ಚನ್ನಪಟ್ಟಣ ತಲುಪಿದ ಬಿಜೆಪಿ-ಜೆಡಿಎಸ್ ಪಾದಯಾತ್ರೆ: ಮೈಸೂರು ತಲುಪುವುದರೊಳಗೆ ಸಿಎಂ ರಾಜಿನಾಮೆ ನೀಡಲಿ-BSY

ಪಾದಯಾತ್ರೆ ಉದಕ್ಕೂ ಕಾರ್ಯಕರ್ತರು ಹಾಗೂ ನಾಯಕರು ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ನಡುವೆ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಗೌರಮ್ಮ ಎಂಬ ಬಿಜೆಪಿ ಕಾರ್ಯಕರ್ತೆ ಹೃದಯಾಘಾತದಿಂದ ಮೃತಪಟ್ಟಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಶ್ರದ್ಧಾಂಜಲಿ ಸಲ್ಲಿಸಿದರು.
BJP-JDS padayatre (file pic)
ಬಿಜೆಪಿ-ಜೆಡಿಎಸ್ ಪಾದಯಾತ್ರೆ (ಸಂಗ್ರಹ ಚಿತ್ರ)online desk
Updated on

ಚನ್ನಪಟ್ಟಣ: ಮುಡಾ ನಿವೇಶನವನ್ನು ಅಕ್ರಮವಾಗಿ ಪಡೆದಿರುವ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಶನಿವಾರದಂದು (ಆ.03) ಆರಂಭಗೊಂಡಿದ್ದ ಬಿಜೆಪಿ-ಜೆಡಿಎಸ್ ಪಾದಯಾತ್ರೆ 3 ನೇ ದಿನ ಕೆಂಗಲ್ ನಿಂದ ಆರಂಭಗೊಂಡು ದಿನದ ಅಂತ್ಯಕ್ಕೆ ನಿಡಘಟ್ಟ ತಲುಪಿದೆ.

3 ನೇ ದಿನದ ಪಾದಯಾತ್ರೆ 23 ಕಿ.ಮೀ ಸಾಗಿದ್ದು, ಬಿಜೆಪಿ-ಜೆಡಿಎಸ್ ನಾಯಕರು ಸಿಎಂ ರಾಜೀನಾಮೆಗೆ ಆಗ್ರಹಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ, ಜೆಡಿಎಸ್ ನಾಯಕರು, ಶಾಸಕರು ಹಾಗೂ 3 ನೇ ದಿನದ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರು.

ಪಾದಯಾತ್ರೆ ಆರಂಭಕ್ಕೂ ಮುನ್ನ ಬಿಜೆಪಿ ನಾಯಕರು ಮಾಜಿ ಸಿಎಂ ಕೆಂಗಲ್ ಹನುಮಂತಯ್ಯ ಅವರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ, ಅವರ ಪುತ್ರ, ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಯಲ್ಲಿ ಭಾಗಿಯಾದರು.

ಪಾದಯಾತ್ರೆ ಉದಕ್ಕೂ ಕಾರ್ಯಕರ್ತರು ಹಾಗೂ ನಾಯಕರು ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ನಡುವೆ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಗೌರಮ್ಮ ಎಂಬ ಬಿಜೆಪಿ ಕಾರ್ಯಕರ್ತೆ ಹೃದಯಾಘಾತದಿಂದ ಮೃತಪಟ್ಟಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಶ್ರದ್ಧಾಂಜಲಿ ಸಲ್ಲಿಸಿದರು ಎಂದು ಪಕ್ಷದ ಹೇಳಿಕೆ ತಿಳಿಸಿದೆ.

ಪಾದಯಾತ್ರೆ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ, ಪಾದಯಾತ್ರೆ ಮೈಸೂರು ತಲುಪುವುದರ ಒಳಗೆ, ಪಾದಯಾತ್ರೆಗೆ ಸಿಕ್ಕ ಜನಬೆಂಬಲವನ್ನು ನೋಡಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಹೇಳಿದ್ದಾರೆ.

ಹಣ ಬಲ, ತೊಳ್ಬಲ, ಮದ್ಯದ ಬಲದಿಂದಲೇ ‘ಈ ಮುಖ್ಯಮಂತ್ರಿ ಅಧಿಕಾರದಲ್ಲಿ ಇದ್ದಾರೆ. ಹಲವಾರು ಭ್ರಷ್ಟಾಚಾರ ಹಗರಣಗಳಲ್ಲಿ ಭಾಗಿಯಾಗಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಪ್ರಾಮಾಣಿಕವಾಗಿದ್ದರೆ ಕೂಡಲೇ ಸಿದ್ದರಾಮಯ್ಯನವರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿದರು. ಅವರಿಗೆ ನಾಚಿಕೆ ಎಂಬುದಿದ್ದರೆ ಅವರು ರಾಜೀನಾಮೆ ನೀಡಲಿ ಎಂದು ಯಡಿಯೂರಪ್ಪ ಆಗ್ರಹಿಸಿದ್ದಾರೆ.

BJP-JDS padayatre (file pic)
ಹಳೇ ಮೈಸೂರು ಭಾಗಕ್ಕೆ ಗೌಡರ ಕುಟುಂಬದ ವಾರಸುದಾರ ನಿಖಿಲ್: ಲಾಂಚ್ ಪ್ಯಾಡ್ ಆಯ್ತು ಜೆಡಿಎಸ್-ಬಿಜೆಪಿ ಪಾದಯಾತ್ರೆ!

ಸರ್ಕಾರಿ ಅಧಿಕಾರಿಗಳ ವರ್ಗಾವಣೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿದ ಯಡಿಯೂರಪ್ಪ, ಪೊಲೀಸ್ ಅಧಿಕಾರಿಗಳ ಆತ್ಮಹತ್ಯೆಯ ಉದಾಹರಣೆಗಳನ್ನು ಉಲ್ಲೇಖಿಸಿ ಇಂತಹ ನಾಚಿಕೆಗೇಡಿನ ಸರ್ಕಾರ ಮುಂದುವರೆಯಬಾರದು ಎಂದು ಹೇಳಿದರು. ಬಿಜೆಪಿ-ಜೆಡಿ(ಎಸ್) ಮೈತ್ರಿ ಶಾಶ್ವತವಾಗಿದೆ ಎಂದ ಅವರು, ಭವಿಷ್ಯದಲ್ಲಿ ಬಿಜೆಪಿ-ಜೆಡಿ(ಎಸ್) ಸೇರಿ ಸರ್ಕಾರ ರಚಿಸಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಯಡಿಯೂರಪ್ಪ ಅವರ ರಾಜೀನಾಮೆ ಬೇಡಿಕೆಗೆ, ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಮಾಜಿ ಸಿಎಂ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಪ್ರಕರಣವಿದೆ ಮತ್ತು ಅವರು ರಾಜಕೀಯದಲ್ಲಿ ಮುಂದುವರಿಯಲು ಯೋಗ್ಯರೇ ಎಂದು ಕೇಳಿದರು. ಅವರ (ಯಡಿಯೂರಪ್ಪ) ವಿರುದ್ಧ ಎಷ್ಟು ಪ್ರಕರಣಗಳಿವೆ? ನನ್ನ ರಾಜೀನಾಮೆ ಕೇಳಲು ಅವರಿಗೆ ಯಾವ ನೈತಿಕ ಹಕ್ಕಿದೆ? ಅವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ, ಅವರು ಪೋಕ್ಸೋ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ, ನ್ಯಾಯಾಲಯ ಅವರಿಗೆ ಜಾಮೀನು ನೀಡಿದ್ದರಿಂದ, ಅವರು ಹೊರಗೆ, ಇಲ್ಲದಿದ್ದರೆ ಅವರು ಜೈಲಿನಲ್ಲಿರಬೇಕಿತ್ತು, ”ಎಂದು ಸಿಎಂ ಟೀಕಿಸಿದ್ದಾರೆ.

ಚನ್ನಪಟ್ಟಣದಲ್ಲಿ ಮಾತನಾಡಿದ ಕುಮಾರಸ್ವಾಮಿ, ಹಿಂದಿನ ಬಿಜೆಪಿ ಆಡಳಿತದ ವಿರುದ್ಧ ಅಪಪ್ರಚಾರ ಮತ್ತು ಸುಳ್ಳು ಭರವಸೆ ಯೋಜನೆಗಳನ್ನು ಭರವಸೆ ನೀಡುವ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಈ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com