ಮೈಸೂರಿನಲ್ಲಿ ಒಕ್ಕಲಿಗರು ಸುರಕ್ಷಿತರಲ್ಲ ಎಂದು ಹೇಳುವ ಮೂಲಕ ಡಿಕೆಶಿ ಸಿದ್ದರಾಮಯ್ಯರನ್ನು ಟಾರ್ಗೆಟ್ ಮಾಡಿದ್ದಾರೆ: HDK

ಮೈಸೂರಿನಲ್ಲಿ ಒಕ್ಕಲಿಗರು ಸುರಕ್ಷಿತರಲ್ಲ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬುಧವಾರ ಹೇಳಿದರು.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ

ಮೈಸೂರು: ಮೈಸೂರಿನಲ್ಲಿ ಒಕ್ಕಲಿಗರು ಸುರಕ್ಷಿತರಲ್ಲ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬುಧವಾರ ಹೇಳಿದರು.

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಒಕ್ಕಲಿಗರಿಗೆ ಭದ್ರತೆ ಇಲ್ಲ ಎನ್ನುವ ಮೂಲಕ ಶಿವಕುಮಾರ್, ಸಿದ್ದರಾಮಯ್ಯನವರಿಂದ ಒಕ್ಕಲಿಗರಿಗೆ ರಕ್ಷಣೆ ಇಲ್ಲ ಎಂದು ಹೇಳಿದ್ದಾರೆ. ಹೇಳಿಕೆ ಹಿಂದಿನ ಅರ್ಥವನ್ನು ಜನರು ಅರ್ಥ ಮಾಡಿಕೊಂಡಿದ್ದಾರೆ. ಹೀಗಾಗಿ ಶೇ.90 ರಷ್ಟು ಒಕ್ಕಲಿಗರು ಬಿಜೆಪಿ-ಜೆಡಿ(ಎಸ್) ಮೈತ್ರಿಗೆ ಒಲವು ತೋರುತ್ತಿದ್ದಾರೆಂದು ಹೇಳಿದರು.

ಯಾವುದೇ ಸಮುದಾಯದ ಬೆಳವಣಿಗೆಯನ್ನು ಸಿದ್ದರಾಮಯ್ಯ ಸಹಿಸುವುದಿಲ್ಲ. ಮುಖ್ಯಮಂತ್ರಿಯಾಗಲು ಅಡ್ಡಿಯಾಗಿದ್ದ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಅವರನ್ನು ಸೋಲಿಸಿದವರು ಯಾರು? ಈಗಿನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ 2016ರಲ್ಲಿ ಸಿಎಂ ಆಗುವ ಅವಕಾಶ ಸಿಕ್ಕಾಗ ಖರ್ಗೆ ಅವರನ್ನು ಕೇಂದ್ರಕ್ಕೆ ಕರೆಸದಿದ್ದರೆ ಬಿಜೆಪಿ ಸೇರುತ್ತೇನೆ ಎಂದು ಕಾಂಗ್ರೆಸ್ ಹೈಕಮಾಂಡ್‌ಗೆ ಬೆದರಿಕೆ ಹಾಕಿದ್ದವರು ಯಾರು ? ಎಂದು ಪ್ರಶ್ನಿಸಿದರು.

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ
ರಾಜವಂಶಸ್ಥ V/S ಜನಸಾಮಾನ್ಯ: ಮೈಸೂರು-ಕೊಡಗಿನಲ್ಲಿ ನಿರ್ಣಾಯಕವಾಗುತ್ತಾ ಒಕ್ಕಲಿಗ ಮತಗಳು?

ಮಂಡ್ಯ ಕ್ಷೇತ್ರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ಕುರಿತು ಪ್ರತಿಕ್ರಿಯಿಸಿ, 'ಅವರ 45 ನಿಮಿಷಗಳ ಭಾಷಣದಿಂದ ಹೆಚ್ಚಿನ ಬದಲಾವಣೆಯಾಗುವುದಿಲ್ಲ ಎಂದು ವ್ಯಂಗ್ಯವಾಡಿದರು.

ನನ್ನ ಸೋಲು ಗೆಲುವು ಶಿವಕುಮಾರ್ ಕೈಯಲ್ಲಿದೆಯೇ? ಈಗ ಕಾಂಗ್ರೆಸ್‌ಗೆ ಕುಮಾರಸ್ವಾಮಿಯೇ ಪ್ರಮುಖ ಗುರಿಯಾಗಿರುವಂಕಿಗೆ, ಹಣದ ಬಲದಿಂದ ಅವರು ಧೈರ್ಯದಿಂದ ಮಾತನಾಡುತ್ತಿದ್ದಾರೆ. ಆದರೆ, ಮಂಡ್ಯ ಜನರನ್ನು ಹಣದಿಂದ ಖರೀದಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಫೋನ್ ಕದ್ದಾಲಿಕೆ ಆರೋಪ ಕುರಿತು ಮಾತನಾಡಿ, ಆದಿಚುಂಚನಗಿರಿ ಮಠಾಧೀಶ ನಿರ್ಮಲಾನಂದನಾಥ ಸ್ವಾಮಿ ಅವರ ಫೋನ್ ಅನ್ನು ನಾನೇಕೆ ಕದ್ದಾಲಿಕೆ ಮಾಡಲಿ? ನನಗೆ ಅನುಮಾನವಿದ್ದರೆ ಅವರ ಜೊತೆಯಲ್ಲಿ ಅಮೇರಿಕಾಕ್ಕೆ ಯಾಕೆ ಹೋಗುತ್ತಿದ್ದೆ? ಜೆಡಿ(ಎಸ್)-ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಯಾರೂ ಹೇಳಿರಲಿಲ್ಲ. ನನ್ನನ್ನು ಸಂತೋಷದಿಂದ ಕಳುಹಿಸಿದ್ದರು. ಜೆಡಿ(ಎಸ್)-ಕಾಂಗ್ರೆಸ್ ಸಮ್ಮಿಶ್ರ ಸರಕಾರ ರಚನೆಯಾದ 15 ದಿನಗಳಲ್ಲೇ ಶಿವಕುಮಾರ್ ಮತ್ತು ರಮೇಶ್ ಜಾರಕಿಹೊಳಿ ನಡುವೆ ಜಟಾಪಟಿ ಶುರುವಾಗಿದ್ದು ಯಾರಿಗಾಗಿ? ಅವರೇ ಹೇಳಲಿ ಎಂದು ಸವಾಲು ಹಾಕಿದರು.

1996ರಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದಾಗ ಪಿಜಿ ಆರ್ ಸಿಂಧ್ಯಾ ಅವರಿಗೆ ಕಪಾಳಮೋಕ್ಷ ಮಾಡಿದ್ದೇನೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದರು. ಶಿವಕುಮಾರ್ ಅವರದ್ದು ಅಂತಹ ನಡತೆ. ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಆದ ಬದಲಾವಣೆ ನೋಡಿ ಶಿವಕುಮಾರ್ ಅವರ ಭಾಷೆಯೇ ಬದಲಾಗಿದೆ. ಚುನಾವಣೆ ಮುಗಿಯುವವರೆಗೂ ಇದೇ ರೀತಿ ಇರಲಿದೆ. ನಂರ ಎಲ್ಲವೂ ಯಥಾಸ್ಥಿತಿಗೆ ಬರಲಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com