ಲೋಕಸಮರ 2024: 14 ಕ್ಷೇತ್ರಗಳ ಚುನಾವಣೆ ಮುಕ್ತಾಯ, ಫಲಿತಾಂಶ ಕುರಿತು ಬಿಸಿಬಿಸಿ ಚರ್ಚೆ!

ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಚುನಾವಣೆ ಶುಕ್ರವಾರ ಮುಕ್ತಾಯಗೊಂಡಿದ್ದು, ಇದರ ಬೆನ್ನಲ್ಲೇ ಫಲಿತಾಂಶ ಕುರಿತು ಚರ್ಚೆಗಳು ಆರಂಭವಾಗಿವೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಚುನಾವಣೆ ಶುಕ್ರವಾರ ಮುಕ್ತಾಯಗೊಂಡಿದ್ದು, ಇದರ ಬೆನ್ನಲ್ಲೇ ಫಲಿತಾಂಶ ಕುರಿತು ಚರ್ಚೆಗಳು ಆರಂಭವಾಗಿವೆ.

ನಗರ ಪ್ರದೇಶಗಳಲ್ಲಿ ಕಡಿಮೆ ಮತದಾನವಾಗಿರುವ ಹಿನ್ನೆಲೆಯಲ್ಲಿ ಹೆಚ್ಚು ಮತದಾನವಾಗಿರುವ ಬೆಂಗಳೂರು ಗ್ರಾಮಾಂತರ ಕುರಿತು ಹೆಚ್ಚು ಚರ್ಚೆಗಳಾಗುತ್ತಿವೆ.

ಬೆಂಗಳೂರು ದಕ್ಷಿಣ ಮತ್ತು ಆರ್‌ಆರ್‌ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಶೇ.56.08 ಮತ್ತು ಶೇ.56.06 ಮತದಾನವಾಗಿದ್ದರೆಸ ಆನೇಕಲ್‌ನಲ್ಲಿ ಶೇ.60.69, ಕನಕಪುರದಲ್ಲಿ ಶೇ.84.77 ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ತವರು ಕ್ಷೇತ್ರ ಚನ್ನಪಟ್ಟಣದಲ್ಲಿ ಶೇ.84.61, ಮಾಗಡಿಯಲ್ಲಿ ಶೇ,84.96, ರಾಮನಗರ ಶೇ.84.56 ಮತ್ತು ಕುಣಿಗಲ್ ಶೇ.85.26ರಷ್ಟು ಮತದಾನವಾಗಿದೆ. ಆದರೆ ಇಡೀ ಕ್ಷೇತ್ರದ ಸರಾಸರಿ ಶೇ.68.30ರಷ್ಟಾಗಿದೆ. ಈ ಬಾರಿ ಪುರುಷರ (ಶೇ.67.60) ಪೈಕಿ ಶೇ.69.03 ರಷ್ಟು ಮಹಿಳೆಯರು ಮತದಾನ ಮಾಡಿದ್ದಾರೆ. ಮತದಾನದ ದಿನದಂದು ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಪರಸ್ಪರ ಆರೋಪಗಳನ್ನು ಮಾಡಿದ್ದವು. ಅಲ್ಲದೆ, ಗೆಲವು ಕುರಿತು ಉಭಯ ಪಕ್ಷಗಳ ನಡುವೆ ಚರ್ಚೆಗಳೂ ಕೂಡ ಆರಂಭಿಸಿವೆ.

ಮತದಾನ ಕುರಿತು ಪ್ರತಿಕ್ರಿಯೆ ನೀಡಿರುವ ಡಿಕೆ.ಶಿವಕುಮಾರ್ ಅವರು, ಮೊದಲ ಹಂತದ ಚುನಾವಣೆಯಲ್ಲಿಯ ಎರಡಂಕಿಯ ಗೆಲುವು ಸಾಧಿಸಲಿದೆ ಎಂದು ಹೇಳಿದ್ದಾರೆ.

ಈ ನಡುವೆ ಬಿಜೆಪಿಯ ಡಾ.ಸಿ.ಎನ್.ಮಂಜುನಾಥ್ ಅವರಿಗಿಂತ ತಮ್ಮ ಅಭ್ಯರ್ಥಿ ಡಿ.ಕೆ.ಸುರೇಶ್ ಅವರೇ ಮೇಲುಗೈ ಸಾಧಿಸಲಿದ್ದಾರೆಂದು ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದರೆ, ಮೈತ್ರಿ ಪರಿಣಾಮ ಗ್ರಾಮೀಣ ಪ್ರದೇಶದಲ್ಲಿ ಮತದಾನ ಪ್ರಮಾಣ ಏರಿಕೆಯಾಗಿದೆ ಎಂದು ಬಿಜೆಪಿ-ಜೆಡಿಎಸ್ ನಾಯಕರು ಹೇಳುತ್ತಿದ್ದಾರೆ.

ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ಮುಖ್ಯಸ್ಥ ರಮೇಶ್ ಬಾಬು ಅವರು ಮಾತನಾಡಿ, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಮತದಾನದ ಶೇಕಡಾವಾರು ಫಲಿತಾಂಶಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಐದು ಗ್ಯಾರಂಟಿ ಯೋಜನೆಗಳು ಮತ್ತು ಮಹಿಳಾ ಮತದಾರರು ನಮ್ಮ ಪರವಾಗಿ ವಾಲಿರುವುದರಿಂದ ನಾವು ಬೆಂಗಳೂರು ಸೇರಿದಂತೆ 14 ಕ್ಷೇತ್ರಗಳ ಪೈಕಿ ಎಂಟು ಸ್ಥಾನಗಳಲ್ಲಿ ಗೆಲವು ಸಾಧಿಸುತ್ತೇವೆಂದು ಹೇಳಿದ್ದಾರೆ. ಅಲ್ಲದೆ, ಮತದಾರರ ಪಟ್ಟಿಯಲ್ಲಿ ಹಲವರ ಹೆಸರು ನಾಪತ್ತೆಯಾಗಿದ್ದು, ನಗರ ಪ್ರದೇಶದಲ್ಲಿ ಮತದಾನ ಪ್ರಮಾಣ ಕಡಿಮೆಯಾಗಲು ಇದೂ ಒಂದು ಕಾರಣವಾಗಿದೆ ಎಂದು ಆರೋಪಿಸಿದ್ದಾರೆ.

ಸಾಂದರ್ಭಿಕ ಚಿತ್ರ
Loksabha Election 2024: ಕರ್ನಾಟಕದಲ್ಲಿ ದಾಖಲೆಯ ಶೇ.69.56ರಷ್ಟು ಮತದಾನ, ಚುನಾವಣಾ ಆಯೋಗದ ಪರಿಷ್ಕೃತ ಮಾಹಿತಿ!

ರಾಜಾಜಿನಗರದ ಬಿಜೆಪಿ ಶಾಸಕ ಎಸ್ ಸುರೇಶ್ ಕುಮಾರ್ ಅವರು ಮಾತನಾಡಿ, ಕ್ಷೇತ್ರದಲ್ಲಿ ಕಡಿಮೆ ಮತದಾನವಾಗಲು ಕೆಲವು ಮತದಾರರು ಅನೇಕ ಸ್ಥಳಗಳಲ್ಲಿ ಮತದಾನ ಮಾಡುವ ಹಕ್ಕನ್ನು ಹೊಂದಿರುವುದೂ ಕಾರಣವಾಗಿದೆ. ಮತದಾರರೊಬ್ಬರಿಗೆ ಮತ ಚಲಾಯಿಸಲು ವಿನಂತಿಸಿದಾಗ, ಅವರು ತಮ್ಮ ಹೆಸರು ಮೂರು ವಿಭಿನ್ನ ಕ್ಷೇತ್ರಗಳಲ್ಲಿದ್ದು, ಬೆಂಗಳೂರಿನಲ್ಲಿ ಮತ ಚಲಾಯಿಸುವುದಾಗಿ ಉತ್ತರಿಸಿದರು. ಗ್ರಾಮಾಂತರ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ನಾನು ಇಷ್ಟಪಡುವ ವ್ಯಕ್ತಿಯಾಗಿದ್ದು, ಅವರಿಗೆ ಮತ ಹಾಕುತ್ತೇನೆಂದು ಹೇಳಿದರು.

ರಾಜಾಜಿನಗರದಲ್ಲಿ ಶೇ.51.1ರಷ್ಟು ಮತದಾನವಾಗಿದೆ. ಬೆಂಗಳೂರು ಸೆಂಟ್ರಲ್‌ನ ಬಿಜೆಪಿ ಲೋಕಸಭಾ ಅಭ್ಯರ್ಥಿ ಪಿಸಿ ಮೋಹನ್ ಅವರು 40,000 ಕ್ಕೂ ಹೆಚ್ಚು ಮತಗಳ ಮುನ್ನಡೆ ಸಾಧಿಸಲಿದ್ದಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿಖಾನ್ ಅವರು ಭರ್ಜರಿ ಪ್ರಚಾರ ನಡೆಸಿದ್ದರಿಂದ ಗೆಲವು ಸಿಗುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

ಬೆಂಗಳೂರು ಉತ್ತರದಲ್ಲಿ (54.45% ಮತದಾನ) ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಆರ್‌ಎಸ್‌ಎಸ್ ಮಾಜಿ ಸದಸ್ಯ ಪ್ರೊ.ಎಂ.ವಿ. ರಾಜೀವ್ ಗೌಡ ವಿರುದ್ಧ ಸ್ಪರ್ಧಿಸಿದ್ದು, ಬೆಂಗಳೂರು ದಕ್ಷಿಣದಲ್ಲಿ (53.17%) ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ ಅವರ ವಿರುದ್ದ ಕಣಕ್ಕಿಳಿದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com