ಕರ್ನಾಟಕ ಕುರಿತು 'ಮಲತಾಯಿ ಧೋರಣೆ': MGNREGS ಕಾರ್ಮಿಕರಿಗೆ ವೇತನ ಯಾವಾಗ? ಮೋದಿ ಸರ್ಕಾರಕ್ಕೆ Congress ಚಾಟಿ!

ಕೇಂದ್ರದ ಮೋದಿ ಸರ್ಕಾರ ಕರ್ನಾಟಕದ ಕುರಿತು ಮಲತಾಯಿ ಧೋರಣೆ ಅನುಸರಿಸುತ್ತಿದ್ದು, ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ತೀವ್ರ ಕಿಡಿಕಾರಿದೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ಬೆಂಗಳೂರು: ಕೇಂದ್ರದ ಮೋದಿ ಸರ್ಕಾರ ಕರ್ನಾಟಕದ ಕುರಿತು ಮಲತಾಯಿ ಧೋರಣೆ ಅನುಸರಿಸುತ್ತಿದ್ದು, ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ತೀವ್ರ ಕಿಡಿಕಾರಿದೆ.

ಕರ್ನಾಟಕದಲ್ಲಿರುವ ಪ್ರಮುಖ ಸಮಸ್ಯೆಗಳ ಬಗ್ಗೆ ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, 'ಮೋದಿ ಸರ್ಕಾರ ಕರ್ನಾಟಕದ ಕುರಿತು ಮಲತಾಯಿ ಧೋರಣೆ ಅನುಸರಿಸುತ್ತಿದ್ದು, ರಾಜ್ಯಕ್ಕೆ ನೀಡಬೇಕಾದ ನಿಧಿಯನ್ನು, ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿಲ್ಲ' ಎಂದು ಹೇಳಿದೆ.

ಪ್ರಧಾನಿ ಮೋದಿ
ದೇಶದ ರಾಜ-ರಾಣಿಯರನ್ನು ಕಾಂಗ್ರೆಸ್ ಅವಮಾನಿಸಿದೆ ಹೇಳಿಕೆ: ಪ್ರಧಾನಿ ಮೋದಿ ವಿರುದ್ಧ ಗುಡುಗಿದ ಸಿಎಂ ಸಿದ್ದರಾಮಯ್ಯ

ಟ್ವಿಟರ್ ನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಕರ್ನಾಟಕಕ್ಕೆ ಸಂಬಂಧಿಸಿದ ಹಲವಾರು ಪ್ರಶ್ನೆಗಳನ್ನು ಮೋದಿ ಸರ್ಕಾರದ ಮುಂದಿರಿಸಿದ್ದಾರೆ. 'ಕರ್ನಾಟಕದ ನರೇಗಾ ಕಾರ್ಮಿಕರಿಗೆ ಮೋದಿ ಸರ್ಕಾರ ವೇತನ ನೀಡುವುದು ಯಾವಾಗ? “ಬಾಗಲಕೋಟೆ – ಕುಡಚಿ ನಡುವಣ ರೈಲ್ವೇ ಮಾರ್ಗ ನೀಡಲು ಮೋದಿ ಸರ್ಕಾರ ವಿಫಲವಾಗಿದ್ದೇಕೆ? ಮಹಾದಾಯಿ ಮತ್ತು ಭದ್ರಾ ಮೇಲ್ದಂಡೆ ಯೋಜನೆಗೆ ಮೋದಿ ಸರ್ಕಾರ ತಡೆ ಹಿಡಿದಿರುವುದೇಕೆ? ಕರ್ನಾಟಕದ ನರೇಗಾ ಕಾರ್ಮಿಕರಿಗೆ ಮೋದಿ ಸರ್ಕಾರ ವೇತನ ನೀಡುವುದು ಯಾವಾಗ?” ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿ ಸುಳ್ಳಿನ ಬಗ್ಗೆ ಪಟ್ಟಿ

ಇದೇ ವೇಳೆ ಪ್ರಧಾನಿ ಮೋದಿ ಸುಳ್ಳು ಹೇಳುತ್ತಿದ್ದಾರೆ ಎಂದು ಕಿಡಿಕಾರಿರುವ ಕಾಂಗ್ರೆಸ್, ಪಟ್ಟಿಯನ್ನೇ ಬಿಡುಗಡೆ ಮಾಡಿದೆ.

1. ಕಳೆದ 8 ವರ್ಷಗಳಿಂದ ನೈಋತ್ಯ ರೈಲ್ವೆಯಲ್ಲಿ ಬಾಗಲಕೋಟೆ ಮತ್ತು ಕುಡಚಿ ನಡುವಣ ರೈಲ್ವೇ ಮಾರ್ಗ ವಿಳಂಬವಾಗಿದೆ. 142 ಕಿ.ಮೀ ಉದ್ದದ ಈ ಮಾರ್ಗದಲ್ಲಿ ಕೇವಲ 46 ಕಿ.ಮೀ ಅಂದರೆ ಕೇವಲ 33% ಮಾತ್ರ ಕಾಮಗಾರಿ ಪೂರ್ಣಗೊಂಡಿದೆ. 2010-11 ರಲ್ಲಿ ಈ ಯೋಜನೆಗೆ 986 ಕೋಟಿ ವೆಚ್ಚದಲ್ಲಿ ಅನುಮೋದನೆ ನೀಡಲಾಗಿತ್ತು. ಆದರೆ ಈಗ ಇದರ ಒಟ್ಟಾರೆ ವೆಚ್ಚ 1649 ಕೋಟಿಗೆ ಏರಿದೆ. ಆರಂಭದಲ್ಲಿ 2016ಕ್ಕೆ ಈ ಯೋಜನೆ ಪೂರ್ಣಗೊಳ್ಳಬೇಕು ಎಂಬ ಗಡವು ನಿಗದಿ ಮಾಡಲಾಗಿತ್ತು.

ಈಗ ಈ ಯೋಜನೆ 2027ಕ್ಕೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಕರ್ನಾಟಕ ಸರ್ಕಾರ ಈ ಯೋಜನೆಗೆ ಉಚಿತವಾಗಿ ಭೂಮಿ ಹಾಗೂ ಯೋಜನೆಯ ವೆಚ್ಚದಲ್ಲಿ 50% ಅನುದಾನ ನೀಡುತ್ತಿದ್ದರು ಮೋದಿ ಸರ್ಕಾರ ಈ ಯೋಜನೆ ಜಾರಿ ಮಾಡಲು ವಿಫಲವಾಗಿದೆ. ಮಹತ್ವಾಕಾಂಕ್ಷಿ ರೈಲ್ವೆ ಯೋಜನೆ 11 ವರ್ಷಗಳ ವಿಳಂಬ ಎದುರಿಸುತ್ತಿರುವುದೇಕೆ? ಇದು ಮೋದಿ ಸರ್ಕಾರದ ಸಮರ್ಥತೆ ಹಾಗು ಕರ್ನಾಟಕ ವಿರೋಧಿ ಧೋರಣೆಗೆ ಸಾಕ್ಷಿ.

2. ಕಳೆದ ವರ್ಷದ ಕೇಂದ್ರ ಬಜೆಟ್‌ನಲ್ಲಿ ಮೋದಿ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಅನುದಾನ ಘೋಷಣೆ ಮಾಡಿತು. ಒಂದು ವರ್ಷವಾದರೂ ಕೇಂದ್ರ ಸರ್ಕಾರ ಈ ಅನುದಾನದಲ್ಲಿ ನಯಾ ಪೈಸೆಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿಲ್ಲ ಎಂದು ಕರ್ನಾಟಕದ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ತಿಳಿಸಿದ್ದಾರೆ. ವಿಧಾನಸಭೆ ಚುನಾವಣೆ ಸಮಯದಲ್ಲಿ ಮೋದಿ ಅವರು ಮಹಾದಾಯಿ – ಕಳಸಾ ಬಂಡೂರಿ ಯೋಜನೆ ವಿಘ್ನಗಳನ್ನು ನಿವಾರಿಸುವುದಾಗಿ ಭರವಸೆ ನೀಡಿದ್ದರು.

ಆದರೂ ಈ ವರ್ಷದ ಆರಂಭದಲ್ಲಿ ಈ ಯೋಜನೆಗೆ ಕೇಂದ್ರ ಸರ್ಕಾರದ ಪರಿಸರ ಇಲಾಖೆ ಅನುಮತಿ ನೀಡಲು ನಿರಾಕರಿಸಿತು. ಬರ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರು ಹಾಗು ನೀರಾವರಿ ಪೂರೈಕೆಗೆ ಈ ಯೋಜನೆ ಮಹತ್ವದ್ದಾಗಿದೆ. ಮೋದಿ ಸರ್ಕಾರ ಇಂತಹ ಮಹತ್ವದ ಯೋಜನೆಗಳ ಬಗ್ಗೆ ನಿರ್ಲಕ್ಷ್ಯ ತೋರಿರುವುದೇಕೆ? ಕರ್ನಾಟಕದ ಜನತೆ ಮೇಲೆ ಪ್ರಧಾನಮಂತ್ರಿಗಳಿಗೆ ಯಾಕಿಷ್ಟು ದ್ವೇಷ?

3. ಬರ ಪರಿಸ್ಥಿತಿಯಲ್ಲಿ ಕರ್ನಾಟಕದ ಗ್ರಾಮೀಣ ಪ್ರದೇಶದ ಆರ್ಥಿಕತೆಗೆ ಉತ್ತೇಜನ ನೀಡಲು ಕರ್ನಾಟಕ ರಾಜ್ಯ ಸರ್ಕಾರವು ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ)ಯಲ್ಲಿ ಕೂಲಿ ದಿನಗಳ ಪ್ರಮಾಣವನ್ನು 100ರಿಂದ 150ಕ್ಕೆ ಏರಿಕೆ ಮಾಡಬೇಕು ಎಂದು ಮನವಿ ಮಾಡಲಾಗಿದೆ. ಬರ ಪೀಡಿತ ಪ್ರದೇಶಗಳಲ್ಲಿ ಕೂಲಿ ದಿನಗಳ ಸಂಖ್ಯೆ ಹೆಚ್ಚಳಕ್ಕೆ ಕಾನೂನಿನಲ್ಲಿ ಅವಕಾಶವಿದ್ದರೂ ಮೋದಿ ಸರ್ಕಾರ ಈ ಯೋಜನೆ ವಿಸ್ತರಣೆ ಮಾಡಲು ವಿಫಲವಾಗಿದೆ.

ಇದರ ಜೊತೆಗೆ ಮೋದಿ ಸರ್ಕಾರ ನರೇಗಾ ಕಾರ್ಮಿಕರಿಗೆ ನೀಡಬೇಕಾದ ಕೂಲಿಯ 1600 ಕೋಟಿ ಹಣವನ್ನು ಬಿಡುಗಡೆ ಮಾಡಿಲ್ಲ. ಮೋದಿ ಸರ್ಕಾರ ರಾಜ್ಯದ ನರೇಗಾ ಕಾರ್ಮಿಕರಿಗೆ ವೇತನ ಬಿಡುಗಡೆ ಮಾಡುವುದು ಯಾವಾಗ? ಎಂದು ಜೈರಾಮ್ ರಮೇಶ್ ಮೋದಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com