ಮೋದಿ ಶೌಚಾಲಯ ಕಟ್ಟಿಸಿ ಕೊಟ್ಟಿದ್ದಾರಲ್ವಾ, ಕಾಂಗ್ರೆಸ್ಸಿಗರೇಕೆ ಚೊಂಬು ಹಿಡಿದುಕೊಂಡು ಓಡಾಡ್ತಿದ್ದಾರೆ: ಅಣ್ಣಾಮಲೈ ವ್ಯಂಗ್ಯ

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿಕೊಂಡಿವೆ. ಕೇಂದ್ರ ಸರ್ಕಾರ ಬರ ಪರಿಹಾರದ ಹಣವನ್ನು ಬಿಡುಗಡೆ ಮಾಡದೆ ಸತಾಯಿಸುತ್ತಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿದೆ. ಅಲ್ಲದೆ ಕೇಂದ್ರ ಸರ್ಕಾರದ ವಿರುದ್ಧ ವಿನೂತನವಾಗಿ 'ಚೊಂಬು' ಹಿಡಿದು ಪ್ರತಿಭಟನೆ ನಡೆಸುತ್ತಿದೆ.
ಅಣ್ಣಾಮಲೈ
ಅಣ್ಣಾಮಲೈ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿಕೊಂಡಿವೆ. ಕೇಂದ್ರ ಸರ್ಕಾರ ಬರ ಪರಿಹಾರದ ಹಣವನ್ನು ಬಿಡುಗಡೆ ಮಾಡದೆ ಸತಾಯಿಸುತ್ತಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿದೆ. ಅಲ್ಲದೆ ಕೇಂದ್ರ ಸರ್ಕಾರದ ವಿರುದ್ಧ ವಿನೂತನವಾಗಿ 'ಚೊಂಬು' ಹಿಡಿದು ಪ್ರತಿಭಟನೆ ನಡೆಸುತ್ತಿದೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯ, ಮೋಸ ಮಾಡುತ್ತಿದೆ. ಕೇಂದ್ರದಿಂದ ರಾಜ್ಯಕ್ಕೆ ಸಿಕ್ಕಿದ್ದು ಕೇವಲ ಖಾಲಿ ಚೊಂಬು ಎಂದು ಆಕ್ರೋಶ ವ್ಯಕ್ತಪಡಿಸುತ್ತಿದೆ. ಅಲ್ಲದೆ ಕಾಂಗ್ರೆಸ್ ಕಾರ್ಯಕರ್ತರು ಹೋದ ಕಡೆ ಬಂದ ಕಡೆ ಚೊಂಬು ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಮಧ್ಯೆ ರಾಜ್ಯದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿರುವ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರ ನಿನ್ನೆ ದಕ್ಷಿಣ ಕನ್ನಡದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ಪ್ರಚಾರ ನಡೆಸಿದರು. ಇಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಲೋಕಸಭೆ ಅಭ್ಯರ್ಥಿ ತೇಜಸ್ವಿ ಸೂರ್ಯ ಪರ ರೋಡ್ ಶೋ ನಡೆಸಿದರು. ನಂತರ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ ಅಣ್ಣಾಮಲೈ ಅವರು ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದರು. ಪ್ರಚಾರ ಸಂದರ್ಭದಲ್ಲಿ ನಾನು ಹೋದ ಕಡೆನೂ ನಾಲ್ಕು ಚೊಂಬು ಹಿಡಿದುಕೊಂಡು ಬಂದಿದ್ದರು. ಅದಕ್ಕೆ ನಾನು ಕಾರ್ಯಕರ್ತರನ್ನು ಪ್ರಶ್ನಿಸಿದೆ. ರಾಜ್ಯದಲ್ಲಿ ಯಾಕೆ ಎಲ್ಲರೂ ಚೊಂಬು ಹಿಡಿದುಕೊಂಡು ಓಡಾಡ್ದಿದ್ದಾರೆ.

ಅಣ್ಣಾಮಲೈ
ಚೊಂಬು V/S ಚಿಪ್ಪು: ಚುನಾವಣೆ ಹೊತ್ತಿನಲ್ಲಿ ಕಾಂಗ್ರೆಸ್-ಬಿಜೆಪಿ ಜಾಹೀರಾತು ಸಮರ

ಯಾಕೆ ಯಾರೂ ಶೌಚಾಲಯಗಳಿಗೆ ಹೋಗುತ್ತಿಲ್ಲವೇ? ಪ್ರಧಾನಿ ಮೋದಿ ಅವರು ದೇಶಾದ್ಯಂತ 11 ಕೋಟಿ ಶೌಚಾಲಯಗಳನ್ನು ಕಟ್ಟಿಸಿಕೊಟ್ಟಿದ್ದಾರೆ. ಆದರೆ ಕಾಂಗ್ರೆಸ್ಸಿಗರು ಮಾತ್ರ ಚೊಂಬು ಹಿಡಿದುಕೊಂಡು ಓಡಾಡ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com