V Srinivas Prasad: ವಿ.ಶ್ರೀನಿವಾಸ್ ಪ್ರಸಾದ್: 50 ವರ್ಷಗಳ ರಾಜಕೀಯ ಜೀವನ; ಒಂದು ಮೆಲುಕು

ಶ್ರೀನಿವಾಸ್ ಪ್ರಸಾದ್ ಅವರು 1980 ರಿಂದ ಆರು ಬಾರಿ ಚಾಮರಾಜನಗರದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು.
ವಿ ಶ್ರೀನಿವಾಸ್ ಪ್ರಸಾದ್
ವಿ ಶ್ರೀನಿವಾಸ್ ಪ್ರಸಾದ್

ಬೆಂಗಳೂರು: ವೆಂಕಟಯ್ಯ ಶ್ರೀನಿವಾಸ್ ಪ್ರಸಾದ್ (1 ಜುಲೈ 1947 - 29 ಏಪ್ರಿಲ್ 2024) ಕರ್ನಾಟಕ ರಾಜ್ಯದ ರಾಜಕಾರಣಿಗಳಲ್ಲಿ ಅತ್ಯಂತಿ ಮುಂಚೂಣಿಯಲ್ಲಿದ್ದ ನಾಯಕ. ಕೇಂದ್ರದಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ 1999 ಮತ್ತು 2004 ರ ನಡುವೆ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದರು.

ನಂತರ 2013 ಮತ್ತು 2016 ರ ನಡುವೆ ಕರ್ನಾಟಕ ಸರ್ಕಾರದಲ್ಲಿ ಕಂದಾಯ ಸಚಿವರಾಗಿ ಸೇವೆ ಸಲ್ಲಿಸಿದರು. ಶ್ರೀನಿವಾಸ್ ಪ್ರಸಾದ್ ಅವರು 1980 ರಿಂದ ಆರು ಬಾರಿ ಚಾಮರಾಜನಗರದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು.

ರಾಜಕೀಯ ಪ್ರವೇಶಿಸಿ 50 ವರ್ಷ ತುಂಬಿದ ಹಿನ್ನಲೆಯಲ್ಲಿ ಕಳೆದ ತಿಂಗಳು ಮಾರ್ಚ್ 17 ರಂದು ಸುವರ್ಣ ಮಹೋತ್ಸವ ಆಚರಿಸಿ ಚುನಾವಣಾ ರಾಜಕೀಯ ಹಾಗೂ ಸಕ್ರಿಯ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದರು. ರಾಜಕೀಯ ನಿವೃತ್ತಿ ಘೋಷಿಸಿದ್ದರೂ ಸಹ ಪ್ರಸ್ತುತ ನಡೆದ ಲೋಕಸಭಾ ಚುನಾವಣೆಯಲ್ಲಿ ಶ್ರೀನಿವಾಸಪ್ರಸಾದ್ ಅವರ ಬೆಂಬಲ ಪಡೆಯಲು ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳು ಪ್ರಯತ್ನ ನಡೆಸಿದ್ದವು.

ಮೈಸೂರು ಚಾಮರಾಜನಗರ ಭಾಗದ ಪ್ರಭಾವಿ ದಲಿತ ಮುಖಂಡ, ಸ್ವಾಭಿಮಾನಿ ರಾಜಕಾರಣಿ ಎಂದೇ ಹೆಸರಾಗಿದ್ದವರು. ಮೂಲತಃ ಮೈಸೂರಿನ ಅಶೋಕಪುರಂ ನವರಾದ ಶ್ರೀನಿವಾಸಪ್ರಸಾದ್ ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಆರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಇವರಿಗೆ ಪತ್ನಿ ಹಾಗೂ ಮೂವರು ಹೆಣ್ಣು ಮಕ್ಕಳಿದ್ದಾರೆ.

ಶ್ರೀನಿವಾಸ್ ಪ್ರಸಾದ್ ಅವರು 1974 ರಲ್ಲಿ ಕರ್ನಾಟಕ ವಿಧಾನಸಭೆಗೆ ಸ್ವತಂತ್ರವಾಗಿ ಕೃಷ್ಣರಾಜ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವ ಮೂಲಕ ಸಕ್ರಿಯ ರಾಜಕೀಯಕ್ಕೆ ಪ್ರವೇಶಿಸಿದ್ದರು. 1976 ರಲ್ಲಿ ಜನತಾ ಪಕ್ಷ ಸೇರಿದ್ದರು. ಅದರಿಂದ ತೊರೆದು 1979 ರಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು.

ವಿ ಶ್ರೀನಿವಾಸ್ ಪ್ರಸಾದ್
ಇನ್ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಆತ್ಮತೃಪ್ತಿಯಿಂದ ನಿವೃತ್ತಿಯಾಗುತ್ತಿದ್ದೇನೆ: ವಿ ಶ್ರೀನಿವಾಸ್ ಪ್ರಸಾದ್ ಘೋಷಣೆ

ರಾಜಕೀಯ ಜೀವನದ ಹಾದಿ: ರಾಜ್ಯಶಾಸ್ತ್ರದಲ್ಲಿ ಎಂ ಎ ಮಾಡಿದ್ದ ಶ್ರೀನಿವಾಸಪ್ರಸಾದ್ 1974ರಲ್ಲಿ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಿ 1974ಲ್ಲಿ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಉಪಚುನಾವಣೆ ಹಾಗೂ 1978ರಲ್ಲಿ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದರು. ಬಳಿಕ 1980ರಲ್ಲಿ ಚಾಮರಾಜನಗರ ಲೋಕಸಭ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಗೂ 1984, 1989, 1991 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಗೂ 1999ರಲ್ಲಿ ಜೆ.ಡಿ.ಯು ಅಭ್ಯರ್ಥಿಯಾಗಿ ಹಾಗೂ 2019 ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದರು. ಆರು ಬಾರಿ ಆಯ್ಕೆಯಾದ ಹೆಗ್ಗಳಿಕೆಗೂ ಪಾತ್ರರಾಗಿದ್ದರು.

2017 ರಲ್ಲಿ ನಂಜನಗೂಡು (ಮೀಸಲು) ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಸೋಲಿನ ನಂತರ 2019 ರಲ್ಲಿ ಚಾಮರಾಜನಗರ (ಮೀಸಲು) ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿ ಮತ್ತೆ ಸಂಸದರಾಗಿ ಆಯ್ಕೆಯಾಗಿ ಬಂದರು.

ವಿ ಶ್ರೀನಿವಾಸ್ ಪ್ರಸಾದ್
V. Srinivas Prasad- ಕೇಂದ್ರ ಮಾಜಿ ಸಚಿವ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನ

ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಕಂದಾಯ ಸಚಿವರಾಗಿದ್ದ ಶ್ರೀನಿವಾಸಪ್ರಸಾದ್ ಅವಿವಾಹಿತ ಮಹಿಳೆಯರಿಗೆ ಮಾಶಾಸನ ನೀಡುವ ಮಹತ್ವದ ಮನಸ್ವಿನಿ ಯೋಜನೆಯನ್ನು ಜಾರಿಗೆ ತಂದಿದ್ದರು. 2017 ರಲ್ಲಿ ಸಚಿವ ಸಂಪುಟ ಪುನರ್ರಚನೆ ಸಂದರ್ಭದಲ್ಲಿ ಅನಾರೋಗ್ಯ ನೆಪದಲ್ಲಿ ಕೈಬಿಟ್ಟಿದ್ದರಿಂದ ಅಂದು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ವಿರುದ್ಧ ಬೇಸಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರ್ಪಡೆಯಾದರು. ಬಳಿಕ 2018 ರಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋಲು ಕಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com