ಲೋಕಸಭೆ ಚುನಾವಣೆ 2024: ಬಿಜೆಪಿ ಜೊತೆಗೆ ಜೆಡಿಎಸ್ ವಿಲೀನದ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ

ಜೆಡಿಎಸ್ ಬಿಜೆಪಿಯೊಂದಿಗೆ ವಿಲೀನಗೊಳ್ಳುವ ಊಹಾಪೋಹಗಳ ನಡುವೆ, ಎಲ್ಲವೂ ಸುಸೂತ್ರವಾಗಿ ನಡೆದರೆ ವಿಲೀನ ಮಾಡುವ ಪ್ರಶ್ನೆಯೇ ಇಲ್ಲ. ಜೆಡಿಎಸ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು, ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್-ಬಿಜೆಪಿ ಅಭ್ಯರ್ಥಿ ಎಚ್‌ಡಿ ಕುಮಾರಸ್ವಾಮಿ ಶನಿವಾರ ಹೇಳಿದ್ದಾರೆ.
ಎಚ್‌ಡಿ ಕುಮಾರಸ್ವಾಮಿ
ಎಚ್‌ಡಿ ಕುಮಾರಸ್ವಾಮಿ

ನವದೆಹಲಿ: ಜೆಡಿಎಸ್ ಬಿಜೆಪಿಯೊಂದಿಗೆ ವಿಲೀನಗೊಳ್ಳುವ ಊಹಾಪೋಹಗಳ ನಡುವೆ, ಎಲ್ಲವೂ ಸುಸೂತ್ರವಾಗಿ ನಡೆದರೆ ವಿಲೀನ ಮಾಡುವ ಪ್ರಶ್ನೆಯೇ ಇಲ್ಲ. ಜೆಡಿಎಸ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು, ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್-ಬಿಜೆಪಿ ಅಭ್ಯರ್ಥಿ ಎಚ್‌ಡಿ ಕುಮಾರಸ್ವಾಮಿ ಶನಿವಾರ ಹೇಳಿದ್ದಾರೆ.

ಸುದ್ದಿಸಂಸ್ಥೆ ಎಎನ್‌ಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ, 'ನಮ್ಮ ಪಕ್ಷವನ್ನು ಬೇರೆ ಯಾವುದೇ ಪಕ್ಷದೊಂದಿಗೆ ವಿಲೀನಗೊಳಿಸುವ ಪ್ರಶ್ನೆಯೇ ಇಲ್ಲ, ನಾನು ನಿಮಗೆ ಸ್ಪಷ್ಟವಾಗಿ ಹೇಳುತ್ತಿದ್ದೇನೆ. ಬಿಜೆಪಿ ನಮ್ಮನ್ನು ಚೆನ್ನಾಗಿ ನಡೆಸಿಕೊಂಡರೆ ಮತ್ತು ಎಲ್ಲವೂ ಸುಗಮವಾಗಿ ನಡೆದರೆ ಅಂತಹ ಯಾವುದೇ ಪ್ರಶ್ನೆ ಉದ್ಭವಿಸುವುದಿಲ್ಲ. ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ' ಎಂದರು.

100 ಜನ ಸಿದ್ದರಾಮಯ್ಯನವರು ನಮ್ಮ ವಿರುದ್ಧ ಬಂದರೂ ನಮ್ಮ ಪಕ್ಷಕ್ಕೆ ಏನೂ ಮಾಡಲು ಸಾಧ್ಯವಿಲ್ಲ, ಹಾಳು ಮಾಡಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಅವರಿಗೆ ಹೇಳಲು ಬಯಸುತ್ತೇನೆ ಎಂದರು.

ಎಚ್‌ಡಿ ಕುಮಾರಸ್ವಾಮಿ
ಡಿಕೆ ಶಿವಕುಮಾರ್‌ ಹೇಳಿಕೆಗಳನ್ನು ಒಕ್ಕಲಿಗ ಸಮುದಾಯ ಗಮನಿಸುತ್ತಿದೆ; ತಕ್ಕ ಉತ್ತರ ನೀಡಲಿದೆ: ಎಚ್‌ಡಿ ಕುಮಾರಸ್ವಾಮಿ

ಅಯೋಧ್ಯೆಯ ‘ಪ್ರಾಣ ಪ್ರತಿಷ್ಠಾ’ ಸಮಾರಂಭಕ್ಕೆ ದೇವೇಗೌಡರನ್ನು ಆಹ್ವಾನಿಸಿದ್ದು ಬಿಜೆಪಿ-ಜೆಡಿಎಸ್ ಮೈತ್ರಿಗೆ ಕಾರಣವಾದ ಪ್ರಧಾನಿ ಮೋದಿ ಮತ್ತು ದೇವೇಗೌಡರ ನಡುವಿನ ವೈಯಕ್ತಿಕ ಸಂಬಂಧವೆಂದು ಪರಿಗಣಿಸಬಹುದೇ ಎಂದು ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ನರೇಂದ್ರ ಮೋದಿ ಅವರು ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸಿದಾಗ, ಆ ಸಮಯದಲ್ಲಿ ದೇವೇಗೌಡರು ಪ್ರಮುಖ ಟೀಕಾಕಾರರಲ್ಲಿ ಒಬ್ಬರಾಗಿದ್ದರು. ಆಗ ಅವರು ಏನೇ ಹೇಳಿದರೂ, ನಂತರ ಮೋದಿಯವರು ಪ್ರಧಾನಿಯಾದರು. ಮೋದಿಯವರು ದೇವೇಗೌಡರನ್ನು ಭೇಟಿಯಾದರು. ಆಗ ದೇವೇಗೌಡರು ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ಬಯಸಿದ್ದರು. ಆದರೆ, ಮೋದಿ ಅವರೇ ದೇವೇಗೌಡರಿಗೆ ಸಂಸತ್ತಿನಲ್ಲಿ ಮುಂದುವರಿಯಬೇಕು ಎಂದು ಸಲಹೆ ನೀಡಿದರು. ಮೋದಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ದೇವೇಗೌಡ ಅವರು ಹಲವಾರು ಬಾರಿ ಭೇಟಿಯಾದರು ಮತ್ತು ಪ್ರತಿ ಬಾರಿಯೂ ಪ್ರಧಾನಿ ದೇವೇಗೌಡರನ್ನು ಗೌರವಿಸಿದರು ಮತ್ತು ಅವರ ಸಲಹೆಯನ್ನು ಕೇಳಿದರು ಎಂದರು.

2018ರಲ್ಲಿ ದೇವೇಗೌಡರು ಕಾಂಗ್ರೆಸ್ ಜೊತೆ ಕೈಜೋಡಿಸಿದ್ದಾರೆ. 60-62 ವರ್ಷಗಳ ತಮ್ಮ ವೃತ್ತಿಜೀವನದುದ್ದಕ್ಕೂ ಅವರು ಯಾವಾಗಲೂ ಜಾತ್ಯತೀತ ಶಕ್ತಿಗಳೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ಪ್ರಾದೇಶಿಕ ಪಕ್ಷಗಳನ್ನು ಬಳಸಿಕೊಂಡು ಕಾಂಗ್ರೆಸ್ ಹಲವಾರು ಪ್ರಾದೇಶಿಕ ಪಕ್ಷಗಳನ್ನು ನಾಶಪಡಿಸಿದೆ. ಕಾಂಗ್ರೆಸ್ ದೇವೇಗೌಡರನ್ನು ಹಲವಾರು ರೀತಿಯಲ್ಲಿ ಅವಮಾನಿಸಿದೆ ಎಂದು ದೂರಿದರು.

ಎಚ್‌ಡಿ ಕುಮಾರಸ್ವಾಮಿ
ಲೋಕಸಭೆ ಚುನಾವಣೆ: ಪ್ರತಿ ಬೂತ್‌ನಲ್ಲಿ ಶೇಕಡಾ 10 ರಷ್ಟು ಹೆಚ್ಚು ಮತ ಗಳಿಕೆ; ಜೆಡಿಎಸ್- ಬಿಜೆಪಿ ಮೈತ್ರಿ ಗುರಿ!

ತಮ್ಮ ಕಾಂಗ್ರೆಸ್ ಸ್ನೇಹಿತರನ್ನು ನಂಬಿ ಹಲವಾರು ತಪ್ಪು ನಿರ್ಧಾರಗಳನ್ನು ತೆಗೆದುಕೊಂಡಿದ್ದಾಗಿ ಹೇಳುವ ಕುಮಾರಸ್ವಾಮಿ, ನಾನು ಸಂಪೂರ್ಣವಾಗಿ ಕಾಂಗ್ರೆಸ್ ವಿರೋಧಿ, ಅವರು ನಮ್ಮನ್ನು ಹೇಗೆ ನಡೆಸಿಕೊಳ್ಳುತ್ತಾರೆ ಮತ್ತು ಮುಖ್ಯಮಂತ್ರಿಯಾಗಿದ್ದಾಗ ಅವರು ನನ್ನನ್ನು ಹೇಗೆ ನಡೆಸಿಕೊಂಡರು ಎಂಬುದು ನನಗೆ ತಿಳಿದಿದೆ ಎಂದು ಹೇಳಿದರು.

ಎನ್‌ಡಿಎ ಜತೆ ಕೈಜೋಡಿಸಿರುವ ಜೆಡಿಎಸ್‌ ಪಕ್ಷವನ್ನು ಟೀಕಿಸಿರುವ ಕಾಂಗ್ರೆಸ್‌, ಪಕ್ಷವು ಚುನಾವಣಾ ಆಯೋಗಕ್ಕೆ ಪತ್ರ ಬರೆದು ತಮ್ಮ ಪಕ್ಷದ ಹೆಸರಿನಿಂದ ಜಾತ್ಯತೀತ ಪದವನ್ನು ಕೈಬಿಡಬೇಕು ಎಂದು ಟೀಕಿಸಿರುವ ವಿಚಾರಕ್ಕೆ ತಿರುಗೇಟು ನೀಡಿದ ಅವರು, ಜಾತ್ಯತೀತತೆಯ ಅರ್ಥವೇನು? ನಾನು ಕಾಂಗ್ರೆಸ್ ಅನ್ನು ಪ್ರಶ್ನಿಸಲು ಬಯಸಿದ್ದೆ. ಪ್ರತಿದಿನ ಅವರು ಜಾತಿ ಸಂಯೋಜನೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ಅವರು ಜಾತಿ ಹೆಸರಿನಲ್ಲಿ ಪಕ್ಷಕ್ಕೆ ಲಾಭ ಮಾಡಿಕೊಳ್ಳುತ್ತಿದ್ದಾರೆ ಎಂದು ದೂರಿದರು.

ಎಚ್‌ಡಿ ಕುಮಾರಸ್ವಾಮಿ
ಲೋಕಸಭಾ ಚುನಾವಣೆ: NDA ಗೆದ್ದರೆ ಕೃಷಿ ಸಚಿವನಾಗಲು ಬಯಸುತ್ತೇನೆ- ಹೆಚ್ ಡಿ ಕುಮಾರಸ್ವಾಮಿ

ನನ್ನ ಪ್ರಕಾರ ಜಾತ್ಯತೀತತೆ ಅಥವಾ ಕೋಮುವಾದಕ್ಕೆ ಯಾವುದೇ ಅರ್ಥವಿಲ್ಲ. ಉದಾಹರಣೆಗೆ, ಡಿಎಂಕೆ ಬಗ್ಗೆ ಮಾತನಾಡೋಣ. ಅವರು ಕೇಂದ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡರೊಂದಿಗೂ ಕೈಜೋಡಿಸಿದರು. ಕಾರಣ ಏನೇ ಇರಲಿ, ಅವರು ತಮ್ಮ ಸ್ವಂತ ಹಿತಾಸಕ್ತಿಯಿಂದ ನಿರ್ಧಾರ ತೆಗೆದುಕೊಂಡರೇ ಹೊರತು ಜಾತ್ಯತೀತತೆ ಅಥವಾ ಕೋಮುವಾದಕ್ಕಾಗಿ ಅಲ್ಲ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com