ಕಾಂಗ್ರೆಸ್‌ನಿಂದ ಸುಳ್ಳು ಪ್ರಣಾಳಿಕೆ: ರಾಹುಲ್, ಖರ್ಗೆ ವಿರುದ್ಧ JDS ವರಿಷ್ಠ ಎಚ್‌ಡಿ ದೇವೇಗೌಡ ವಾಗ್ದಾಳಿ

ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಸುಳ್ಳು ಪ್ರಣಾಳಿಕೆ ಬಿಡುಗಡೆ ಮಾಡುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಜೆಡಿಎಸ್‌ ವರಿಷ್ಠ ಎಚ್‌ಡಿ ದೇವೇಗೌಡ ಶುಕ್ರವಾರ ವಾಗ್ದಾಳಿ ನಡೆಸಿದರು.
ಜೆಡಿಎಸ್‌ ವರಿಷ್ಠ ಎಚ್‌ಡಿ ದೇವೇಗೌಡ
ಜೆಡಿಎಸ್‌ ವರಿಷ್ಠ ಎಚ್‌ಡಿ ದೇವೇಗೌಡ

ಹಾಸನ: ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಸುಳ್ಳು ಪ್ರಣಾಳಿಕೆ ಬಿಡುಗಡೆ ಮಾಡುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಜೆಡಿಎಸ್‌ ವರಿಷ್ಠ ಎಚ್‌ಡಿ ದೇವೇಗೌಡ ಶುಕ್ರವಾರ ವಾಗ್ದಾಳಿ ನಡೆಸಿದರು.

ಇಂತಹ ಭರವಸೆಗಳನ್ನು ನೀಡಲು ರಾಹುಲ್ ಗಾಂಧಿ ಮತ್ತು ಖರ್ಗೆ ಪ್ರಧಾನಿಯೋ ಅಥವಾ ಸಿಎಂ ಆಗಿದ್ದಾರೆಯೇ?. 'ಅವರು ಕೇವಲ ಸಾಮಾನ್ಯ ಕಾಂಗ್ರೆಸ್ ಸದಸ್ಯರಷ್ಟೆ' ಎಂದು ಮತದಾನದ ನಂತರ ಸುದ್ದಿಗಾರರಿಗೆ ತಿಳಿಸಿದರು.

ಕಾಂಗ್ರೆಸ್‌ನ ಗ್ಯಾರಂಟಿ ಕಾರ್ಡ್ ಅನ್ನು 'ಸಾಮಾನ್ಯ ಕರಪತ್ರ' ಎಂದು ಕರೆದ ಅವರು, ಸೋಲಿನ ಭೀತಿಯಿಂದ ಕರಪತ್ರ ಹಂಚುವ ಮೂಲಕ ಬಡವರನ್ನು ಮೂರ್ಖರನ್ನಾಗಿಸಿರುವ ಕಾಂಗ್ರೆಸ್, ಕೇರಳ, ತೆಲಂಗಾಣ, ಆಂಧ್ರಪ್ರದೇಶ ಅಥವಾ ಯಾವುದೇ ರಾಜ್ಯದಲ್ಲಿ ಕರಪತ್ರವನ್ನು ಬಿಡುಗಡೆ ಮಾಡಿಲ್ಲ ಎಂದು ದೂರಿದರು.

ಕರಪತ್ರದಲ್ಲಿ ಮುಖ್ಯಮಂತ್ರಿ ಅಥವಾ ಅವರ ಉಪಮುಖ್ಯಮಂತ್ರಿಗಳ ಸಹಿ ಇರಬೇಕು. ವಿದ್ಯಾವಂತರು ಇಂತಹ ಪ್ರಣಾಳಿಕೆಯನ್ನು ನಂಬುವುದಿಲ್ಲ. ಜೆಡಿಎಸ್‌ನ ಎಚ್‌ಡಿ ಕುಮಾರಸ್ವಾಮಿ ಮತ್ತು ಪ್ರಜ್ವಲ್ ರೇವಣ್ಣ ಅವರನ್ನು ಸೋಲಿಸುವ ಉದ್ದೇಶದಿಂದ ಕಾಂಗ್ರೆಸ್ ಕರಪತ್ರವನ್ನು ಹಂಚಿದೆ. ಜನರನ್ನು ದಾರಿತಪ್ಪಿಸುತ್ತಿರುವ ಬಗ್ಗೆ ಜೆಡಿಎಸ್ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದೆ ಎಂದು ದೇವೇಗೌಡರು ತಿಳಿಸಿದರು.

ಜೆಡಿಎಸ್‌ ವರಿಷ್ಠ ಎಚ್‌ಡಿ ದೇವೇಗೌಡ
ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ನಾಯಕರಿಂದ ಮತದಾರರಿಗೆ ಗಿಫ್ಟ್ ಕಾರ್ಡ್​​ ಹಂಚಿಕೆ: ಹೆಚ್ ಡಿ ಕುಮಾರಸ್ವಾಮಿ ಆರೋಪ

ಕಲಬುರಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುವ ಬದಲು ಅವರ ಮೈಮೇಲೆ ಮಣ್ಣು ಮತ್ತು ಅಂತಿಮ ಸಂಸ್ಕಾರಕ್ಕೆ ಬಳಸುವ ಸಾಮಗ್ರಿಗಳನ್ನು ಹಾಕಬಹುದು ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಸಾರ್ವಜನಿಕ ಸಮಾರಂಭದಲ್ಲಿ ಇಂತಹ ಭಾವನಾತ್ಮಕ ಹೇಳಿಕೆಗಳನ್ನು ನೀಡುವ ಅಗತ್ಯವಿಲ್ಲ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com