Prajwal Revanna: ಜೆಡಿಎಸ್ ನಿಂದ ಸಂಸದ ಪ್ರಜ್ವಲ್ ರೇವಣ್ಣ ಅಮಾನತು!

ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಹಾಸನ ಸಂಸದರ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಎಚ್ ಡಿ ಕುಮಾರಸ್ವಾಮಿ, ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅವರನ್ನು ಅಮಾನತು ಮಾಡಲು ಶಿಫಾರಸು ಮಾಡಲಾಗಿದೆ ಎಂದು ಹೇಳಿದ್ದಾರೆ.
ಸಂಸದ ಪ್ರಜ್ವಲ್ ರೇವಣ್ಣ ಅಮಾನತು
ಸಂಸದ ಪ್ರಜ್ವಲ್ ರೇವಣ್ಣ ಅಮಾನತು

ಹುಬ್ಬಳ್ಳಿ: ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಹಾಸನ ಸಂಸದರ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಎಚ್ ಡಿ ಕುಮಾರಸ್ವಾಮಿ, ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅವರನ್ನು ಅಮಾನತು ಮಾಡಲು ಶಿಫಾರಸು ಮಾಡಲಾಗಿದೆ ಎಂದು ಹೇಳಿದ್ದಾರೆ.

ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಮತ್ತು ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಲೈಂಗಿಕ ದೌರ್ಜನ್ಯ, ವಿಡಿಯೋಗಳು ಹಾಗೂ ಪೆನ್ ಡ್ರೈವ್ ಬಗ್ಗೆ ಈಗಾಗಲೇ ಎದ್ದಿರುವ ವಿವಾದಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲು ಇಂದು ಹುಬ್ಬಳ್ಳಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯಿತು.

ಹುಬ್ಬಳ್ಳಿಯಲ್ಲಿ ನಡೆದ ಜೆಡಿಎಸ್ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಪಕ್ಷದ ಅಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಸೇರಿದಂತೆ ಆಲ್ಕೋಡ್ ಹನುಮಂತಪ್ಪ, ಬಂಡೆಪ್ಪ ಕಾಶೆಂಪೂರ್, ಸಿ.ಎಸ್.ಪುಟ್ಟರಾಜು, ವೆಂಕಟ್‌ರಾವ್ ನಾಡಗೌಡ ಸೇರಿದಂತೆ ಪಕ್ಷದ ಹಿರಿಯ ನಾಯಕರು ಪಾಲ್ಗೊಂಡಿದ್ದರು.

ಅಮಾನತಿಗೆ ನಿರ್ಧಾರ

ಹುಬ್ಬಳ್ಳಿಯಲ್ಲಿ ಇಂದು ನಡೆದ ಜೆಡಿಎಸ್ ಪಕ್ಷದ ಕೋರ್ ಕಮಿಟಿ ಸಭೆ ಬಳಿಕ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡುವ ನಿರ್ಧಾರ ಕೈಗೊಳ್ಳಲಾಗಿದ್ದು ತಕ್ಷಣದಿಂದಲೇ ಜಾರಿಗೆ ಬರುವಂತೆ ಪ್ರಜ್ವಲ್ ರೇವಣ್ಣ ಅವರನ್ನು ಅಮಾನತು ಮಾಡಲಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ SIT ತನಿಖೆಯನ್ನು ಸ್ವಾಗತಿಸುತ್ತೇವೆ. ಎಸ್‌ಐಟಿ ತನಿಖೆ ಪೂರ್ಣಗೊಳ್ಳುವವರೆಗೆ ಅವರನ್ನು ಪಕ್ಷದಿಂದ ಅಮಾನತುಗೊಳಿಸಲು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಶಿಫಾರಸು ಮಾಡಲು ನಾವು ನಿರ್ಧಾರ ಕೈಗೊಂಡಿದ್ದೇವೆ" ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದ್ದಾರೆ.

ಸಂಸದ ಪ್ರಜ್ವಲ್ ರೇವಣ್ಣ ಅಮಾನತು
'ಉಪ್ಪು ತಿಂದವರು ನೀರು ಕುಡಿಬೇಕು, ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ,ತನಿಖೆಯಾಗಿ ವಾಸ್ತವಾಂಶ ಹೊರಬರಲಿ': ಹೆಚ್ ಡಿ ಕುಮಾರಸ್ವಾಮಿ

ಅಂತೆಯೇ ಪಕ್ಷದಿಂದ ಉಚ್ಚಾಟಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ರೆ ಸಂಸತ್ ಸದಸ್ಯ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆ ಇದ್ದು, ಪಕ್ಷದಿಂದ ಉಚ್ಚಾಟಿಸದಿದ್ರೆ ಮತ್ತಷ್ಟು ಜನಾಕ್ರೋಶಕ್ಕೆ ಗುರಿಯಾಗುವ ಆತಂಕ ಜೆಡಿಎಸ್ ಪಕ್ಷಕ್ಕೆ ಎದುರಾಗಿದೆ. ಹೀಗಾಗಿ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಈ ಎಲ್ಲ ಸಾಧಕ-ಬಾಧಕಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಪ್ರಜ್ವಲ್ ಅಮಾನತು ಶಿಫಾರಸ್ಸಿದೆ ರಾಷ್ಟ್ರಾಧ್ಯಕ್ಷ ದೇವೇಗೌಡ ಅನುಮತಿ

ಇನ್ನು ಸೆಕ್ಸ್ ಟೇಪ್ ಹಗರಣದಲ್ಲಿ ಭಾಗಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತುಗೊಳಿಸುವಂತೆ ಕೋರ್ ಕಮಿಟಿಯ ಶಿಫಾರಸನ್ನು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅನುಮೋದಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com