ಮಂಡ್ಯ ಲೋಕಸಭಾ ಕ್ಷೇತ್ರ: ಹೆಚ್ ಡಿಕೆ-ಡಿಕೆಶಿ ನಡುವೆ ಪ್ರತಿಷ್ಠೆ ಕಣವಾಗಿ ಮಾರ್ಪಟ್ಟ ಒಕ್ಕಲಿಗ ಪ್ರಾಬಲ್ಯ ನಾಡು!

ಲೋಕಸಭೆ ಚುನಾವಣೆಯ ಮೊದಲ ಹಂತದ ಬಹಿರಂಗ ಪ್ರಚಾರ ಕೊನೆಯ ದಿನವಾದ ನಿನ್ನೆ ಮಂಡ್ಯದಲ್ಲಿ ಪ್ರಚಾರ ನಡೆಸಿದ ಹೆಚ್ ಡಿ ಕುಮಾರಸ್ವಾಮಿ
ಲೋಕಸಭೆ ಚುನಾವಣೆಯ ಮೊದಲ ಹಂತದ ಬಹಿರಂಗ ಪ್ರಚಾರ ಕೊನೆಯ ದಿನವಾದ ನಿನ್ನೆ ಮಂಡ್ಯದಲ್ಲಿ ಪ್ರಚಾರ ನಡೆಸಿದ ಹೆಚ್ ಡಿ ಕುಮಾರಸ್ವಾಮಿ
Updated on

ಮಂಡ್ಯ: ಒಕ್ಕಲಿಗರ ಪ್ರಾಬಲ್ಯವಿರುವ ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಮತದಾರರ ಮನದಾಳವನ್ನು ಓಲೈಸುವ ಹೋರಾಟದಲ್ಲಿ ಈ ಬಾರಿಯ ಲೋಕಸಭೆ ಚುನಾವಣೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಪ್ರತಿಷ್ಠೆಯ ಕದನವಾಗಿ ಮಾರ್ಪಟ್ಟಿದೆ.

ಬಹಿರಂಗ ಪ್ರಚಾರದ ಕೊನೆಯ ದಿನವಾದ ನಿನ್ನೆ ಬುಧವಾರ ಎರಡೂ ಪಕ್ಷಗಳು ಬೃಹತ್ ರೋಡ್‌ಶೋಗಳನ್ನು ನಡೆಸಿ ಚುನಾವಣೆಯ ಕಾವನ್ನು ಹೆಚ್ಚಿಸಿದವು.

ಆರಂಭದಲ್ಲಿ ಸ್ಥಳೀಯ ವಿಷಯಗಳನ್ನು ಪ್ರಚಾರವಾಗಿ ತೆಗೆದುಕೊಂಡು ಕುಮಾರಸ್ವಾಮಿ ಅವರನ್ನು ಹೊರಗಿನ ಅಭ್ಯರ್ಥಿ ಎಂದು ಕರೆಯುವ ಮೂಲಕ ಕಾಂಗ್ರೆಸ್ ಮೇಲುಗೈ ಸಾಧಿಸಿತು. ಬಿಜೆಪಿಯೊಂದಿಗೆ ಕೈಜೋಡಿಸಲು ಕುಮಾರಸ್ವಾಮಿ ಜಾತ್ಯತೀತ ಮೌಲ್ಯಗಳನ್ನು ಕಳೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿತು. ಇದಕ್ಕೆ ವಿರುದ್ಧವಾಗಿ ಜೆಡಿಎಸ್ ಭಾವನಾತ್ಮಕ ವಿಷಯವನ್ನು ಕೈಗೆತ್ತಿಕೊಂಡಿತು. ಈ ಚುನಾವಣೆಯ ಗೆಲುವು ಕುಮಾರಸ್ವಾಮಿ ಅವರನ್ನು ರಾಜಕೀಯ ಬಿಕ್ಕಟ್ಟಿನಿಂದ ಪಾರು ಮಾಡುತ್ತದೆ ಎಂದು ಜೆಡಿಎಸ್ ಮತದಾರರಿಗೆ ಮನವೊಲಿಸಲು ನೋಡಿತು.

ಕಳೆದ ತಿಂಗಳು ಮೂರನೇ ಬಾರಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ ಕುಮಾರಸ್ವಾಮಿ ಮಂಡ್ಯ ಲೋಕಸಭೆ ಚುನಾವಣೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು. ಈ ಚುನಾವಣೆಯು ಅವರ ರಾಜಕೀಯ ಉಳಿವಿಗಾಗಿ ಮತ್ತು ಜೆಡಿಎಸ್ ಪಕ್ಷದ ಅಸ್ತಿತ್ವದ ಪ್ರಶ್ನೆ ಕೂಡ ಆಗಿದೆ.

ರಾಜ್ಯ ಕಂಡ ಅತ್ಯಂತ ರೈತ ಸ್ನೇಹಿ ಮುಖ್ಯಮಂತ್ರಿ ಎಂದು ತಮ್ಮ ವಿಶ್ವಾಸಾರ್ಹತೆಯನ್ನು ಸಾಬೀತುಪಡಿಸುವ ಅವರ ಪ್ರಯತ್ನಗಳ ಹೊರತಾಗಿ, ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ನರೇಂದ್ರ ಮೋದಿ ಸಂಪುಟಕ್ಕೆ ಸೇರ್ಪಡೆಗೊಳ್ಳಬಹುದು ಎಂಬ ಸುಳಿವನ್ನು ನೀಡಿದ್ದಾರೆ. ಹಲವಾರು ಸಮೀಕ್ಷೆಗಳು ಭವಿಷ್ಯ ನುಡಿದಿರುವಂತೆ ಮೋದಿ ಅವರು ಮತ್ತೆ ಅಧಿಕಾರಕ್ಕೆ ಬರುವುದು ಖಚಿತವಾಗಿರುವುದರಿಂದ ಒಂದು ವೇಳೆ ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದರೂ ಜಿಲ್ಲೆಯ ಜನತೆಗೆ ಅದರಿಂದ ಅಷ್ಟೊಂದು ಸಹಾಯವಾಗಬಹುದು ಎಂದು ಹೇಳಲು ಸಾಧ್ಯವಿಲ್ಲ.

ದೇವೇಗೌಡರ ಕುಟುಂಬದ ಜನಪ್ರಿಯತೆ ಮತ್ತು ಅವರ ಒಕ್ಕಲಿಗ ಸಂಪರ್ಕವನ್ನು ಬಂಡವಾಳ ಮಾಡಿಕೊಂಡು ಕುಮಾರಸ್ವಾಮಿ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿ ಈ ಬಾರಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಕಾರ್ಯಕರ್ತರನ್ನು ತಲುಪಲು ಪ್ರಯತ್ನಿಸುತ್ತಿದ್ದಾರೆ. ಜೆಡಿಎಸ್ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು ಮಂಡ್ಯ ಜಿಲ್ಲೆಯ ಒಣ ನೀರಾವರಿ ಕಾಲುವೆಗಳು, ಕಬ್ಬಿನ ಗದ್ದೆಗಳು ಮತ್ತು ಕೃಷಿ ಕ್ಷೇತ್ರದ ನಷ್ಟವನ್ನು ಪ್ರಸ್ತಾಪಿಸುವ ಮೂಲಕ ರೈತ ಸಮುದಾಯಕ್ಕೆ ತಲುಪಲು ನೋಡುತ್ತಿದೆ.

ಲೋಕಸಭೆ ಚುನಾವಣೆಯ ಮೊದಲ ಹಂತದ ಬಹಿರಂಗ ಪ್ರಚಾರ ಕೊನೆಯ ದಿನವಾದ ನಿನ್ನೆ ಮಂಡ್ಯದಲ್ಲಿ ಪ್ರಚಾರ ನಡೆಸಿದ ಹೆಚ್ ಡಿ ಕುಮಾರಸ್ವಾಮಿ
ಮಂಡ್ಯದಲ್ಲಿ ನಟ Darshan ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: 'ಒಳ್ಳೆ ರಿಸಲ್ಟ್ ಬರುತ್ತೆ'... ಸುಮಲತಾ ಅಂಬರೀಶ್ ಸ್ಪಷ್ಟನೆ!

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕಾಗಿ ಜಾತ್ಯತೀತ ಮೌಲ್ಯಗಳನ್ನು ಕಸಿದುಕೊಳ್ಳುವ ಕುಮಾರಸ್ವಾಮಿ ಅವರನ್ನು ಸೋಲಿಸಬೇಕೆಂದು ಜಿಲ್ಲೆಯ ಮತದಾರರನ್ನು ಕೇಳಿಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಉದ್ಯಮಿ ವೆಂಕಟರಮಣ ಗೌಡ (ಸ್ಟಾರ್ ಚಂದ್ರು) ಅವರು ತಮ್ಮ ಜಿಲ್ಲೆಯ ಜನರ ಸೇವೆ ಮಾಡಲು ಉತ್ಸುಕರಾಗಿರುವ ಶ್ರೀಸಾಮಾನ್ಯ ಎಂದು ಜನತೆಯಲ್ಲಿ ಬಿಂಬಿಸಲು ನೋಡುತ್ತಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ಏಳು ಹಾಲಿ ಶಾಸಕರು ಮತ್ತು ಮೂವರು ಎಂಎಲ್‌ಸಿಗಳನ್ನು ಹೊಂದಿರುವ ಕಾಂಗ್ರೆಸ್, ಒಕ್ಕಲಿಗರು, ಮುಸ್ಲಿಮರು, ದಲಿತರು ಮತ್ತು ಹಿಂದುಳಿದವರು ಸೇರಿದಂತೆ ಇತರ ಸಮುದಾಯಗಳ ಬೆಂಬಲದೊಂದಿಗೆ ವಿಧಾನಸಭೆ ಚುನಾವಣೆಯ ಗೆಲುವನ್ನು ಪುನರಾವರ್ತಿಸುವ ವಿಶ್ವಾಸದಲ್ಲಿದೆ. ಸ್ಯಾಂಡಲ್‌ವುಡ್ ಸ್ಟಾರ್ ದರ್ಶನ್ ಅವರ ಸಕ್ರಿಯ ಪ್ರಚಾರವು ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರುಗೆ ತಾರಾ ಬಲವನ್ನು ತಂದಿದೆ. ಕೃಷಿ ಸಾಲ ಮನ್ನಾ ಮಾಡಿ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ರಕ್ಷಣೆ ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿರುವುದು ಜನತೆಗೆ ಸಂತಸ ತಂದಿದೆ ಎಂದು ರಾಮೇಗೌಡ ಎಂಬುವವರು ಹೇಳುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com