ಹೆಚ್ ಡಿಕೆ-ಡಿಕೆಶಿ ನಡುವೆ ಮುಂದುವರಿದ ವಾಕ್ಸಮರ: 'ಹೇಡಿ' ಎಂದು ಪರಸ್ಪರ ಟೀಕೆ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮತದಾರರಿಗೆ ಹೇಡಿಯಂತೆ ರಾತ್ರಿಯಿಡೀ ಡಿ ಕೆ ಶಿವಕುಮಾರ್ ಗಿಫ್ಟ್ ಕೂಪನ್ ವಿತರಿಸಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದರು.
ಹೆಚ್ ಡಿ ಕುಮಾರಸ್ವಾಮಿ-ಡಿ ಕೆ ಶಿವಕುಮಾರ್
ಹೆಚ್ ಡಿ ಕುಮಾರಸ್ವಾಮಿ-ಡಿ ಕೆ ಶಿವಕುಮಾರ್

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ನಡುವಿನ ರಾಜಕೀಯ ವಾಗ್ಯುದ್ಧ ನಿನ್ನೆ ಚುನಾವಣೆ ದಿನವೂ ಮುಂದುವರಿದಿದ್ದು, ಒಬ್ಬರನ್ನೊಬ್ಬರು ಹೇಡಿಗಳು ಎಂದು ಕರೆದುಕೊಂಡಿದ್ದಾರೆ.

ಡಿ ಕೆ ಶಿವಕುಮಾರ್ ಅವರು ತಮ್ಮ ಕಿರಿಯ ಸಹೋದರ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ಪರ ಪ್ರಚಾರ ನಡೆಸಿದರೆ, ಕುಮಾರಸ್ವಾಮಿ ಅವರು ಬಿಜೆಪಿ ಟಿಕೆಟ್ ನಲ್ಲಿ ಸ್ಪರ್ಧಿಸಿರುವ ತಮ್ಮ ಬಾಮೈದ ಡಾ.ಸಿ.ಎನ್.ಮಂಜುನಾಥ್ ಪರ ಪ್ರಚಾರ ನಡೆಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮತದಾರರಿಗೆ ಹೇಡಿಯಂತೆ ರಾತ್ರಿಯಿಡೀ ಡಿ ಕೆ ಶಿವಕುಮಾರ್ ಗಿಫ್ಟ್ ಕೂಪನ್ ವಿತರಿಸಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದರು. ಮತದಾರರಿಗೆ 10 ಸಾವಿರ ರೂಪಾಯಿ ಕೂಪನ್ ವಿಚರಿಸಲಾಗುತ್ತಿದೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್, ಅವರು ನಮಗೆ ಭಯಪಡುತ್ತಿದ್ದಾರೆ. ಕುಮಾರಸ್ವಾಮಿ ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸ್ಪರ್ಧಿಸಬೇಕಿತ್ತು. ಆದರೆ ಸೋಲಿನ ಭಯದಿಂದ ಹೇಡಿಯಂತೆ ಮಂಡ್ಯಕ್ಕೆ ಓಡಿ ಹೋಗಿದ್ದಾರೆ ಎಂದು ಟೀಕಿಸಿದರು. ರಣಹೇಡಿ ನಾವಲ್ಲ, ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ರಾತ್ರಿ ಹೋಗಿ ಜನರಿಗೆ ಕ್ಯೂಆರ್ ಕೋಡ್ ಇರುವ ಗಿಫ್ಟ್ ಕೂಪನ್ ವಿತರಿಸಿದ ವ್ಯಕ್ತಿ ಹೇಡಿತನದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ತಿರುಗೇಟು ನೀಡಿದರು.

505 ರೂಪಾಯಿ, ಮಲೆ ಮಹದೇಶ್ವರ ದೇವಸ್ಥಾನದ ಲಡ್ಡು, ಖಾತರಿ ಕಾರ್ಡ್ ಗಳನ್ನು ರಾತ್ರಿಯಿಡೀ ವಿತರಿಸಲಾಗಿದೆ ಎಂದರು. ಕಾರ್ಡ್ ವಿತರಿಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ತಡೆದಿದ್ದು, ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ. “ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ಬೆಂಗಳೂರು ಗ್ರಾಮಾಂತರದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯುತ್ತಿಲ್ಲ ಎಂದು ಕುಮಾರಸ್ವಾಮಿ ಆರೋಪಿಸಿದರು.

ಹೆಚ್ ಡಿ ಕುಮಾರಸ್ವಾಮಿ-ಡಿ ಕೆ ಶಿವಕುಮಾರ್
ಮಂಡ್ಯ ಲೋಕಸಭಾ ಕ್ಷೇತ್ರ: ಹೆಚ್ ಡಿಕೆ-ಡಿಕೆಶಿ ನಡುವೆ ಪ್ರತಿಷ್ಠೆ ಕಣವಾಗಿ ಮಾರ್ಪಟ್ಟ ಒಕ್ಕಲಿಗ ಪ್ರಾಬಲ್ಯ ನಾಡು!

ಪಕ್ಷದಿಂದ ಕೇವಲ ‘ಮ್ಯಾನಿಫೆಸ್ಟೋ ಕಾರ್ಡ್’ಗಳನ್ನು ಹಂಚಲಾಗಿದೆ ಎಂದು ಶಿವಕುಮಾರ್ ಹೇಳಿದರು. ಕುಮಾರಸ್ವಾಮಿ ಅವರಿಗೆ ನಾಚಿಕೆ ಇಲ್ಲ. ಅವರು ಮತ್ತು ಮುನಿರತ್ನ ಗೋಲ್ಡ್ ಕಾರ್ಡ್‌ಗಳನ್ನು ನೀಡುತ್ತಿದ್ದಾರೆ. ನಾವು ನಮ್ಮ ಪ್ರಣಾಳಿಕೆ ಕಾರ್ಡ್‌ಗಳನ್ನು ಮಾತ್ರ ವಿತರಿಸುತ್ತಿದ್ದೇವೆ. ಕಾಂಗ್ರೆಸ್ ಕಾರ್ಯಕರ್ತರ ಮೇಲೆ ನಡೆದ ಐಟಿ ದಾಳಿ ಕುರಿತು ಶಿವಕುಮಾರ್, ಐಟಿ ಅಧಿಕಾರಿಯೊಬ್ಬರು ಕಾಂಗ್ರೆಸ್ ಬ್ಲಾಕ್ ನಾಯಕರನ್ನು ಬಿಜೆಪಿಗೆ ಸೇರುವಂತೆ ಕೇಳಿದ್ದಾರೆ. ಡಿ ಕೆ ಸುರೇಶ್ ನ ಕಾರು ಚಾಲಕನ ಪತ್ನಿ ಮತ್ತು ಮಕ್ಕಳ ಮೇಲೆ ಹಲ್ಲೆ ನಡೆಸಿದ್ದಾರೆ. ದೂರು ನೀಡಲು ಡಿಜಿ ಅವರನ್ನು ಭೇಟಿ ಮಾಡುತ್ತೇನೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com