ಬಿ.ವೈ ವಿಜಯೇಂದ್ರ
ಬಿ.ವೈ ವಿಜಯೇಂದ್ರ

ಚುನಾವಣೆ ಮುಗಿದ ಮೇಲೆ 'ಕೈ' ನಾಯಕರಿಗೆ ಚೊಂಬು ಹಿಡಿದು ಓಡುವ ಪರಿಸ್ಥಿತಿ ಬರಲಿದೆ: ಕಾಂಗ್ರೆಸ್'ಗೆ ವಿಜಯೇಂದ್ರ ತಿರುಗೇಟು

ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ನಾಯಕರಿಗೆ ಚೊಂಬು ಹಿಡಿದು ಓಡುವ ಪರಿಸ್ಥಿತಿ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ತಿರುಗೇಟು ನೀಡಿದ್ದಾರೆ.

ಬೆಂಗಳೂರು: ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ನಾಯಕರಿಗೆ ಚೊಂಬು ಹಿಡಿದು ಓಡುವ ಪರಿಸ್ಥಿತಿ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ತಿರುಗೇಟು ನೀಡಿದ್ದಾರೆ.

ಮೈಸೂರಿನ ಚಾಮರಾಜ ಕ್ಷೇತ್ರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಮಹಾಸಂಪರ್ಕ ಅಭಿಯಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಚಾಲನೆ ನೀಡಿದ್ದು, ಪ್ರಚಾರವನ್ನು ತೀವ್ರಗೊಳಿಸಿದ್ದಾರೆ.

ಪ್ರಚಾರದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಚೊಂಬು ಜಾಹೀರಾತು, ಟೀಕೆಗಳಿಗೆ ತಿರುಗೇಟು ನೀಡಿದರು.

ಕಾಂಗ್ರೆಸ್ ಸರ್ಕಾರ ರಾಜ್ಯದ ಖಜಾನೆಯನ್ನು ಖಾಲಿ ಮಾಡುತ್ತಿದ್ದು, ಕೇಂದ್ರ ಸರ್ಕಾರದ ಹಣವನ್ನು ಅವಲಂಬಿಸಿದೆ. ಹೀಗಾಗಿ ಲೋಕಸಭೆ ಚುನಾವಣೆಯ ನಂತರ ನಲಪಾಡ್ ಅವರಂತಹ ಕಾಂಗ್ರೆಸ್ ನಾಯಕರಿಗೆ ಚೊಂಬು ಹಿಡಿದುಕೊಂಡು ಓಡುವ ಪರಿಸ್ಥಿತಿ ಬರಲಿದೆ ಎಂದು ಭವಿಷ್ಯ ನುಡಿದರು.

ಸಿದ್ದರಾಮಯ್ಯ ಹಿಂದುಳಿದ ವರ್ಗದ ನಾಯಕರು ಅಂತಾ ಹೇಳಿ. ಹಿಂದುಳಿದವರನ್ನು ಕೈ ಬಿಟ್ಟು ಅಲ್ಪಸಂಖ್ಯಾತರನ್ನು ಮಾತ್ರ ಕೈ ಹಿಡಿದಿದ್ದಾರೆ. ಇದಕ್ಕೆ ಜನರು ಚುನಾವಣೆಯಲ್ಲಿ ಉತ್ತರ ನೀಡುತ್ತಾರೆ. ಲೋಕಸಭೆ ಮಾತ್ರವಲ್ಲ ಮುಂದಿನ ದಿನಗಳಲ್ಲಿ ಇದರ ಪರಿಣಾಮ ಎದುರಿಸಬೇಕಾಗುತ್ತದೆ. ಚುನಾವಣೆ ಮುಗಿದ ಮೇಲೆ ನಲಪಾಡ್ ಹಾಗೂ ಕಾಂಗ್ರೆಸ್ ನಾಯಕರಿಗೆ ಚೊಂಬು ಹಿಡಿದು ಓಡುವ ಪರಿಸ್ಥಿತಿ ಬರಲಿದೆ. ಕಾಂಗ್ರೆಸ್ ಜಾಹೀರಾತು, ಹೇಳಿಕೆಗಳಿಗೆ ಕವಡೆ ಕಾಸಿನ ಕಿಮ್ಮತ್ತು ಇಲ್ಲ. ಅವರು ಏನಾದರೂ ಜಾಹೀರಾತು ಕೊಟ್ಟಿಕೊಳ್ಳಲಿ. ಈ ಬಾರಿ ಜನ ಮತ್ತೆ ಮೋದಿ ಅವರನ್ನು ಪ್ರಧಾನಿ‌ ಮಾಡುತ್ತಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿ.ವೈ ವಿಜಯೇಂದ್ರ
ಕೋಲಾರ: ಸಿಎಂ ಸಿದ್ದರಾಮಯ್ಯ ರೋಡ್ ಶೋನಲ್ಲಿ ಮಾರ್ದನಿಸಿದ 'ಚೊಂಬಿನ ಸದ್ದು'

ಹುಬ್ಬಳ್ಳಿಯ ನೇಹಾ ಹತ್ಯೆ ಪ್ರಕರಣ ಕುರಿತು ಮಾತನಾಡಿ, ದುರಂಹಕಾರದ ಹೇಳಿಕೆಗಳನ್ನ ಯಾರು ಕೂಡ ಸಹಿಸಲ್ಲ. ಗಂಭೀರವಾದ ಘಟನೆ ನಡೆದಿದೆ. ವೈಯಕ್ತಿಕ ವಿಚಾರಕ್ಕೆ ಕೊಲೆಯಾಗಿದೆ ಎಂದು ಸಚಿವರು ಹೇಳುತ್ತಾರೆ‌. ಇದು ಅಕ್ಷಮ್ಯ ಅಪರಾಧ. ಕಾಂಗ್ರೆಸ್ ಸಚಿವರು ಒಂದು ಕೋಮನ್ನ ಓಲೈಸಲು ಮುಂದಾಗಿದ್ದಾರೆ. ಪೋಷಕರು ಮಗಳನ್ನ ಕಳೆದುಕೊಂಡು ದುಖದಲ್ಲಿದ್ದಾರೆ. ಅವರಿಗೆ ಸಾಂತ್ವಾನ ಹೇಳಬೇಕು. ರಾಜ್ಯದ ಹೆಣ್ಣು ಮಕ್ಕಳಿಗೆ ರಕ್ಷಣೆ ಕೊಡಬೇಕು. ಬಿಜೆಪಿ ಚುನಾವಣೆಯನ್ನ ಬದಿಗುಟ್ಟು ಹೋರಾಟ ಮಾಡುತ್ತಿದ್ದೇವೆ. ನೇಹಾ ಪೋಷಕರೇ ಈ ಘಟನೆ ಹಿಂದೆ ಲವ್ ಜಿಹಾದ್ ಇದೇ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ತಾಲಿಬಾನ್ ಸರ್ಕಾರ ಇದ ಎಂದು ಜನರು ಮಾತನಾಡುತ್ತಿದ್ದಾರೆ. ಇದಕ್ಕೆಲ್ಲಾ ರಾಜ್ಯದ ಜನರು ಉತ್ತರ ಕೊಡುತ್ತಾರೆ ಎಂದರು.

ನೇಹಾ ಹಾಗೂ ಆರೋಪಿ ಪೋಟೋ ವೈರಲ್ ಆಗುತ್ತಿದೆ. ಇಂತಹ ನೀಚ ಕೆಲಸ ಮಾಡುವುದರಲ್ಲಿ ಕಾಂಗ್ರೆಸ್‌ನವರು ನಿಸ್ಸೀಮರು. ಪೋಟೋ ವೈರಲ್ ಹಿಂದೆ ಕಾಂಗ್ರೆಸ್ ಕೈವಾಡ ಇದೆ ಎಂದು ಗಂಭೀರ ಆರೋಪ ಮಾಡಿದರು

Advertisement

X
Kannada Prabha
www.kannadaprabha.com