ಪ್ರಜ್ವಲ್ ರೇವಣ್ಣ ವಿರುದ್ಧ ಜೆಡಿಎಸ್ ಕ್ರಮ ಕೈಗೊಳ್ಳಲಿದೆ: ಹೆಚ್.ಡಿ.ಕುಮಾರಸ್ವಾಮಿ

ಹಾಸನ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಜೆಡಿಎಸ್ ಕ್ರಮ ಕೈಗೊಳ್ಳಲಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಸೋಮವಾರ ಹೇಳಿದ್ದಾರೆ.
ಹೆಚ್.ಡಿ.ಕುಮಾರಸ್ವಾಮಿ
ಹೆಚ್.ಡಿ.ಕುಮಾರಸ್ವಾಮಿ

ಶಿವಮೊಗ್ಗ: ಹಾಸನ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಜೆಡಿಎಸ್ ಕ್ರಮ ಕೈಗೊಳ್ಳಲಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಸೋಮವಾರ ಹೇಳಿದ್ದಾರೆ.

ಪೆನ್ ಡ್ರೈವ್ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು. ಪ್ರಕರಣದ ತನಿಖೆಗೆ ಎಸ್ಐಟಿ ರಚನೆ ಮಾಡಿದ್ದಾರೆ. ಈ ನೆಲದ ಕಾನೂನಿನಲ್ಲಿ ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು. ಇಲ್ಲಿ ವ್ಯಕ್ತಿ ಬಗ್ಗೆ ಚರ್ಚೆ ಮಾಡಿ, ಕುಟುಂಬದ ಹೆಸರು ಏಕೆ ತರುತ್ತೀರಾ?, ದೇವೇಗೌಡರು, ಕುಮಾರಸ್ವಾಮಿ ಅಂತಾ ಹೆಸರು ಏಕೆ ತರುತ್ತೀರಾ ಎಂದು ಪ್ರಶ್ನಿಸಿದರು.

ಹೆಚ್.ಡಿ.ಕುಮಾರಸ್ವಾಮಿ
ಲೈಂಗಿಕ ಹಗರಣ ಪ್ರಕರಣ: ಶಾಸಕ ರೇವಣ್ಣ ಪುತ್ರ ಪ್ರಜ್ವಲ್ ವಿರುದ್ಧ ಎಸ್‌ಐಟಿ ತನಿಖೆ ಆರಂಭ

ಇದು ವೈಯಕ್ತಿಕ ಸಮಸ್ಯೆಯೇ ಹೊರತು ಕೌಟುಂಬಿಕ ಸಮಸ್ಯೆಯಲ್ಲ. ಅವರ (ರೇವಣ್ಣ) ಕುಟುಂಬ ಪ್ರತ್ಯೇಕ ಮತ್ತು ನಮ್ಮ (ನಾನು ಮತ್ತು ಪ್ರಧಾನಿ ದೇವೇಗೌಡ) ಕುಟುಂಬ ಬೇರೆ. ಪ್ರಜ್ವಲ್ ತಪ್ಪಿತಸ್ಥರಾಗಿದ್ದರೆ ಶಿಕ್ಷೆಯಾಗಬೇಕು. ಚುನಾವಣೆಗೆ ಮೂರು ದಿನಗಳ ಮೊದಲು ಈ ಪೆನ್ ಡ್ರೈವ್ ಹೊರಬಂದಿದೆ. ಇದನ್ನು ಗಮನಿಸಬೇಕು. ಈ ವಿಚಾರವು ವ್ಯಕ್ತಿಗೆ ಸಂಬಂಧಿಸಿದ್ದೇ ಹೊರತು ಕುಟುಂಬಕ್ಕೆ ಸಂಬಂಧಿಸಿದ್ದಲ್ಲ

ಪ್ರಜ್ವಲ್ ರೇವಣ್ಣ ವಿರುದ್ಧ ಪಕ್ಷದಿಂದಲೂ ಕ್ರಮ ಕೈಗೊಳ್ಳುತ್ತೇನೆ. ಉಪ್ಪು ತಿಂದವರು ನೀರು ಕುಡಿಯಬೇಕು. ದೇವೇಗೌಡರು ಹಾಗೂ ನಾನು ಮಹಿಳೆಯರ ಬಗ್ಗೆ ಗೌರವಯುತವಾಗಿ ನಡೆದುಕೊಂಡಿದ್ದೇವೆ. ಮಹಿಳೆಯರ ಕಷ್ಟ-ಸುಖ ಕೇಳಿದ್ದೇನೆಂದು ತಿಳಿಸಿದರು.

ಈ ಹಿಂದೆ ತಾವು ಹೇಳಿದ್ದ ಪೆನ್ ಡ್ರೈವ್ ಅನ್ನು ಯಾವಾಗ ಬಿಡುಗಡೆ ಮಾಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿ, ಖಂಡಿತವಾಗಿಯೂ ಸೂಕ್ತ ಸಮಯದಲ್ಲಿ ಬಿಡುಗಡೆ ಮಾಡುತ್ತೇನೆಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com