ಲೋಕ ಸಮರ 2024: ಎಸ್‌ಸಿ-ಎಸ್‌ಟಿ, ಒಬಿಸಿ ಓಲೈಕೆಗೆ ಪ್ರಧಾನಿ ಮೋದಿ-ಅಮಿತ್ ಶಾ ಗಾಳ!

ಲೋಕಸಭಾ ಚುನಾವಣೆಗೆ ಇನ್ನು ಕೇವಲ 4 ದಿನಗಳಷ್ಟೇ ಬಾಕಿ ಉಳಿದಿದ್ದು, ಈ ನಡುವಲ್ಲೇ ರಾಜ್ಯದಲ್ಲಿ ಭಾರೀ ಪ್ರಚಾರ ನಡೆಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹಿಂದುಳಿದ ವರ್ಗಗಳು ಮತ್ತು ದಲಿತರನ್ನು ಓಲೈಸಲು ತಮ್ಮದೇ ಆದ ತಂತ್ರಗಾರಿಕೆಯನ್ನು ನಡೆಸುತ್ತಿದ್ದಾರೆ.
ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ
ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ

ಬೆಂಗಳೂರು: ಲೋಕಸಭಾ ಚುನಾವಣೆಗೆ ಇನ್ನು ಕೇವಲ 4 ದಿನಗಳಷ್ಟೇ ಬಾಕಿ ಉಳಿದಿದ್ದು, ಈ ನಡುವಲ್ಲೇ ರಾಜ್ಯದಲ್ಲಿ ಭಾರೀ ಪ್ರಚಾರ ನಡೆಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹಿಂದುಳಿದ ವರ್ಗಗಳು ಮತ್ತು ದಲಿತರನ್ನು ಓಲೈಸಲು ತಮ್ಮದೇ ಆದ ತಂತ್ರಗಾರಿಕೆಯನ್ನು ನಡೆಸುತ್ತಿದ್ದಾರೆ.

ಶನಿವಾರ ಪ್ರಧಾನಿ ಮೋದಿಯವರು ಚಿಕ್ಕಬಳ್ಳಾಪುರದಲ್ಲಿ ಪ್ರಚಾರ ನಡೆಸಿದರು. ಈ ವೇಳೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರನ್ನು ಪ್ರಸ್ತಾಪಿಸಿ, ಕೇಂದ್ರ ಸರ್ಕಾರದ ಅಭಿವೃದ್ಧಿ ಉಪಕ್ರಮಗಳಿಂದ ಎಸ್‌ಸಿ / ಎಸ್‌ಟಿ ಮತ್ತು ಒಬಿಸಿ ಸಮುದಾಯಗಳಿಗೆ ಅನುಕೂಲವಾಗಿವೆ ಎಂದು ಹೇಳಿದರು.

ಇದರಂತೆ ಬುಧವಾರ ಅಮಿತ್ ಶಾ ಅವರು, ತುಮಕೂರು ಲೋಕಸಭಾ ಕ್ಷೇತ್ರದ ಕಿಬ್ಬನಹಳ್ಳಿ ಕ್ರಾಸ್‌ನಲ್ಲಿ ಒಬಿಸಿ ರ್ಯಾಲಿ ನಡೆಸುತ್ತಿದ್ದಾರೆ. ಈವೇಳೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರೂ ಶಾ ಅವರೊಂದಿಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ.ರ್ಯಾಲಿ ವೇಳೆ ಅಮಿತ್ ಶಾ ಅವರು ಕಾಡುಗೊಲ್ಲರಿಗೆ ಎಸ್ಟಿ ಮೀಸಲಾತಿ ವಿಚಾರವನ್ನು ಪ್ರಸ್ತಾಪಿಸುವ ಸಾಧ್ಯತೆಗಳಿವೆ.

ಸಮುದಾಯದ ರಾಜ್ಯಾಧ್ಯಕ್ಷ ರಾಜಣ್ಣ ಮಾತನಾಡಿ, ರಾಜ್ಯಾದ್ಯಂತ ಸಮುದಾಯದ ಎಂಟು ಲಕ್ಷ ಮತದಾರರಿದ್ದು, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ ಬೆಂಬಲ ನೀಡುತ್ತೇವೆ ಎಂದು ಹೇಳಿದ್ದಾರೆ.

ಪಕ್ಷ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸುವುದಾಗಿ ರಾಹುಲ್ ಗಾಂಧಿ ಮೂಲಕ ರಾಜ್ಯದ ಕಾಂಗ್ರೆಸ್ ನಾಯಕರು ಭರವಸೆ ನೀಡುತ್ತಿದ್ದಾರೆ. ಆದರೆ, ಈ ಪ್ರಯತ್ನ ವಿಫಲವಾಗಿದೆ ಎಂದು ಹೇಳಲಾಗುತ್ತಿದೆ.

ಹೀಗಾಗಿ ಈ ಬೆಳವಣಿಗೆಯನ್ನು ಲಾಭವಾಗಿ ಪಡೆದುಕೊಳ್ಳಲು ಬಿಜೆಪಿ ಮುಂದಾಗಿದ್ದು, ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿರುವ ಕುರುಬರನ್ನು ಹೊರತುಪಡಿಸಿದ ಇತರೆ ಒಬಿಸಿಗಳ ಮನಗೆಲ್ಲಲು ಬಿಜೆಪಿ ಯತ್ನಿಸುತ್ತಿದೆ.

ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ
ಚುನಾವಣೆ ಮುಗಿದ ಮೇಲೆ 'ಕೈ' ನಾಯಕರಿಗೆ ಚೊಂಬು ಹಿಡಿದು ಓಡುವ ಪರಿಸ್ಥಿತಿ ಬರಲಿದೆ: ಕಾಂಗ್ರೆಸ್'ಗೆ ವಿಜಯೇಂದ್ರ ತಿರುಗೇಟು

ಸಿದ್ದರಾಮಯ್ಯ ಕುರುಬ ಸಮುದಾಯಕ್ಕೆ ಸೀಮಿತವಾಗುತ್ತಿದ್ದು, ಇತರೆ ಸಮುದಾಯದ ನಾಯಕರ ಪರಿಗಣನೆಗೆ ತೆಗೆದುಕೊಳ್ಳಲು ವಿಫಲರವಾಗುತ್ತಿದೆ. ಹೀಗಾಗಿ ಈ ಅವಕಾಶವನ್ನು ಬಳಸಿಕೊಂಡು, ಬಿಜೆಪಿ ಇತರ ಒಬಿಸಿಗಳನ್ನು ಓಲೈಸುತ್ತಿದ್ದು, ಹೊಸ ನಾಯಕರನ್ನು ಕರೆತರುತ್ತದೆ ಎಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.

ಇದರಂತೆ ಕಮಲಪಾಳಯದ ನಾಯಕರ ಸಲಹೆಗಳನ್ನು ಆಲಿಸಿದ ವರಿಷ್ಠರು ಮತದಾರರನ್ನು ಸೆಳೆಯರು ಹೊಸ ತಂತ್ರಗಳ ಮೂಲಕ ಪ್ರಚಾರದ ತಂತ್ರ ರೂಪಿಸಿದ್ದಾರಂದು ಮೂಲಗಳು ತಿಳಿಸಿವೆ.

ರಾಜ್ಯದ ವೀರಶೈವ ಲಿಂಗಾಯತರು ಮೋದಿ ನಾಯಕತ್ವವನ್ನು ಬೆಂಬಲಿಸುತ್ತಿದ್ದಾರೆ. ಉಳಿದವರ ಓಲೈಸುವುದು ಮುಂದಿರುವ ಯೋಜನೆಯಾಗಿದೆ. ಒಕ್ಕಲಿಗರ ಮತಗಳನ್ನು ಪಡೆಯಲು ಜೆಡಿಎಸ್‌ ಜೊತೆಗೆ ಮೈತ್ರಿ ಮಾಡಿಕೊಳ್ಳಲಾಗಿದೆ. ಇದಕ್ಕಾಗಿ ದೇವೇಗೌಡರ ಅಳಿಯ ಡಾ.ಸಿ.ಎನ್.ಮಂಜುನಾಥ್ ಅವರನ್ನು ಕಣಕ್ಕಿಳಿಸಲಾಗಿದೆ ಎಂದು ರಾಜಕೀಯ ತಜ್ಞರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com