ಕರ್ನಾಟಕದಲ್ಲಿ NDA ಎಲ್ಲಾ 28 ಸ್ಥಾನಗಳನ್ನು ಗೆಲ್ಲಲಿದೆ: ಅಮಿತ್ ಶಾ

ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆ ಏಪ್ರಿಲ್ 26 ರಂದು ನಡೆಯಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಪರ ರೋಡ್ ಶೋ ನಡೆಸಿದರು.
ಅಮಿತ್ ಶಾ ರೋಡ್ ಶೋ
ಅಮಿತ್ ಶಾ ರೋಡ್ ಶೋ

ಬೆಂಗಳೂರು: ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆ ಏಪ್ರಿಲ್ 26 ರಂದು ನಡೆಯಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಪರ ರೋಡ್ ಶೋ ನಡೆಸಿದರು.

ಬೊಮ್ಮನಹಳ್ಳಿಯಲ್ಲಿ ಮಂಗಳವಾರ ತಡರಾತ್ರಿ ನಡೆದ ಅಮಿತ್ ಶಾ ಚುನಾವಣಾ ರ‍್ಯಾಲಿಯಲ್ಲಿ ಅಪಾರ ಸಂಖ್ಯೆಯಲ್ಲಿ ನಾಗರಿಕರು ಪಾಲ್ಗೊಂಡಿದ್ದರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಆರ್.ಅಶೋಕ, ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ಮತ್ತು ಭಾರತೀಯ ಜನತಾ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು ಅಮಿತ್ ಶಾ ಅವರೊಂದಿಗೆ ರೋಡ್ ಶೋನಲ್ಲಿ ಪಾಲ್ಗೊಂಡರು.

ಜನರನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವರು, ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತೇಜಸ್ವಿ ಸೂರ್ಯ ಅವರನ್ನು ಐದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸುವಂತೆ ಮನವಿ ಮಾಡಿದರು. ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಮತ್ತು ಭ್ರಷ್ಟಾಚಾರದ ಸಮಸ್ಯೆಗಳನ್ನು ಎತ್ತಿ ಹಿಡಿದ ಅಮಿತ್ ಶಾ, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಕಾನೂನು ಮತ್ತು ಸುವ್ಯವಸ್ಥೆಗೆ ಕಾಪಾಡುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿಷ್ಕ್ರಿಯತೆಯಿಂದಾಗಿ ದೇಶ ವಿರೋಧಿ ಶಕ್ತಿಗಳು ರಾಜ್ಯಾದ್ಯಂತ ಹೆಚ್ಚಾಗಿದ್ದು, ಅಮಾಯಕ ನಾಗರಿಕರ ಮೇಲೆ ದಾಳಿ ಮಾಡುತ್ತಿವೆ.

ಉಗ್ರಗಾಮಿ ಚಟುವಟಿಕೆಗಳೊಂದಿಗೆ ನಂಟು ಹೊಂದಿರುವ ಸಂಘಟನೆಗಳಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ ಎಂದು ಟೀಕಿಸಿದರು.

ಅಮಿತ್ ಶಾ ರೋಡ್ ಶೋ
ಬೆಂಗಳೂರು ದಕ್ಷಿಣ ಕ್ಷೇತ್ರ: ಗೆಲ್ಲಲು ಸೌಮ್ಯಾ ರೆಡ್ಡಿ ಪಣ; ಅನಂತ್ ಕುಮಾರ್ ಕುಟುಂಬ ಮೌನ; ತೇಜಸ್ವಿ ಸೂರ್ಯ ಗೆಲುವು ಕಠಿಣ!

ಕರ್ನಾಟಕದ ಎಲ್ಲಾ 28 ಲೋಕಸಭಾ ಕ್ಷೇತ್ರಗಳನ್ನು ಎನ್‌ಡಿಎ ಗೆಲ್ಲುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಅಮಿತ್ ಶಾ, ದೇಶದ ಪ್ರಗತಿ ಮತ್ತು ಭದ್ರತೆಯ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಪರಿವರ್ತನಾ ಪ್ರಭಾವವನ್ನು ಶ್ಲಾಘಿಸಿದರು.

ಕರ್ನಾಟಕದ ಜನತೆ ಕಾಂಗ್ರೆಸ್‌ನ ಪೊಳ್ಳು ಭರವಸೆಗಳನ್ನು ತಿರಸ್ಕರಿಸಿ ಪ್ರಧಾನಿ ಮೋದಿಯವರ ಅಭಿವೃದ್ಧಿ ಆಧಾರಿತ ಆಡಳಿತವನ್ನು ಆರಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

"ಒಂದೆರಡು ವರ್ಷಗಳ ಹಿಂದೆ ಡಿಜೆ ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆಗಳ ನಂತರ, ಅಮಿತ್ ಶಾ ಅವರನ್ನು ಭೇಟಿ ಮಾಡಿ ಬೆಂಗಳೂರಿನಲ್ಲಿ ಎನ್ಐಎ ಕಚೇರಿ ಸ್ಥಾಪಿಸಲು ಮನವಿ ಮಾಡಿದ್ದೇನೆ. ಎನ್ಐಎ ಕಚೇರಿಯು ನಮ್ಮ ಭಯೋತ್ಪಾದನೆ ನಿಗ್ರಹ ಪ್ರಯತ್ನಗಳನ್ನು ಗಣನೀಯವಾಗಿ ಬಲಪಡಿಸಿದೆ. ರಾಮೇಶ್ವರಂ ಕೆಫೆ ಸ್ಫೋಟದ ತನಿಖೆ ಪ್ರಕರಣವನ್ನು ಅವರ ಮುಂದಾಳತ್ವದಲ್ಲಿ ನಡೆಸಲಾಗುತ್ತಿದೆ."ಇದಲ್ಲದೆ, ₹ 2,840 ಕೋಟಿ ವೆಚ್ಚದಲ್ಲಿ ಸುರಕ್ಷಿತ ನಗರ ಯೋಜನೆಗೆ ಗೃಹ ಸಚಿವರ ಬೆಂಬಲವು ನಗರದ ಭದ್ರತೆಯನ್ನು ಹೆಚ್ಚಿಸಿದೆ" ಎಂದು ತೇಜಸ್ವಿ ಸೂರ್ಯ ಹೇಳಿದರು.

ಅಮಿತ್ ಶಾ ರೋಡ್ ಶೋ
ಕಾಂಗ್ರೆಸ್ 'ಬುದ್ಧಿಹೀನ ಫ್ರೀಬಿ'ಗಳಿಂದ ಕರ್ನಾಟಕವನ್ನು ದಿವಾಳಿಯತ್ತ ತಳ್ಳುತ್ತಿದೆ: ತೇಜಸ್ವಿ ಸೂರ್ಯ

ಹೊಸೂರು ರಸ್ತೆಯ ಬೊಮ್ಮನಹಳ್ಳಿ ವೃತ್ತದ ಬಳಿಯ ವಿವೇಕಾನಂದ ಪ್ರತಿಮೆ ಬಳಿಯಿಂದ ಆರಂಭವಾದ ರೋಡ್ ಶೋ, ಬನ್ನೇರುಘಟ್ಟದ ​​ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ವರೆಗೂ ನಡೆಯಿತು.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ವಿರುದ್ಧ ಬಿಜೆಪಿ ನಾಯಕ ತೇಜಸ್ವಿ ಸೂರ್ಯ ಸ್ಪರ್ಧಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com