ನೂರಾರು ಮಹಿಳೆಯರ ಜತೆ ಪ್ರಜ್ವಲ್ ರೇವಣ್ಣ ರಾಸಲೀಲೆ: ಜೆಡಿಎಸ್ ಸಂಸದನ ಬಂಧನಕ್ಕೆ ಕಾಂಗ್ರೆಸ್ ಆಗ್ರಹ

ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನೆ.
ಅಲ್ಕಾ ಲಂಬಾ
ಅಲ್ಕಾ ಲಂಬಾ

ಬೆಂಗಳೂರು: ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತು.

ಇಂದು ಹುಬ್ಬಳ್ಳಿ, ಹಾಸನ ಮತ್ತು ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು ಮತ್ತು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ 33 ವರ್ಷದ ಮೊಮ್ಮಗನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಬೆಂಗಳೂರಿನಲ್ಲಿ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಂಬಾ ನೇತೃತ್ವದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿ ಎದುರು ಜೆಡಿಎಸ್ ಸಂಸದನ ವಿರುದ್ಧ ಪ್ರತಿಭಟನೆ ನಡೆಸಲಾಯಿತು.

ಅಲ್ಕಾ ಲಂಬಾ
ವಿದೇಶದಿಂದ ಪ್ರಜ್ವಲ್ ರೇವಣ್ಣನನ್ನು ವಾಪಸ್ ಕರೆಸಿಕೊಳ್ಳುತ್ತೇವೆ, ವಿಡಿಯೋ ಪರೀಕ್ಷೆಗೆ ಎಫ್​ಎಸ್​ಎಲ್​​ಗೆ ರವಾನೆ: ಡಾ ಪರಮೇಶ್ವರ್

ನೂರಾರು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣವೂ ಅತ್ಯಂತ ಭಯಾನಕವಾಗಿದ್ದು, ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ ಎಂದು ಅಲ್ಕಾ ಲಂಬಾ ಹೇಳಿದ್ದಾರೆ.

"ಕಳೆದ ಕೆಲವು ವರ್ಷಗಳಿಂದ ಸಂಸದ ಪ್ರಜ್ವಲ್ ರೇವಣ್ಣ ಅವರು ನೂರಾರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ, ದೌರ್ಜನ್ಯ ಎಸಗಿದ 3,000 ಕ್ಕೂ ಹೆಚ್ಚು ವಿಡಿಯೋಗಳು ಕನ್ನಡಿಗರು ಮತ್ತು ಭಾರತೀಯರ ಆತ್ಮಸಾಕ್ಷಿಯನ್ನು ಅಲ್ಲಾಡಿಸಿವೆ" ಎಂದು ಅವರು ಹೇಳಿದರು.

ಪ್ರಜ್ವಲ್ ರೇವಣ್ಣ ಅವರು ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಹಲವು ವಿಡಿಯೋಗಳು ಬಹಿರಂಗವಾದ ನಂತರ ಹಾಸನ ಸಂಸದ ವಿರುದ್ಧದ ಆರೋಪಗಳ ತನಿಖೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಭಾನುವಾರ ವಿಶೇಷ ತನಿಖಾ ತಂಡವನ್ನು ರಚಿಸಿದೆ ಮತ್ತು ತನಿಖೆಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಎಸ್‌ಐಟಿಗೆ ಸೂಚಿಸಲಾಗಿದೆ.

ಪ್ರಜ್ವಲ್ ಭಾಗಿಯಾಗಿದ್ದಾರೆ ಎನ್ನಲಾದ ರಾಸಲೀಲೆ ವಿಡಿಯೋ ತುಣುಕುಗಳು ಇತ್ತೀಚಿನ ದಿನಗಳಲ್ಲಿ ಹಾಸನದಲ್ಲಿ ಬಾರಿ ಸದ್ದು ಮಾಡಲಾರಂಭಿಸಿದ್ದವು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com