ಪ್ರಜ್ವಲ್ ರೇವಣ್ಣಗೆ ಟಿಕೆಟ್ ಕೊಟ್ಟು, ಪ್ರಚಾರ ಮಾಡಿ ಗೆಲ್ಲಿಸಿದ್ದು ಯಾರು? ಆರ್.ಅಶೋಕ್

ಕಾಂಗ್ರೆಸ್–ಜೆಡಿಎಸ್ ಮೈತ್ರಿ ಸರ್ಕಾರ ಇದ್ದಾಗ ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ಕೊಟ್ಟು, ಅವರ ಪರ ಪ್ರಚಾರ ಮಾಡಿ, ಅವರನ್ನು ಗೆಲ್ಲಿಸಿದ್ದು ಯಾರು? ಎಂಬುದಕ್ಕೆ ಕಾಂಗ್ರೆಸ್‌ನವರು ಉತ್ತರಿಸಬೇಕು.
ಆರ್.ಅಶೋಕ್
ಆರ್.ಅಶೋಕ್

ಹುಬ್ಬಳ್ಳಿ: ಕಾಂಗ್ರೆಸ್–ಜೆಡಿಎಸ್ ಮೈತ್ರಿ ಸರ್ಕಾರ ಇದ್ದಾಗ ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ಕೊಟ್ಟು, ಅವರ ಪರ ಪ್ರಚಾರ ಮಾಡಿ, ಅವರನ್ನು ಗೆಲ್ಲಿಸಿದ್ದು ಯಾರು? ಎಂಬುದಕ್ಕೆ ಕಾಂಗ್ರೆಸ್‌ನವರು ಉತ್ತರಿಸಬೇಕು’ ಎಂದು ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್ ಅಶೋಕ್ ಆಗ್ರಹಿಸಿದ್ದಾರೆ.

ಹುಬ್ಬಳ್ಳಿಯ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ ಎಂದು ಎಚ್‌.ಡಿ.ಕುಮಾರಸ್ವಾಮಿ ಅವರೇ ಹೇಳಿದ್ದಾರೆ. ಪ್ರಜ್ವಲ್ ಈಗ ಬಿಜೆಪಿ–ಜೆಡಿಎಸ್ ಮೈತ್ರಿ ಅಭ್ಯರ್ಥಿ. ಅವರು ಗೆದ್ದ ನಂತರ ನಮ್ಮನ್ನು ಪ್ರಶ್ನೆ ಮಾಡಿದರೆ ನಾವು ಉತ್ತರಿಸುತ್ತೇವೆ ಎಂದಿದ್ದಾರೆ.

ಪೆನ್‌ಡ್ರೈವ್‌ನಲ್ಲಿರುವ ವಿಡಿಯೊಗಳ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ. ವಿಡಿಯೊಗಳ ಬಗ್ಗೆ ಸತ್ಯಾಸತ್ಯತೆ ಹೊರಬಂದು ತಪ್ಪಿತಸ್ಥರಿಗೆ ಕಾನೂನಿನ ಅಡಿ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು.

ಆರ್.ಅಶೋಕ್
ಸಾಲದ ದುಡ್ಡೆಲ್ಲಾ ಎಲ್ಲಿ ಹೋಗುತ್ತಿದೆ? ಹೆಚ್ಚಾದ ಬಜೆಟ್ ಗಾತ್ರವೆಲ್ಲಾ ಎಲ್ಲಿ ಹೋಯ್ತು? ಸಿದ್ದರಾಮಯ್ಯಗೆ ಆರ್. ಅಶೋಕ್ ಪ್ರಶ್ನೆ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ಲವ್ ಜಿಹಾದ್‌ ತಂದಿದೆ. ಅದರ ಪ್ರಯೋಗ ಹುಬ್ಬಳ್ಳಿಯಲ್ಲಿ ಆಗಿದೆ. ಈ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಮಾಡುತ್ತೇನೆ. ನೇಹಾಗೆ ನ್ಯಾಯ ದೊರಕಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಕೇಂದ್ರ ಸರ್ಕಾರ ರಾಜ್ಯಕ್ಕೆ ಬಿಡುಗಡೆ ಮಾಡಿರುವ ಬರ ಪರಿಹಾರಕ್ಕೆ ಕಾಂಗ್ರೆಸ್ ಸರ್ಕಾರ ತನ್ನ ಪಾಲು ಸೇರಿಸಿ ನೇರವಾಗಿ ರೈತರಿಗೆ ತಲುಪಿಸಬೇಕು. ಆ ಮೂಲಕ ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿಲ್ಲ ಎಂಬುದನ್ನು ತೋರ್ಪಡಿಸಬೇಕು. ಈ ಹಣವನ್ನು ಲೂಟಿ ಮಾಡಿ ಮಧ್ಯಪ್ರದೇಶ, ರಾಜಸ್ಥಾನಗಳಿಗೆ ಕಳಿಸಬಾರದು ಎಂದು ಆಗ್ರಹಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com