ಇಂದು ಹುಬ್ಬಳ್ಳಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಕಾರ್ಯಕ್ರಮ: ನೇಹಾ ಹಿರೇಮಠ್ ನಿವಾಸಕ್ಕೆ ಭೇಟಿ

ಜೆ ಪಿ ನಡ್ಡಾ(ಸಂಗ್ರಹ ಚಿತ್ರ)
ಜೆ ಪಿ ನಡ್ಡಾ(ಸಂಗ್ರಹ ಚಿತ್ರ)

ಹುಬ್ಬಳ್ಳಿ: ಲೋಕಸಭೆ ಚುನಾವಣೆ 2024ರ ಚುನಾವಣಾ ಪ್ರಕ್ರಿಯೆಯಲ್ಲಿ ಕರ್ನಾಟಕದಲ್ಲಿ ಮೊದಲ ಹಂತದ ಮತದಾನಕ್ಕೆ ಇನ್ನು ಐದು ದಿನಗಳು ಬಾಕಿ ಉಳಿದಿರುವುದು. ಈ ಸಂದರ್ಭದಲ್ಲಿ ರಾಜ್ಯದ ವಾಣಿಜ್ಯ ನಗರಿ ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ವಿದ್ಯಾರ್ಥಿನಿ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನಿರಂಜನ ಹಿರೇಮಠ ಅವರ 24 ವರ್ಷದ ಪುತ್ರಿ ನೇಹಾ ಹಿರೇಮಠರ ಕೊಲೆಯಾಗಿದ್ದು, ರಾಜ್ಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.

ಕೊಲೆ ಪ್ರಕರಣ ಖಂಡಿಸಿ ಮಠಾಧೀಶರು ಮತ್ತು ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ರಾಜಕೀಯ ನಾಯಕರು ಒಬ್ಬೊಬ್ಬರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ. ಈ ಮಧ್ಯೆ ಪ್ರಮುಖ ರಾಷ್ಟ್ರೀಯ ಪಕ್ಷ ಬಿಜೆಪಿಯ ಅಧ್ಯಕ್ಷರು ಇಂದು ಭಾನುವಾರ ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ.

ಜೆ ಪಿ ನಡ್ಡಾ(ಸಂಗ್ರಹ ಚಿತ್ರ)
ನೇಹಾ- ಫಯಾಜ್ ಪ್ರೀತಿಸುತ್ತಿದ್ರು.. ತಾಯಿ ಮುಮ್ತಾಜ್ ಹೇಳಿಕೆ, ಅಲ್ಲಗಳೆದ ನೇಹಾ ತಾಯಿ!

ನಡ್ಡಾ ಹುಬ್ಬಳ್ಳಿ ಭೇಟಿ ವಿವರ ಹೀಗಿದೆ: ಇಂದು ಹುಬ್ಬಳ್ಳಿಗೆ ಆಗಮಿಸುತ್ತಿರುವ ಜೆಪಿ ನಡ್ಡಾ ವಿವಿಧ ಪ್ರಚಾರ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು ಮಧ್ಯಾಹ್ನ 2 ಗಂಟೆಗೆ ಹುಬ್ಬಳ್ಳಿಗೆ ಆಗಮಿಸಲಿದ್ದು, ಮಧ್ಯಾಹ್ನ 2 ರಿಂದ ರಾತ್ರಿ 10 ಗಂಟೆವರೆಗೂ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. 3 ಗಂಟೆಗೆ ಹುಬ್ಬಳ್ಳಿಯ ಡೆನಿಸನ್ ಹೋಟೆಲ್​​ನಲ್ಲಿ ವಿವಿಧ ಸಮುದಾಯದ ಮುಖಂಡರೊಂದಿಗೆ ಸಭೆ ಮಾಡಲಿದ್ದಾರೆ.

ವಿದ್ಯಾನಗರದ ಸಾಖರೆ ಶಾಲೆಯಲ್ಲಿ ಪ್ರಚಾರ ಸಭೆಯಲ್ಲಿ ಭಾಗಿಯಾಗಲಿರುವ ನಡ್ಡಾ, ಪ್ರಹ್ಲಾದ್ ಜೋಶಿ ಪರ ಮತಯಾಚನೆ ಮಾಡಲಿದ್ದಾರೆ. 5 ಗಂಟೆಗೆ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ರಾತ್ರಿ 9 ಗಂಟೆಗೆ ಡೆನಿಸನ್ ಹೋಟೆಲ್​​ನಲ್ಲಿ ಕೋರ್ ಕಮೀಟಿ ಸಭೆ ಮಾಡಲಿದ್ದಾರೆ.

ಈ ಸಂದರ್ಭದಲ್ಲಿ ಜೆ ಪಿ ನಡ್ಡಾ ಸೇರಿದಂತೆ ಬಿಜೆಪಿ ನಾಯಕರು ನೇಹಾ ಹಿರೇಮಠ್ ಅವರ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಲಿದ್ದಾರೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com