ಮೋದಿ ಪ್ರಧಾನಿಯಾಗಿ ಇಷ್ಟು ಕೆಳಮಟ್ಟದಲ್ಲಿ ಮಾತನಾಡಬಾರದಿತ್ತು: ಸಿಎಂ ಸಿದ್ದರಾಮಯ್ಯ

ದೇಶದ ಪ್ರಧಾನಮಂತ್ರಿಯಾಗಿ ಎಲ್ಲಾ ಜನಾಂಗವನ್ನು ಸಮಾನವಾಗಿ ನೋಡಿಕೊಳ್ಳುವ ಕರ್ತವ್ಯ ಅವರದ್ದು. ಹೆಣ್ಣುಮಕ್ಕಳಿಗೆ ಉಚಿತ ಬಸ್ ಸೌಲಭ್ಯ, ಉಚಿತ ವಿದ್ಯುತ್, ಅನ್ನಭಾಗ್ಯ ನೀಡಿದರೆ ಡೇಂಜರ್ ಆಗುತ್ತವೆಯೇ?
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಇಷ್ಟು ಕೆಳಮಟ್ಟದಲ್ಲಿ ಮಾತನಾಡಬಾರದಿತ್ತು. ಹಿಂದೂಗಳ ಮಂಗಳಸೂತ್ರವನ್ನು ತೆಗೆದು ಮುಸ್ಲಿಮರಿಗೆ ನೀಡುತ್ತಾರೆ ಎನ್ನುವುದು ಅವರ ಸ್ಥಾನಕ್ಕೆ ಗೌರವ ತರುವ ಮಾತಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದರು.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಸಮುದಾಯಗಳನ್ನು ಸಮಾನವಾಗಿ ಕಾಣುವುದು ಪ್ರಧಾನಿಯ ಕರ್ತವ್ಯ. ಇಂತಹ ಹೇಳಿಕೆಗಳು ಅವರ ಸ್ಥಾನಕ್ಕೆ ಗೌರವ ತರುವುದಿಲ್ಲ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ
ಮುಸ್ಲಿಮರಿಗೆ ದೇಶದ ಸಂಪತ್ತು ಹಂಚಿಕೆ ಹೇಳಿಕೆ: ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಇಷ್ಟು ಕೆಳಮಟ್ಟದಲ್ಲಿ ಮಾತನಾಡಬಾರದಿತ್ತು. ಹಿಂದೂಗಳ ಮಂಗಳಸೂತ್ರವನ್ನು ತೆಗೆದು ಮುಸ್ಲಿಮರಿಗೆ ನೀಡುತ್ತಾರೆ ಎನ್ನುವುದು ಅವರ ಸ್ಥಾನಕ್ಕೆ ಅಗೌರವ ತರುವ ಮಾತಲ್ಲ. ದೇಶದ ಪ್ರಧಾನಮಂತ್ರಿಯಾಗಿ ಎಲ್ಲಾ ಜನಾಂಗವನ್ನು ಸಮಾನವಾಗಿ ನೋಡಿಕೊಳ್ಳುವ ಕರ್ತವ್ಯ ಅವರದ್ದು. ಹೆಣ್ಣುಮಕ್ಕಳಿಗೆ ಉಚಿತ ಬಸ್ ಸೌಲಭ್ಯ, ಉಚಿತ ವಿದ್ಯುತ್, ಅನ್ನಭಾಗ್ಯ ನೀಡಿದರೆ ಡೇಂಜರ್ ಆಗುತ್ತವೆಯೇ? ಸಮಾಜವನ್ನು ಒಡೆಯುವಂತಹ ಕಾರ್ಯಗಳು, ಮತಗಳ ಧ್ರುವೀಕರಣ ಮಾಡುವುದು ಅಪಾಯಕಾರಿಯೇ ಹೊರತು, ವಿವಿಧತೆಯಲ್ಲಿ ಏಕತೆಯನ್ನು ತರುವುದು ಡೇಂಜರ್ ಅಲ್ಲ. ದೇಶಕ್ಕೆ ಬಿಜೆಪಿ ಪಕ್ಷವೇ ಡೇಂಜರ್, ಕಾಂಗ್ರೆಸ್ ಪಕ್ಷ ಅಲ್ಲ ಎಂದು ತಿಳಿಸಿದರು.

ಕಾನೂನು ಪ್ರಕಾರ ಐಟಿ, ಇಡಿ ಸಂಸ್ಥೆಗಳು ದಾಳಿ ಮಾಡುವುದನ್ನು ನಾವು ಎಂದೂ ವಿರೋಧಿಸುವುದಿಲ್ಲ. ಆದರೆ ಬಿಜೆಪಿಯಲ್ಲಿ ಶ್ರೀಮಂತರಿಲ್ಲವೇ? ಯಡಿಯೂರಪ್ಪ, ವಿಜಯೇಂದ್ರ ಭ್ರಷ್ಟಾಚಾರ ಮಾಡಿಲ್ಲವೇ? ಶೋಭಾ ಕರಂದ್ಲಾಜೆ, ಅಶೋಕ್, ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿಯವರ ಮೇಲೆ ರೇಡ್ ಗಳು ಏಕೆ ಆಗುತ್ತಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com