ವಿಶ್ವದ ಮೂರು ಅಗ್ರ ಆರ್ಥಿಕತೆಗಳಲ್ಲಿ ಭಾರತವನ್ನು ಒಂದಾಗಿಸುವುದು ನಮ್ಮ ಸಂಕಲ್ಪ: ಬಾಗಲಕೋಟೆಯಲ್ಲಿ ಪ್ರಧಾನಿ ಮೋದಿ

ಮುಂದಿನ ಕೆಲ ವರ್ಷಗಳಲ್ಲಿ ಭಾರತವನ್ನು ವಿಶ್ವದ ಅಗ್ರ ಮೂರು ಆರ್ಥಿಕತೆಗಳಲ್ಲಿ ಒಂದಾಗಿಸುವುದು ನಮ್ಮ ಸಂಕಲ್ಪವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Updated on

ಬಾಗಲಕೋಟೆ: ಮುಂದಿನ ಕೆಲ ವರ್ಷಗಳಲ್ಲಿ ಭಾರತವನ್ನು ವಿಶ್ವದ ಅಗ್ರ ಮೂರು ಆರ್ಥಿಕತೆಗಳಲ್ಲಿ ಒಂದಾಗಿಸುವುದು ನಮ್ಮ ಸಂಕಲ್ಪವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ. ಬಿಜೆಪಿ ವಿಜಯ ಸಂಕಲ್ಪ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ನಾವು ಭಾರತವನ್ನು ಉತ್ಪಾದನಾ ಹಬ್, ಕೌಶಲ್ಯ ಕೇಂದ್ರವನ್ನಾಗಿ ಮಾಡಲು ಬಯಸುತ್ತೇವೆ. ಇದಕ್ಕೆ ದೂರದೃಷ್ಟಿ ಬೇಕು. ಮೋಜು, ಮಸ್ತಿ ಮಾಡುವವರಿಂದ ಇದನ್ನು ಮಾಡಲು ಸಾಧ್ಯವಿಲ್ಲ ಎಂದರು.

ಕರ್ನಾಟಕ ಸರ್ಕಾರ ತನ್ನ ನೌಕರರಿಗೆ ಸಂಬಳ ನೀಡದ ದಿನ ದೂರದಲ್ಲಿ ಇಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ವಸೂಲಿ ಗ್ಯಾಂಗ್ ನಡೆಸುತ್ತಿದೆ. ಸರ್ಕಾರವಲ್ಲಾ, 60 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಅವರು, ಒಂದೇ ಬಾರಿಗೆ ಬಡತನವನ್ನು ತೊಡೆದುಹಾಕುತ್ತೇವೆ ಎಂದು ಹೇಳುತ್ತಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಮತಗಳನ್ನು ಪಡೆಯಲು ಭಯೋತ್ಪಾದನೆ ಮತ್ತು ಮೂಲಭೂತವಾದಿ ಮನಸ್ಥಿತಿವುಳ್ಳವರನ್ನು ಕಾಂಗ್ರೆಸ್ ರಕ್ಷಿಸುತ್ತಿದೆ. ತನ್ನ ಪ್ರಣಾಳಿಕೆಯಲ್ಲಿ ಧರ್ಮ ಆಧಾರಿತ ಮೀಸಲಾತಿ ನೀಡುವ ಸಂದೇಶ ನೀಡಿದೆ ಎಂದು ಆರೋಪಿಸಿದರು.

ಚುನಾವಣೆಯಲ್ಲಿ ಸೋತವರು ತಂತ್ರಜ್ಞಾನ ಬಳಸಿ, ನಕಲಿ ವಿಡಿಯೋ ಸೃಷ್ಟಿಸಿ, AI ಮೂಲಕ ತಪ್ಪು ಮಾಹಿತಿ ಹರಡುತ್ತಿದ್ದಾರೆ. ಇಂತಹ ನಕಲಿ ವಿಡಿಯೋಗಳ ಬಗ್ಗೆ ಪೊಲೀಸರು ಮತ್ತು ಬಿಜೆಪಿ ಪಕ್ಷದವರಿಗೆ ಮಾಹಿತಿ ನೀಡಿದರೆ, ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com