ನನ್ನ ಮಾನಹಾನಿ ಮಾಡಲು ಕಾಂಗ್ರೆಸ್‌ ಕಾರ್ಯಕರ್ತರ ಮನೆಗಳ ಮೇಲೆ ಐಟಿ ದಾಳಿ ನಡೆಯುತ್ತಿವೆ: ಡಿಕೆ ಶಿವಕುಮಾರ್‌

ನನ್ನ ಮಾನಹಾನಿ ಮತ್ತು ಚುನಾವಣಾ ಪ್ರಚಾರಕ್ಕೆ ಅಡ್ಡಿಪಡಿಸಲು ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರ ಮನೆಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.
ಡಿಕೆ ಶಿವಕುಮಾರ್-ಡಿಕೆ ಸುರೇಶ್
ಡಿಕೆ ಶಿವಕುಮಾರ್-ಡಿಕೆ ಸುರೇಶ್PTI

ಕನಕಪುರ: ನನ್ನ ಮಾನಹಾನಿ ಮತ್ತು ಚುನಾವಣಾ ಪ್ರಚಾರಕ್ಕೆ ಅಡ್ಡಿಪಡಿಸಲು ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರ ಮನೆಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಚುನಾವಣಾ ಪ್ರಚಾರದಿಂದ ತಡೆಯಲು ಉದ್ದೇಶಪೂರ್ವಕವಾಗಿ ಐಟಿ ಇಲಾಖೆ ದಾಳಿ ನಡೆಸುತ್ತಿದೆ. ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ಹಣ ಹಂಚುತ್ತಿಲ್ಲವೇ? ಅವರ ಮೇಲೆ ಏಕೆ ದಾಳಿ ನಡೆಸುತ್ತಿಲ್ಲ ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಶಿವಕುಮಾರ್ ಪ್ರಶ್ನಿಸಿದ್ದಾರೆ.

ಕೆಲವರನ್ನು ಪಟ್ಟಿ ಮಾಡಿ ಟಾರ್ಗೆಟ್ ಮಾಡಲು ಐಟಿ ಇಲಾಖೆ ಸಿದ್ಧವಾಗಿದೆ. ಅದರಂತೆ ದಾಳಿಗಳಾಗುತ್ತಿದೆ. ಅಲ್ಲದೆ ಅಲ್ಲಿ ಸಿಕ್ಕ ಹಣವನ್ನು ಡಿ ಕೆ ಶಿವಕುಮಾರ್‌ಗೆ ಸಂಬಂಧಿಸಿದ್ದು ಅಂತ ಹೇಳುವಂತೆ ಗುತ್ತಿಗೆದಾರರ ಮೇಲೆ ಒತ್ತಡ ಹೇರುತ್ತಿದ್ದಾರೆ. ಡಿ.ಕೆ.ಸುರೇಶ್ ಅವರ ಚಾಲಕನ ಮನೆ ಮೇಲೆ ದಾಳಿ ನಡೆಸಿ ಅವರ ಪತ್ನಿ ಮತ್ತು ಮಕ್ಕಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಡಿಸಿಎಂ ಆರೋಪಿಸಿದ್ದಾರೆ. ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ನಡೆದ ಯಾವುದೇ ದಾಳಿಯಲ್ಲಿ ಐಟಿ ಇಲಾಖೆಗೆ ಯಾವುದೇ ನಗದು ಪತ್ತೆಯಾಗಿಲ್ಲ. ಇದು ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ಅಡ್ಡಿಪಡಿಸುವ ಉದ್ದೇಶಪೂರ್ವಕ ತಂತ್ರ ಎಂದು ಶಿವಕುಮಾರ್ ಹೇಳಿದರು. ಚುನಾವಣಾ ಸೋಲಿನ ಭಯದಿಂದ ಐಟಿ ಅಧಿಕಾರಿಗಳು ನಿರ್ದಿಷ್ಟವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಹೇಳಿದರು.

ಡಿಕೆ ಶಿವಕುಮಾರ್-ಡಿಕೆ ಸುರೇಶ್
ಬೆಂಗಳೂರಿನಲ್ಲಿ ನಮ್ಮ ಬೆಂಬಲಿಗರ ಮೇಲೆ ಐಟಿ ಇಲಾಖೆ ದಾಳಿ ನಡೆಸುತ್ತಿದೆ: ಡಿಕೆ ಶಿವಕುಮಾರ್

ಈ ನಡುವೆ ಕಾಂಗ್ರೆಸ್ ಸಂಸದ ಡಿ ಕೆ ಸುರೇಶ್ ಅವರ ಆಪ್ತರ ಮೇಲೆ ನಡೆದ ಐಟಿ ದಾಳಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಸಂಸದ ಡಿ ಕೆ ಸುರೇಶ್ ಅವರ ಸಹವರ್ತಿ ಹಾಗೂ ಮಾಜಿ ಕೌನ್ಸಿಲರ್ ಗಂಗಾಧರ್ ಅವರ ಮನೆ ಮೇಲೆ ಐಟಿ ದಾಳಿ ನಡೆಸಿದ್ದಕ್ಕೆ ಪಕ್ಷದ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಕೇಂದ್ರದ ಬಿಜೆಪಿ ಸರ್ಕಾರವು ಕಾಂಗ್ರೆಸ್ ಅಭ್ಯರ್ಥಿಯ ಕೈಗಳನ್ನು ಕಟ್ಟಿಹಾಕಿದೆ ಎಂದು ಅವರು ಆರೋಪಿಸಿದರು. ಅವರ ಆಪ್ತರ ಮೇಲೆ ಐಟಿ ದಾಳಿ ನಡೆಸಲಾಗಿದೆ. ಗಂಗಾಧರನಿಗೆ ಸಾಕಷ್ಟು ಜಮೀನಿದ್ದು ಶ್ರೀಮಂತರಾಗಿದ್ದಾರೆ. ಬಿಜೆಪಿಯಲ್ಲಿ ಸಾಕಷ್ಟು ಶ್ರೀಮಂತರಿದ್ದಾರೆ. ಆದರೆ ಅವರ ಮೇಲೆ ಯಾವುದೇ ಐಟಿ ದಾಳಿ ನಡೆದಿಲ್ಲ. ಡಿ ಕೆ ಶಿವಕುಮಾರ್ ಮತ್ತು ಡಿ ಕೆ ಸುರೇಶ್ ಅವರ ಪ್ರಚಾರಕ್ಕೆ ಅಡ್ಡಿಪಡಿಸಲು ಐಟಿ ಇಲಾಖೆಯು ಅವರ ಸಹಚರರನ್ನು ಗುರಿಯಾಗಿಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಶಿವಕುಮಾರ್ ಅವರ ಆಪ್ತ ಮೂಲಗಳ ಪ್ರಕಾರ, ಗೊಟ್ಟಿಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಧರ್, ಡಿಕೆ ಸುರೇಶ್ ಆಪ್ತ ಕಾರ್ಯದರ್ಶಿ ಸುಜಯ್, ಚಂದ್ರು, ಲಕ್ಷ್ಮಣ್ ಮತ್ತು ಬಾಬು ಅವರ ಮನೆಗಳ ಮೇಲೂ ಐಟಿ ದಾಳಿ ನಡೆದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com