ಪ್ರಜ್ವಲ್ ರೇವಣ್ಣ ವಿಡಿಯೋ ಬಗ್ಗೆ ಪ್ರಧಾನಿ ಮೋದಿ, ಎನ್‌ಡಿಎ ನಾಯಕರು ಪ್ರತಿಕ್ರಿಯೆ ನೀಡಬೇಕು: ಡಿಕೆ.ಶಿವಕುಮಾರ್

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಹಾಸನದ ಪ್ರಭಾವಿ ನಾಯಕರೊಬ್ಬರ ವಿಡಿಯೋ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಉತ್ತರ ನೀಡಬೇಕು ಎಂದು ಡಿಸಿಎಂ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ.
ಡಿಕೆ.ಶಿವಕುಮಾರ್
ಡಿಕೆ.ಶಿವಕುಮಾರ್
Updated on

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಹಾಸನದ ಪ್ರಭಾವಿ ನಾಯಕರೊಬ್ಬರ ವಿಡಿಯೋ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಉತ್ತರ ನೀಡಬೇಕು ಎಂದು ಡಿಸಿಎಂ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಹಾಸನ ಸಂಸದರ ಪೆನ್ ಡ್ರೈವ್ ವಿಚಾರವಾಗಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಶಿವಕುಮಾರ್ ಅವರು ಉತ್ತರಿಸಿದರು.

ರಾಜ್ಯ ಮಹಿಳಾ ಆಯೋಗವು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಹಾಸನ ನಾಯಕರ ವಿರುದ್ಧ ಲೈಂಗಿಕ ಹಗರಣ ಆರೋಪ ಬರುತ್ತಿದ್ದು, ಈ ಬಗ್ಗೆ ಎಸ್ಐಟಿ ತನಿಖೆ ಮಾಡಬೇಕು ಎಂದು ಕೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು.

ಕುಮಾರಸ್ವಾಮಿ ಅವರು ತೋರಿಸುತ್ತಿದ್ದ ಪೆನ್ ಡ್ರೈವ್ ಯಾವುದು, ಅದರಲ್ಲಿ ಏನಿದೆ ಎಂಬುದು ಆಗ ನನಗೆ ಗೊತ್ತಿರಲಿಲ್ಲ. ಅದರಲ್ಲಿ ಏನಿದೆ ಎಂದು ಈಗ ಗೊತ್ತಾಯಿತು. ಈ ಪೆನ್ ಡ್ರೈವ್ ಬಗ್ಗೆ ಕುಮಾರಣ್ಣನಿಗೆ ಚೆನ್ನಾಗಿ ಗೊತ್ತು. ಅವರ ಜೇಬಿನಲ್ಲೇ ಇಟ್ಟುಕೊಂಡಿದ್ದನ್ನು ಮಾಧ್ಯಮದವರಿಗೆ ತೋರಿಸಿದ್ದರು. ಹೀಗಾಗಿ ಇದರ ಬಗ್ಗೆ ಕುಮಾರಸ್ವಾಮಿ ಅವರನ್ನು ನೀವು ಕೇಳಬೇಕು. ಇದಕ್ಕೆ ಉತ್ತರಿಸಲು ಅವರೇ ಸೂಕ್ತ ವ್ಯಕ್ತಿ ಎಂದರು.

ಡಿಕೆ.ಶಿವಕುಮಾರ್
10 ವರ್ಷ ಬಿಜೆಪಿಗೆ ಅಧಿಕಾರ ಕೊಟ್ಟಿದ್ದೀರಿ, ಇದೀಗ ಬದಲಾವಣೆಯತ್ತ ಮುಖ ಮಾಡಿ: ಜನತೆಗೆ ಡಿಕೆ.ಶಿವಕುಮಾರ್

ಮಾಧ್ಯಮಗಳು ಈ ಹಗರಣದ ವಿಚಾರದಲ್ಲಿ ಸುಳ್ಳು ಹೇಳುತ್ತಿವೆ. ಅದು ಬರೀ ಹಾಸನದ ನಾಯಕನದಲ್ಲ. ಹಾಸನ ಲೋಕಸಭಾ ಕ್ಷೇತ್ರದ ಎಡಿಎ ಮೈತ್ರಿ ಕೂಟದ ಅಭ್ಯರ್ಥಿಯದ್ದು, ಸಂಸದನದ್ದು. ಹೀಗಾಗಿ ಈ ವಿಚಾರವಾಗಿ ಪ್ರಧಾನಮಂತ್ರಿಗಳು, ವಿಜಯೇಂದ್ರ, ಶೋಭಕ್ಕ, ಅಶೋಕ್, ಕುಮಾರಣ್ಣ, ಗಂಡಸ್ಥನದ ಬಗ್ಗೆ ಮಾತನಾಡುತ್ತಿದ್ದ ಅಶ್ವತ್ಥ್ ನಾರಾಯಣ್ ಅವರು ಉತ್ತರ ನೀಡಬೇಕು. ನಮ್ಮ ಹೆಸರಿಗೆ ಮಸಿ ಬಳಿಯಲು ಈ ರೀತಿ ಮಾತನಾಡುತ್ತಿದ್ದಾರೆ ಎಂದು ಅವರೇ ದೂರು ಕೊಟ್ಟಿರುವ ಬಗ್ಗೆ ಮಾಧ್ಯಮಗಳಲ್ಲಿ ಓದಿದೆ. ಮಹಿಳಾ ಆಯೋಗದ ಅಧ್ಯಕ್ಷರು ಇದೆಲ್ಲವನ್ನು ನೋಡಿ ರಾಜ್ಯ ಗೃಹ ಸಚಿವರು ಹಾಗೂ ಸಿಎಂಗೆ ಪತ್ರ ಬರೆದಿದ್ದಾರೆ. ಈ ವಿಚಾರದಲ್ಲಿ ನೀವು (ಮಾಧ್ಯಮದವರು) ಯಾಕೆ ಮೌನ ತಾಳುತ್ತಿದ್ದೀರಿ? ಈ ವಿಚಾರದಲ್ಲಿ ನೀವು ರಾಜ್ಯದ ಜನತೆಗೆ ಬೆಳಕು ಚೆಲ್ಲಬೇಕು ಎಂದು ಮನವಿ ಮಾಡುತ್ತೇನೆ ಎಂದು ಹೇಳಿದರು.

ಎಸ್ಐಟಿ ತನಿಖೆ ಬಗ್ಗೆ ಸರ್ಕಾರದ ನಿಲುವೇನು ಎಂಬುದಕ್ಕೆ ಪ್ರತಿಕ್ರಿಯಿಸಿ, “ಈ ಬಗ್ಗೆ ಮುಖ್ಯಮಂತ್ರಿ, ಗೃಹಮಂತ್ರಿಗಳನ್ನು ಕೇಳಬೇಕು. ನಾನು ಸರ್ಕಾರದ ಭಾಗವಾಗಿದ್ದರೂ ಇನ್ನೂ ಈ ಬಗ್ಗೆ ಸಂಬಂಧಪಟ್ಟ ಸಚಿವರು ಹಾಗೂ ಸಿಎಂ ಜತೆ ಚರ್ಚೆ ಮಾಡಲು ಆಗಿಲ್ಲ ಎಂದು ತಿಳಿಸಿದರು.

ಸಂತ್ರಸ್ತ ಮಹಿಳೆಯರ ಪರವಾಗಿ ಕಾಂಗ್ರೆಸ್ ನಿಲ್ಲಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮಗಳು ಬಹುಮುಖ್ಯ ಆಧಾರಸ್ತಂಭ. ನೀವು ನಿಮ್ಮ ನಡುವಣ ಪೈಪೋಟಿ, ಆಂತರಿಕ ವಿಚಾರಕ್ಕೆ, ಬೇರೆಯವರಿಗೆ ಹೆಸರು ಬರುತ್ತದೆ ಎಂಬ ಕಾರಣಕ್ಕೆ ಇಂತಹ ದೊಡ್ಡ ವಿಚಾರಗಳನ್ನು ಮುಚ್ಚಿಹಾಕುತ್ತಿರುವುದು ನಿಮಗೆ ಶೋಭೆ ತರುವುದಿಲ್ಲ ಎಂದು ಭಾವಿಸುತ್ತೇನೆ. ನಮ್ಮ ಆತ್ಮಸಾಕ್ಷಿಗಾದರೂ ನಾವು ಕೆಲಸ ಮಾಡಬೇಕು ಅಲ್ಲವೇ ಎಂದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com