ಕಾಂಗ್ರೆಸ್ ಕೆಟ್ಟ, ವಿಭಜಕ ಗುಣ ಹೊಂದಿದೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ

ಧರ್ಮಾಧಾರಿತ ಮೀಸಲಾತಿ ವಿಚಾರವನ್ನು ಸಂವಿಧಾನದ ಪ್ರಕಾರ ಮಾಡಲಾಗದಿದ್ದರೂ ಕಾಂಗ್ರೆಸ್ ಬೆಂಬಲಿಸುತ್ತಿದ್ದು, ಕೆಟ್ಟ ಮತ್ತು ವಿಭಜಕ ಗುಣ ಹೊಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮಂಗಳವಾರ ಆರೋಪಿಸಿದರು.
ಜೆಪಿ ನಡ್ಡಾ
ಜೆಪಿ ನಡ್ಡಾ

ಶಿವಮೊಗ್ಗ: ಧರ್ಮಾಧಾರಿತ ಮೀಸಲಾತಿ ವಿಚಾರವನ್ನು ಸಂವಿಧಾನದ ಪ್ರಕಾರ ಮಾಡಲಾಗದಿದ್ದರೂ ಕಾಂಗ್ರೆಸ್ ಬೆಂಬಲಿಸುತ್ತಿದ್ದು, ಕೆಟ್ಟ ಮತ್ತು ವಿಭಜಕ ಗುಣ ಹೊಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮಂಗಳವಾರ ಆರೋಪಿಸಿದರು.

ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಪರ ಬಿಜೆಪಿ ಪ್ರಚಾರದ ಅಂಗವಾಗಿ ಆಯೋಜಿಸಿದ್ದ ವೃತ್ತಿಪರರ ಸಮಾವೇಶದಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ, ಧರ್ಮದ ಆಧಾರದ ಮೇಲೆ ಮೀಸಲಾತಿಗೆ ಯಾವುದೇ ಸ್ಥಾನವಿಲ್ಲ ಎಂದು ಸ್ಪಷ್ಟವಾಗಿ ಬರೆಯಲಾಗಿದೆ, ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಏನು ಮಾಡಿದರು. ಒಬಿಸಿ ಕೋಟಾದಿಂದ ಮುಸ್ಲಿಂರಿಗೆ ಶೇ.4 ರಷ್ಟು ಮೀಸಲಾತಿ ಕೊಟ್ಟರು. ಒಬಿಸಿ ವಿರೋಧಿಗಳು ಯಾರು? ಅವರು ಮುಸ್ಲಿಂ ಸಹೋದರರ ಸ್ನೇಹಿತರಲ್ಲ ಅಥವಾ ಒಬಿಸಿ ಬಗ್ಗೆ ಸಹಾನುಭೂತಿ ಹೊಂದಿರುವವರಲ್ಲ" ಎಂದು ಹೇಳಿದರು.

ಜೆಪಿ ನಡ್ಡಾ
ಬಲಿಷ್ಠ ಸರ್ಕಾರ ಬೇಕೋ ಅಥವಾ ಭ್ರಷ್ಟ ಸರ್ಕಾರ ಬೇಕೋ ನಿರ್ಧಾರ ನಿಮ್ಮ ಕೈಲೇ ಇದೆ: ರಾಜ್ಯದ ಜನತೆಗೆ ಜೆಪಿ ನಡ್ಡಾ

ಅವಿಭಜಿತ ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್ ನಾಲ್ಕು ಬಾರಿ ಕಾನೂನು ತಂದು, ಎಸ್‌ಸಿ / ಎಸ್‌ಟಿ ಮತ್ತು ಒಬಿಸಿಗಳ ಮೀಸಲಾತಿಯನ್ನು ಮುಸ್ಲಿಂ ಸಮುದಾಯಕ್ಕೆ ನೀಡಲು ಪ್ರಯತ್ನಿಸಿದರು. "ನಾವು ಮುಸ್ಲಿಂ ಸಮುದಾಯದ ವಿರುದ್ಧ ಅಲ್ಲ, ಆದರೆ ಸಂವಿಧಾನವು ಧರ್ಮದ ಆಧಾರದ ಮೇಲೆ ಮೀಸಲಾತಿ ಇರುವುದಿಲ್ಲ ಎಂದು ಸ್ಪಷ್ಟವಾಗಿ ಹೇಳುತ್ತದೆ ಮತ್ತು ಇದು ಬಹಳ ಆಳವಾದ ಚಿಂತನೆಯಾಗಿದೆ ಎಂದು ನಾವು ಅರ್ಥಮಾಡಿಕೊಳ್ಳಬೇಕು. ಆದರೆ, ಕಾಂಗ್ರೆಸ್ ನವರು ಕೆಟ್ಟ ವಿಭಜಕ ಗುಣ ಹೊಂದಿರುವವರು, ನಾವು ಅವರಿಗೆ ಬೆಂಬಲ ನೀಡಲಿದ್ದೇವೆಯೇ?" ಎಂದು ಹೇಳಿದರು. ಹಿರಿಯ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ, ರಾಘವೇಂದ್ರ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ಜನರು ಮತ್ತು ಮಾಧ್ಯಮಗಳು ಎನ್ ಡಿಎ ಮೈತ್ರಿಕೂಟದ ನಕಲಿ ವಿಡಿಯೋ ಬಗ್ಗೆ ಹೆಚ್ಚು ಮಾತನಾಡುತ್ತಿದ್ದಾರೆ. ಈ ನಕಲಿ ವಿಡಿಯೋ ತೆಲಂಗಾಣದ ಸಿಎಂ ರೇವಂತ್ ರೆಡ್ಡಿ ಫೋನ್ ನ ಸೋಶಿಯಲ್ ಮೀಡಿಯಾದಿಂದ ಅಪ್ ಲೋಡ್ ಮಾಡಲಾಗಿದೆ. ಎಲ್ಲಾ ವಿಪಕ್ಷಗಳ ನಾಯಕರು ಇದನ್ನು ವೈರಲ್ ಮಾಡಲು ಪ್ರಯತ್ನಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಬಿಜೆಪಿ 400 ಸ್ಥಾನ ಗೆಲುವುದರಿಂದ ಅವರೆಲ್ಲಾ ಹತಾಶರಾಗಿದ್ದಾರೆ. ಇದು ಅವರ ಮಾನಸಿಕ ಸ್ಥಿತಿಯನ್ನು ತೋರಿಸುತ್ತದೆ ಎಂದರು.

ಒಂದು ಕಡೆ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಇದೆ. ಅವರ ನಾಯಕತ್ವದಡಿಭಾರತ ದಿನದಿಂದ ದಿನಕ್ಕೆ ಬಲಿಷ್ಠವಾಗುತ್ತಿದೆ ಮತ್ತು ಬದಲಾಗುತ್ತಿದೆ. ಆದರೆ ಇನ್ನೊಂದು ಕಡೆ . INDIA ಅಲಯನ್ಸ್ ಇದೆ. ಇದಕ್ಕೆ ಯಾವುದೇ ದೃಷ್ಟಿಕೋನ, ಉದ್ದೇಶ ಮತ್ತು ಯಾವುದೇ ನಿರ್ದೇಶನವನ್ನು ಹೊಂದಿಲ್ಲ. ಅವರು ತುಂಬಾ ಹತಾಶರಾಗಿದ್ದಾರೆ, ಅವರು ವಿಭಜಕ ಶಕ್ತಿಗಳನ್ನು ಉತ್ತೇಜಿಸಲು ಪ್ರಯತ್ನಿಸುತ್ತಿದ್ದಾರೆ, ಅವರು ಉತ್ತರ ಮತ್ತು ದಕ್ಷಿಣ ವಿಭಜನೆಗೆ ಬಯಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ರೋಡ್ ಶೋ: ಈ ಮಧ್ಯೆ ಹಾವೇರಿ ಲೋಕಸಭಾ ಕ್ಷೇತ್ರದ ಬ್ಯಾಡಗಿಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರವಾಗಿ ಜೆ. ಪಿ. ನಡ್ಡಾ ರೋಡ್ ಶೋ ನಡೆಸಿದರು. ಅಪಾರ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಂಡರು.

ನಂತರ ಜೆ.ಪಿ. ನಡ್ಡಾ ಕಾಗಿನೆಲೆ ಪೀಠಾಧ್ಯಕ್ಷರಾದ ನಿರಂಜನಾನಂದ ಪುರಿ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com