ಲೋಕಸಮರ 2024: ಏಪ್ರಿಲ್ 24ರಿಂದ ಬೆಳಗಾವಿ, ಚಿಕ್ಕೋಡಿ ಸೇರಿ ಉತ್ತರ ಕರ್ನಾಟಕದಲ್ಲಿ ಸಿಎಂ ಪ್ರಚಾರ, ರಂಗೇರಲಿದೆ ಚುನಾವಣೆ ಕಣ

ಬೆಳಗಾವಿ ಲೋಕಸಭಾ ಚುನಾವಣೆಗೆ ಇನ್ನು 16 ದಿನಗಳು ಮಾತ್ರ ಬಾಕಿಯಿದ್ದು, ರಾಜಕೀಯ ಪಕ್ಷಗಳ ಪ್ರಚಾರ ಕಾರ್ಯ ಚುರುಕುಗೊಂಡಿದೆ. ಪಕ್ಷಗಳು ಈಗಾಗಲೇ ಎರಡು ಸುತ್ತಿನ ಪ್ರಚಾರವನ್ನು ಪೂರ್ಣಗೊಳಿಸಿವೆ. ಇದೀಗ, ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಸೇರಿದಂತೆ ಸ್ಟಾರ್ ಪ್ರಚಾರಕರು ಸೋಮವಾರದಿಂದ ಪ್ರಚಾರ ಆರಂಭಿಸುವ ನಿರೀಕ್ಷೆಯಿದೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಳಗಾವಿ ಲೋಕಸಭಾ ಚುನಾವಣೆಗೆ ಇನ್ನು 16 ದಿನಗಳು ಮಾತ್ರ ಬಾಕಿಯಿದ್ದು, ರಾಜಕೀಯ ಪಕ್ಷಗಳ ಪ್ರಚಾರ ಕಾರ್ಯ ಚುರುಕುಗೊಂಡಿದೆ. ಪಕ್ಷಗಳು ಈಗಾಗಲೇ ಎರಡು ಸುತ್ತಿನ ಪ್ರಚಾರವನ್ನು ಪೂರ್ಣಗೊಳಿಸಿವೆ. ಇದೀಗ, ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಸೇರಿದಂತೆ ಸ್ಟಾರ್ ಪ್ರಚಾರಕರು ಸೋಮವಾರದಿಂದ ಪ್ರಚಾರ ಆರಂಭಿಸುವ ನಿರೀಕ್ಷೆಯಿದೆ.

ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ಏಪ್ರಿಲ್ 26 ರಂದು ನಡೆಯಲಿದ್ದು, ಏಪ್ರಿಲ್ 23 ರಂದು ಪ್ರಚಾರ ಕೊನೆಗೊಳ್ಳಲಿದೆ. ಹೀಗಾಗಿ ಎರಡನೇ ಹಂತದ ಚುನಾವಣಾ ಪ್ರಚಾರಕ್ಕಾಗಿ ರಾಜಕೀಯ ಪಕ್ಷಗಳ ನಾಯಕರು ಇದೀಗ ಉತ್ತರ ಕರ್ನಾಟಕದ ಜಿಲ್ಲೆಗಳತ್ತ ಮುಖ ಮಾಡಿದ್ದಾರೆ. ಉನ್ನತ ನಾಯಕರು ಪ್ರಚಾರ ಮೂಲಕ ನಿಜವಾದ ರಾಜಕೀಯ ಕದನ ಪ್ರಾರಂಭವಾಗುವ ನಿರೀಕ್ಷೆಯಿದೆ.

ಸ್ಟಾರ್ ಪ್ರಚಾರಕರ ಪೈಕಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರವಾಸ ಪಟ್ಟಿ ಮೊಟ್ಟ ಮೊದಲಿಗೆ ಪ್ರಕಟವಾಗಿದೆ. ಏ.24ರಿಂದ ಅವರು ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದಾರೆ.

ಸಿಎಂ ಸಿದ್ದರಾಮಯ್ಯ
ನೇಹಾ ಕೊಲೆ ಪ್ರಕರಣ: ರಾಜಕೀಯಕ್ಕೆ ಒಬ್ಬರ ಸಾವು ಬಳಕೆ ಮಾಡಿಕೊಳ್ಳುತ್ತಿರುವುದು ದುರ್ದೈವ- ಸಿಎಂ ಸಿದ್ದರಾಮಯ್ಯ

ಏಪ್ರಿಲ್ 24ರಂದು ಕಲಬುರಗಿಗೆ ಆಗಮಿಸಲಿರುವ ಸಿದ್ದರಾಮಯ್ಯ,ಕಲಬುರಗಿ ಹಾಗೂ ಬೀದರ್ ಜಿಲ್ಲೆಯ ಅಫ್ಜಲ್ ಪುರ, ಆಳಂದ, ಬೀದರ್ ನಲ್ಲಿ ಪ್ರಚಾರ ಸಭೆಯಲ್ಲಿ ಭಾಗವಹಿಸುವರು. ಏಪ್ರಿಲ್ 25ರಂದು ಹುಬ್ಬಳ್ಳಿಗೆ ಆಗಮಿಸಲಿರುವ ಸಿದ್ದರಾಮಯ್ಯ, ನವಲಗುಂದ, ಗಜೇಂದ್ರಗಡ ಹಾಗೂ ಹುಬ್ಬಳ್ಳಿಯಲ್ಲಿ ಪ್ರಚಾರ ನಡೆಸುವರು. ಏ.25ರ ರಾತ್ರಿ ಮೈಸೂರಿಗೆ ತೆರಳಿ 26ರಂದು ಮತದಾನ ಮಾಡಿದ ನಂತರ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ತೆರಳುವರು. ಅದೇ ದಿನ ಸಂಜೆ ಕಲಬುರಗಿಯಲ್ಲಿ ಪ್ರಚಾರ ಸಭೆಯಲ್ಲಿ ಭಾಗವಹಿಸುವರು. ಏ.27ರಂದು ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ, ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ಹಾಗೂ ವಿಜಯಪುರದಲ್ಲಿ ಪ್ರಚಾರ ನಡೆಸುವರು.

ಏ.28ರಂದು ಅಥಣಿಗೆ ಆಗಮಿಸಿ ಬೆಳಗ್ಗೆ 11.30ಕ್ಕೆ ಉಗಾರಖುರ್ದದಲ್ಲಿ, ಮಧ್ಯಾಹ್ನ 2.30ಕ್ಕೆಯರಗಟ್ಟಿಯಲ್ಲಿ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸುವರು. ಅಂದು ಸಂಜೆ 6 ಗಂಟೆಗೆ ಸಿಂದನೂರಿನಲ್ಲಿ ಪ್ರಚಾರ ಸಭೆಯಲ್ಲಿ ಭಾಗವಹಿಸುವರು. 29ರಂದು ಕೂಡ್ಲಗಿ, ಕುಷ್ಟಗಿ ಹಾಗೂ ಬಾಗಲಕೋಟೆಯಲ್ಲಿ ಪ್ರಚಾರ ನಡೆಸುವರು.

ಏ.30 ರಂದು 11 ಗಂಟೆಗೆ ಚಿಕ್ಕೋಡಿಯಲ್ಲಿ, 2.45ಕ್ಕೆ ಗೋಕಾಕಲ್ಲಿ ಸಿದ್ದರಾಮಯ್ಯಪ್ರಚಾರ ನಡೆಸಲಿದ್ದಾರೆ. ಅಂದು ಸಂಜೆ 5.45ಕ್ಕೆ ಗಂಗಾವತಿಯಲ್ಲಿ ಪ್ರಚಾರ ಸಭೆ ನಡೆಸುವರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಪ್ರಚಾರ ಮಾಡಿದಲ್ಲೆಲ್ಲ ಕಾಂಗ್ರೆಸ್ ಭರ್ಜರಿ ಜಯ ಗಳಿಸಿತ್ತು. ಇದೊಂದಿಗೆ ಮಾಸ್ ಲೀಡರ್ ಎಂದೇ ಖ್ಯಾತಿ ಪಡೆದಿರುವ ಸಿದ್ದರಾಮಯ್ಯ, ಪ್ರಚಾರ ಸಭೆಗಳಲ್ಲಿ ಪ್ರಮುಖ ಆಕರ್ಷಣೆಯಾಗಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com