ಮೈಸೂರು: ಮುಡಾ ಮತ್ತು ವಾಲ್ಮೀಕಿ ಹಗರಣಗಳಲ್ಲಿ ಭಾಗಿಯಾಗಿರುವ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಹಾಗೂ ಎನ್‌ಡಿಎ ಪಾಲುದಾರರ ಪ್ರತಿಭಟನೆ ನಡೆಸುತ್ತಿದೆ. ಇದರ ವಿರುದ್ಧ ಕಾಂಗ್ರೆಸ್ ಜನಾಂದೋಲನ ರ್‍ಯಾಲಿ ನಡೆಸುತ್ತಿದೆ. ಒಕ್ಕಲಿಗ ಹೃದಯ ಭಾಗದಲ್ಲಿ ಮೇಲುಗೈ ಸಾಧಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಡಿ.ಕೆ ಶಿವಕುಮಾರ್ ಪರಸ್ಪರ ತೇಜೋವಧೆಗಿಳಿದಿದ್ದಾರೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರ ಭಾವ ಡಾ.ಸಿ.ಎನ್.ಮಂಜುನಾಥ್ ವಿರುದ್ಧ ಸಹೋದರ ಡಿ.ಕೆ.ಸುರೇಶ್ ಸೋಲು, ಕುಮಾರಸ್ವಾಮಿ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದು, ಎಂಟು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಒಕ್ಕಲಿಗ ಅಭ್ಯರ್ಥಿಗಳ ಪರಾಭವದ ನಂತರದ ರಾಜಕೀಯ ಅವಮಾನವನ್ನು ಶಿವಕುಮಾರ್ ಇನ್ನೂ ಜೀರ್ಣಿಸಿಕೊಂಡಿಲ್ಲ. ತಮಗೆ ಆಗಿರುವ ಅವಮಾನಕ್ಕೆ ದೇವೇಗೌಡರ ಕುಟುಂಬದ ವಿರುದ್ಧ ನಡೆಯುತ್ತಿರುವ ಆಂದೋಲನವನ್ನು ಪ್ರತಿಷ್ಠೆಯನ್ನಾಗಿ ಪರಿವರ್ತಿಸಲು ಮತ್ತು ಒಕ್ಕಲಿಗ ಪ್ರಾಬಲ್ಯವಿರುವ ಪ್ರದೇಶದಲ್ಲಿ ಕಳೆದುಹೋದ ನೆಲೆಯನ್ನು ಮರಳಿ ಪಡೆಯುವ ಹುನ್ನಾರವಾಗಿದೆ.
ಅದು 2023 ರ ವಿಧಾನಸಭಾ ಚುನಾವಣೆಯಲ್ಲಿ ಒಕ್ಕಲಿಗ ಮತದಾರರು ತಮಗೆ ಬೆಂಬಲ ನೀಡಿದರೇ ತಾವು ಮುಖ್ಯಮಂತ್ರಿಯಾಗಬಹುದು ಎಂದು ಶಿವಕುಮಾರ್ ಮನವರಿಕೆ ಮಾಡಿಕೊಟ್ಟಿದ್ದರು. ಲೋಕಸಭೆ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತು ನಾಯಕತ್ವದಿಂದ ದೂರ ಸರಿದಿರುವ ಸಮುದಾಯವನ್ನು ಮರಳಿ ಕರೆ ತರಲು ಜನಾಂದೋಲನವು ಮತ್ತೊಂದು ಪ್ರಯತ್ನವಾಗಿದೆ. ರ್‍ಯಾಲಿ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿಗೆ ಪ್ರವೇಶಿಸುತ್ತಿದ್ದಂತೆ ಇಬ್ಬರು ರಾಜಕೀಯ ನಾಯಕರುಗಳ ನಡುವೆ ನಡೆದ ವಾಗ್ದಾಳಿ ವೈಯಕ್ತಿಕ ಸ್ವರೂಪ ಪಡೆದಿವೆ. ಈ ಹೋರಾಟ ಇದೀಗ ಪಾದಯಾತ್ರೆ ಮತ್ತು ಜನಾಂದೋಲನದ ವಾಸ್ತವ ವಿಷಯವನ್ನು ನೇಪಥ್ಯಕ್ಕೆ ತಳ್ಳಿದೆ.
ತಾವು ಮಾಡದ ತಪ್ಪಿಗೆ ಸಿಎಂ ಹಾಗೂ ಅವರ ಕುಟುಂಬದ ಪ್ರತಿಷ್ಠೆಗೆ ಮಸಿ ಬಳಿಯುವ ಹಾಗೂ ಚುನಾಯಿತ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ಬಿಜೆಪಿ-ಜೆಡಿಎಸ್ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಶಿವಕುಮಾರ್ ಆರೋಪಿಸಿದ್ದಾರೆ. ಪಾದಯಾತ್ರೆಯ ನೇತೃತ್ವ ವಹಿಸಿರುವ ಬಿಜೆಪಿ ಮುಖಂಡರಾದ ಬಿ.ವೈ.ವಿಜಯೇಂದ್ರ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಆರೋಪಗಳ ಕುರಿತು ಕಾಂಗ್ರೆಸ್ ಎತ್ತಿರುವ ಪ್ರಶ್ನೆಗಳಿಗೆ ಮೊದಲು ಉತ್ತರಿಸಬೇಕು ಎಂದು ಹೇಳಿದರು.
ಯಡಿಯೂರಪ್ಪ, ಬೊಮ್ಮಾಯಿ ಕಾಲದಲ್ಲಿ ಎಪಿಎಂಸಿಯಿಂದ 47 ಕೋಟಿ ಲೂಟಿ. ಭೋವಿ ಅಭಿವೃದ್ದಿ ನಿಗಮದಲ್ಲಿ 87 ಕೋಟಿ, ದೇವರಾಜು ಅರಸು ಟ್ರಕ್ ಟರ್ಮಿನಲ್ 50 ಕೋಟಿ, ಗಂಗಾ ಕಲ್ಯಾಣ ಯೋಜನೆಯಲ್ಲಿ 430 ಕೋಟಿ, ಕೊರೋನಾ ಸಮಯದಲ್ಲಿ ಹೆಣದ ಮೇಲೆ ಹಣ ಮಾಡಿದರು. ಪಿಎಸ್ ಐ ಹಗರಣ, ಪರಶುರಾಮ ಪ್ರತಿಮೆ ಹಗರಣ, ಯಡಿಯೂರಪ್ಪ ಅವರ ಆಪ್ತ ಉಮೇಶ್ ಮನೆಯಲ್ಲಿ 700 ಕೋಟಿಗೂ ಹೆಚ್ಚು ಅಕ್ರಮ ಹಣದ ದಾಖಲೆಗಳು ದೊರೆಯಿತು. ಅಂಗನವಾಡಿಯ ಮಕ್ಕಳ ಮೊಟ್ಟೆ ಹಗರಣ. ಕುಮಾರಸ್ವಾಮಿ ಅವರ ಗಣಿ ಹಗರಣದ ಬಗ್ಗೆ ಆನಂತರ ಮಾತನಾಡುತ್ತೇನೆ ಎಂದರು.
ಕುಮಾರಸ್ವಾಮಿ ಅವರು ತಮ್ಮ ಆರೋಪವನ್ನು ಹಿಂಪಡೆದು ನನ್ನ ಒಡೆತನದ ಬೇನಾಮಿ ಆಸ್ತಿಗಳ ವಿವರಗಳನ್ನು ಹೊರತರಬೇಕು ಎಂದರು. ಮಂಡ್ಯ ಮತ್ತು ಹಾಸನಕ್ಕೆ ದೊಡ್ಡ ಕೈಗಾರಿಕೆಗಳನ್ನು ತಂದು ತಲಾ 10 ಸಾವಿರ ಜನರಿಗೆ ಉದ್ಯೋಗ ನೀಡುತ್ತೇನೆ ಎಂದು ಹೇಳಿದ್ದೀರಿ. ನೀವು ಈ ಕೆಲಸ ಮಾಡಿದರೆ ನನ್ನ ಹಾಗೂ ಚಲುವರಾಯಸ್ವಾಮಿ ಅವರ ಸಂಪೂರ್ಣ ಬೆಂಬಲವಿರುತ್ತದೆ” ಎಂದು ಹೇಳಿದರು. ರಾಜ್ಯ ಸರ್ಕಾರ 10 ತಿಂಗಳಿಗಿಂತ ಹೆಚ್ಚು ಕಾಲ ಉಳಿಯುವುದಿಲ್ಲ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬ್ರಿಟಿಷರು ಕಾಂಗ್ರೆಸ್ ಅನ್ನು ದುರ್ಬಲಗೊಳಿಸಲು ಸಾಧ್ಯವಿಲ್ಲ ಮತ್ತು ಕಾಂಗ್ರೆಸ್ ಸರ್ಕಾರವು ಒಡೆಯುವ ಮಡಕೆಯಲ್ಲ ಎಂದು ಹೇಳಿದ್ದಾರೆ.
Advertisement