ಬೆಂಗಳೂರಿನ ಮೊದಲ ಮಹಿಳಾ ಸಂಸದೆಯಾಗಿ ಇತಿಹಾಸ ನಿರ್ಮಿಸುವರೇ ಸೌಮ್ಯಾ ರೆಡ್ಡಿ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇದುವರೆಗೂ ಒಬ್ಬ ಮಹಿಳಾ ಸಂಸದೆ ಆಯ್ಕೆಯಾಗಿಲ್ಲ, ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್‌ನ ಸೌಮ್ಯಾ ರೆಡ್ಡಿ ಇತಿಹಾಸ ನಿರ್ಮಿಸಲು ಬಯಸಿದ್ದಾರೆ.
ಸೌಮ್ಯಾ ರೆಡ್ಡಿ
ಸೌಮ್ಯಾ ರೆಡ್ಡಿ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇದುವರೆಗೂ ಒಬ್ಬ ಮಹಿಳಾ ಸಂಸದೆ ಆಯ್ಕೆಯಾಗಿಲ್ಲ, ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್‌ನ ಸೌಮ್ಯಾ ರೆಡ್ಡಿ ಇತಿಹಾಸ ನಿರ್ಮಿಸಲು ಬಯಸಿದ್ದಾರೆ.

ಜಯನಗರದ ಶಾಸಕರಾಗಿ ಸೇವೆ ಸಲ್ಲಿಸಿದ್ದ 41 ವರ್ಷದ ಸೌಮ್ಯಾ ರೆಡ್ಡಿಗೆ ರಾಜಕೀಯ ಹೊಸದೇನಲ್ಲ, ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ಜ ಸೌಮ್ಯಾ ರೆಡ್ಡಿ ಕೇವಲ 16 ಮತಗಳ ಅಂತರದಿಂದ ಸೋತಿದ್ದರು. ನಂತರ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕಣಕ್ಕಿಳಿದಿದ್ದಾರೆ.

ಬೆಂಗಳೂರು ದಕ್ಷಿಣ ಬಿಜೆಪಿ ಭದ್ರಕೋಟೆಯಾಗಿದೆ. ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದ ದಿವಂಗತ ಎಚ್ ಎನ್ ಅನಂತ್ ಕುಮಾರ್ ಅವರು 1996ರಿಂದ ಸತತ ಆರು ಅವಧಿಗೆ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಹೀಗಿದ್ದರೂ ಕಾಂಗ್ರೆಸ್ ನಾಯಕ ಮತ್ತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯಾ ವಿಚಲಿತರಾಗಿಲ್ಲ.

ಬೆಂಗಳೂರು ದಕ್ಷಿಣ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಹರಡಿಕೊಂಡಿದ್ದು 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಐದರಲ್ಲಿ ಮತ್ತು ಕಾಂಗ್ರೆಸ್ ಮೂರರಲ್ಲಿ ಗೆದ್ದಿತ್ತು. ಕಳೆದ ಐದು ವರ್ಷಗಳಲ್ಲಿ ಹಾಲಿ ಸಂಸದ (ಸೂರ್ಯ) ಬಗ್ಗೆ ಜನರು ಅಸಮಾಧಾನಗೊಂಡಿದ್ದಾರೆ ಮತ್ತು ನಿರಾಶೆಗೊಂಡಿದ್ದಾರೆ ಎಂದು ಸೌಮ್ಯಾ ರೆಡ್ಡಿ ಹೇಳಿದ್ದಾರೆ. ಕ್ಷೇತ್ರದ ಜನತೆಗೆ ಅವರು ಲಭ್ಯವಿಲ್ಲ ಜೊತೆಗೆ ಕರ್ನಾಟಕದ ಪರವಾಗಿ ಸಂಸತ್ತಿನಲ್ಲಿ ಮಾತನಾಡಲಿಲ್ಲ ಎಂದು ಆರೋಪಿಸಿದ್ದಾರೆ.

ಸೌಮ್ಯಾ ರೆಡ್ಡಿ
ನೀತಿ ಸಂಹಿತೆ ಉಲ್ಲಂಘನೆ ಆರೋಪ: ಸೌಮ್ಯಾ ರೆಡ್ಡಿ ಮತ್ತಿತರರ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಈ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸದಲ್ಲಿರುವ ಸೌಮ್ಯಾ, ಶಾಸಕಿಯಾಗಿ ತಮ್ಮ ಕೆಲಸವನ್ನು ಜನರು ನೋಡಿದ್ದಾರೆ. ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ನೇತೃತ್ವದ ಸರ್ಕಾರದಿಂದ ಜನತೆ ತುಂಬಾ ಸಂತೋಷವಾಗಿದ್ದಾರೆ ಎಂದು ಹೇಳಿದರು. ಮಹಿಳಾ ಅಭ್ಯರ್ಥಿಗಳು ಎದುರಿಸುತ್ತಿರುವ ಸವಾಲುಗಳ ಕುರಿತು, ಇದು ಪಿತೃಪ್ರಭುತ್ವದ ಜಗತ್ತು ಮತ್ತು ಅದಕ್ಕಾಗಿಯೇ ತಾನು ಚುನಾವಣಾ ರಾಜಕೀಯಕ್ಕೆ ಬಂದಿದ್ದೇನೆ ಎಂದು ಹೇಳಿದರು. ಮಹಿಳಾ ಪ್ರಾತಿನಿಧ್ಯದ ಅಗತ್ಯವಿದೆ ಎಂದು ಅವರು ಹೇಳಿದರು. ಜನರು, ಪಕ್ಷದ ಕಾರ್ಯಕರ್ತರು ಮತ್ತು ಚುನಾಯಿತ ಪ್ರತಿನಿಧಿಗಳು ಹೆಚ್ಚಿನ ಬೆಂಬಲ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನಿಂದ ನಾವು ಎಂದಿಗೂ ಒಬ್ಬ ಮಹಿಳಾ ಸಂಸದರನ್ನು ಹೊಂದಿಲ್ಲ ಮತ್ತು ಸಂಸದರಾಗಿ ನಿಮ್ಮ ಕೆಲಸಕ್ಕೆ ನೀವು ನ್ಯಾಯ ಸಲ್ಲಿಸುತ್ತೀರಿ ಎಂದು ನಮಗೆ ಖಚಿತವಾಗಿದೆ, ಆದ್ದರಿಂದ ನಾವು ನಿಮ್ಮನ್ನು ಖಂಡಿತವಾಗಿ ಬೆಂಬಲಿಸುತ್ತೇವೆ. ಜನರು ಸಹ ಅಪಾರ ಪ್ರಮಾಣದಲ್ಲಿ ನನ್ನನ್ನು ಮುಕ್ತವಾಗಿ ಸ್ವಾಗತಿಸುತ್ತಿದ್ದಾರೆ ಎಂದಿದ್ದಾರೆ. ಒಬ್ಬ ಪ್ರಮುಖ ನಾಯಕನ ಮಗ ಅಥವಾ ಮಗಳಾಗಿರುವುದು ಯಾವುದೇ ಅಭ್ಯರ್ಥಿಗೆ ಒಂದು ನಿರ್ದಿಷ್ಟ ಮಟ್ಟಕ್ಕೆ ಪ್ರಯೋಜನವನ್ನು ನೀಡುತ್ತದೆ. ಆದರೆ ಅದೇ ಸಮಯದಲ್ಲಿ ಜನರು ಅಭ್ಯರ್ಥಿಯನ್ನು ನೋಡುತ್ತಾರೆ ಮತ್ತು ಅವರು ಪ್ರಬುದ್ಧರೇ, ಸಮರ್ಥರಾಗಿದ್ದಾರೆಯೇ ಎಂಬುದನ್ನು ಗಮನಿಸುತ್ತಾರೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com