ಲೋಕಸಭೆ ಚುನಾವಣೆ: ಕೊಡಗಿನಲ್ಲಿ ಹೊಸ ತಿರುವು ಪಡೆದ ಕಾಂಗ್ರೆಸ್‌ನ ಒಕ್ಕಲಿಗ ಅಸ್ತ್ರ

ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ರಾಜ ವಂಶಸ್ಥ ಯದುವೀರ್ ಒಡೆಯರ್ ವಿರುದ್ಧ ಕಾಂಗ್ರೆಸ್ ಬಳಸುತ್ತಿರುವ ಒಕ್ಕಲಿಗ ಅಸ್ತ್ರ ಕೊಡಗಿನಲ್ಲಿ ಹೊಸ ತಿರುವು ಪಡೆದುಕೊಂಡಿದೆ.
ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್
ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್

ಮಡಿಕೇರಿ: ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ರಾಜ ವಂಶಸ್ಥ ಯದುವೀರ್ ಒಡೆಯರ್ ವಿರುದ್ಧ ಕಾಂಗ್ರೆಸ್ ಬಳಸುತ್ತಿರುವ ಒಕ್ಕಲಿಗ ಅಸ್ತ್ರ ಕೊಡಗಿನಲ್ಲಿ ಹೊಸ ತಿರುವು ಪಡೆದುಕೊಂಡಿದ್ದು, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರ ಪರ ಪ್ರಚಾರದಲ್ಲಿ ತೊಡಗುವುದಿಲ್ಲ ಎಂದು ಜಿಲ್ಲಾ ಗೌಡ ಸಮಾಜ ಒಕ್ಕೂಟ ಗುರುವಾರ ಸ್ಪಷ್ಟಪಡಿಸಿದೆ.

ಇತ್ತೀಚೆಗೆ ಮಡಿಕೇರಿಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಇತರ ಕಾಂಗ್ರೆಸ್ ಮುಖಂಡರು ಭೇಟಿ ನೀಡಿದ ಸಂದರ್ಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಕೆ.ವೆಂಕಟೇಶ್ ನೇತೃತ್ವದಲ್ಲಿ ಮಡಿಕೇರಿಯ ಗೌಡ ಸಮಾಜದಲ್ಲಿ ಗೌಡ ಸಮಾಜದ ಮುಖಂಡರು ಹಾಗೂ ಒಕ್ಕಲಿಗರ ಜತೆ ಸಭೆ ನಡೆಸಿದ್ದರು.

ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಹಾಗೂ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್, ಡಿಕೆ ಶಿವಕುಮಾರ್ ಮತ್ತು ವೆಂಕಟೇಶ್ ಅವರು ಕಾಂಗ್ರೆಸ್ ಬೆಂಬಲಿಸುವಂತೆ ಗೌಡ ಸಮುದಾಯವನ್ನು ಒತ್ತಾಯಿಸಿದ್ದರು. 47 ವರ್ಷಗಳ ನಂತರ ಮೈಸೂರು-ಕೊಡಗು ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಒಕ್ಕಲಿಗ ಅಭ್ಯರ್ಥಿಗೆ ಅವಕಾಶ ನೀಡಲಾಗಿದೆ ಎಂದು ಡಿಸಿಎಂ ಒಕ್ಕಲಿಗ ಅಸ್ತ್ರ ಬಳಸಿದ್ದರು ಮತ್ತು ಲಕ್ಷ್ಮಣ್ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದ್ದರು. ಸಭೆಯಲ್ಲಿ ಕೊಡಗು ಗೌಡ ಸಮಾಜ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ ಭಾಗವಹಿಸಿ ಕಾಂಗ್ರೆಸ್ ಮುಖಂಡರೊಂದಿಗೆ ವೇದಿಕೆ ಹಂಚಿಕೊಂಡಿದ್ದರು.

ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್
ರಾಜವಂಶಸ್ಥ V/S ಜನಸಾಮಾನ್ಯ: ಮೈಸೂರು-ಕೊಡಗಿನಲ್ಲಿ ನಿರ್ಣಾಯಕವಾಗುತ್ತಾ ಒಕ್ಕಲಿಗ ಮತಗಳು?

ಆದರೆ, ಸೂರ್ತಲೆ ಸೋಮಣ್ಣ ಈಗ ಕಾಂಗ್ರೆಸ್‌ಗೆ ಬೆಂಬಲ ನಿರಾಕರಿಸಿದ್ದಾರೆ. ಪತ್ರಿಕಾ ಪ್ರಕಟಣೆಯಲ್ಲಿ, ಸೋಮಣ್ಣ ಅವರು ಗೌಡ ಸಮುದಾಯಕ್ಕೆ ಕಾಂಗ್ರೆಸ್ ಬೆಂಬಲಿಸುವಂತೆ ಕರೆ ನೀಡಿದ್ದಾರೆ ಎಂಬ ಜಿಲ್ಲಾ ಕಾರ್ಯದರ್ಶಿ ಮಹೇಶ್ ಜೈನಿ ಸೇರಿದಂತೆ ಕೆಲವು ಬಿಜೆಪಿ ಕಾರ್ಯಕರ್ತರ ಹೇಳಿಕೆಯನ್ನು ಅವರು ತಳ್ಳಿಹಾಕಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಗೌರವ ಸೂಚಕವಾಗಿ ಗೌಡ ಸಮಾಜದಲ್ಲಿ ನಡೆದ ಸಭೆಯಲ್ಲಿ ನಾನು ಭಾಗವಹಿಸಿದ್ದೆ. ನಾನು ಯಾವುದೇ ರಾಜಕೀಯ ಪಕ್ಷದ ಬೆಂಬಲಿಗನಲ್ಲ ಎಂದು ಅವರು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಡಿಸಿಎಂ ಭೇಟಿ ಸಂದರ್ಭದಲ್ಲಿ ಗೌಡ ಸಮಾಜದಲ್ಲಿ ಗೌಡರ ಕ್ರಿಕೆಟ್ ಕಪ್ ಟ್ರೋಫಿ ಬಿಡುಗಡೆ ಕಾರ್ಯಕ್ರಮವನ್ನು ನಿಗದಿಪಡಿಸಲಾಗಿತ್ತು ಮತ್ತು ಅದಕ್ಕಾಗಿ ತಮ್ಮನ್ನು ಆಹ್ವಾನಿಸಲಾಗಿತ್ತು ಎಂದು ಅವರು ಹೇಳಿದ್ದಾರೆ. “ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ್ ಅವರನ್ನು ಬೆಂಬಲಿಸುವಂತೆ ನಾನು ಸಮುದಾಯವನ್ನು ಒತ್ತಾಯಿಸಿಲ್ಲ. ಸಮುದಾಯದ ಮತದಾರರು ವಿದ್ಯಾವಂತರು ಮತ್ತು ಅವರು ತಮ್ಮದೇ ಆದ ನಿರ್ಧಾರವನ್ನು ತೆಗೆದುಕೊಳ್ಳಬಹುದು. ನಾನು ಕಾಂಗ್ರೆಸ್‌ಗೆ ಬೆಂಬಲ ನೀಡುತ್ತೇನೆ ಎಂದು ಬಿಜೆಪಿ ಕಾರ್ಯಕರ್ತನೊಬ್ಬ ಸುಳ್ಳು ಆರೋಪ ಮಾಡಿದ್ದಾನೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com