್ಯರ್ಥಿಗಳ ಪರವೂ ಪ್ರಚಾರ ನಡೆಸುತ್ತಿದ್ದಾರೆ. ಆದರೆ, ಅವರು ಇನ್ನೂ ಮಂಡ್ಯ ಒಳನಾಡಿಗೆ ತಲುಪಿಲ್ಲ.

ಕುಮಾರಸ್ವಾಮಿ ಅವರು ಸ್ಟಾರ್ ಚಂದ್ರು ಹಣ ತುಂಬಿರುವ ಚೀಲ ಎಂದು ಆರೋಪಿಸಿದರೆ, ಕಾಂಗ್ರೆಸ್ ಕುಮಾರಸ್ವಾಮಿ ಅವರನ್ನು ಹೊರಗಿನವರು ಎಂದು ಬಿಂಬಿಸಿತು. ಕುಮಾರಸ್ವಾಮಿಯಷ್ಟು ಅನುಭವ ಸ್ಟಾರ್ ಚಂದ್ರುಗೆ ಇಲ್ಲ. ಆದರೂ ಸ್ಟಾರ್ ಚಂದ್ರು ಕುಮಾರಸ್ವಾಮಿಗೆ ಪೈಪೋಟಿ ನೀಡಲಿದ್ದಾರೆ.

ಸಾಂದರ್ಭಿಕ ಚಿತ್ರ
ಲೋಕ ಸಮರ 2024: ಸ್ಟಾರ್ ಚಂದ್ರು ಪರ ಮಂಡ್ಯ ಅಖಾಡಕ್ಕೆ ಮೋಹಕ ತಾರೆ ರಮ್ಯಾ ಎಂಟ್ರಿ..!

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕ್ಷೇತ್ರದಲ್ಲಿ ವ್ಯಾಪಕ ಪ್ರಚಾರ ನಡೆಸುತ್ತಿದ್ದು, ಇದು ರಾಜ್ಯದ ಒಕ್ಕಲಿಗ ನಾಯಕತ್ವದ ಭವಿಷ್ಯವನ್ನು ನಿರ್ಧರಿಸಲಿದೆ. ಅಲ್ಪಸಂಖ್ಯಾತರು, ದಲಿತರು ಮತ್ತು ಹಿಂದುಳಿದ ವರ್ಗಗಳನ್ನು ಒಳಗೊಂಡಂತೆ ಅವರು 9 ಲಕ್ಷಕ್ಕೂ ಹೆಚ್ಚು ಸೂಕ್ಷ್ಮ ಸಮುದಾಯಗಳನ್ನು ಸಹ ಅವರು ತಲುಪುತ್ತಿದ್ದಾರೆ.

ಕುಮಾರಸ್ವಾಮಿ ಮಂಡ್ಯ ಗೆಲ್ಲಲು ವಿಫಲರಾದರೆ, ಜೆಡಿಎಸ್‌ನ ನಿರೀಕ್ಷೆ ಹುಸಿಯಾಗಲಿದೆ. ಪ್ರಧಾನಿಯೊಂದಿಗೆ ಚೌಕಾಶಿ ಮಾಡಲು ಸಾಧ್ಯವಾಗುವುದಿಲ್ಲ, ಕುಮಾರಸ್ವಾಮಿ ಮುಂದಿನ ವಿಧಾನಸಭೆ ಚುನಾವಣೆವರೆಗೂ ಮೈತ್ರಿ ವಿಸ್ತರಿಸಲು ಅವರು ಉತ್ಸುಕರಾಗಿದ್ದಾರೆ. ಆದರೆ ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಏನೆಲ್ಲಾ ನಡೆಯಲಿದೆ ಎಂಬುದನ್ನು ಕಾದು ನೋಡಬೇಕು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com