MUDA ಸೈಟ್ ಹಂಚಿಕೆಯಲ್ಲಿ ನನ್ನ ಪಾತ್ರವಿಲ್ಲ, ಮೈಸೂರು ಸಮಾವೇಶದಲ್ಲಿ ಬಿಜೆಪಿ-ಜೆಡಿಎಸ್ ಹಗರಣಗಳನ್ನು ಬಿಚ್ಚಿಡುತ್ತೇನೆ: ಸಿದ್ದರಾಮಯ್ಯ

ಮುಡಾದಿಂದ ಅಕ್ರಮವಾಗಿ ಸೈಟ್ ಪಡೆದ ಆರೋಪಕ್ಕೆ ಸಂಬಂಧಿಸಿ ರಾಜ್ಯಪಾಲರು ನೀಡಿರುವ ಶೋಕಾಸ್ ನೋಟಿಸ್​​​ಗೆ ಸಮರ್ಪಕವಾದ ದಾಖಲೆ ಸಲ್ಲಿಕೆ ಮಾಡಿದ್ದೇನೆ ಎಂದರು.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Updated on

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA) ದಲ್ಲಿ ಹಗರಣ ನಡೆದಿದೆ ಎಂಬ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ನಡೆಸುತ್ತಿದೆ. ರಾಜ್ಯಪಾಲರು ಸಿಎಂ ಸಿದ್ದರಾಮಯ್ಯನವರಿಗೆ ಶೋಕಾಸ್ ನೊಟೀಸ್ ನೀದಿದಾರೆ. ನಿನ್ನೆ ದೆಹಲಿಯಿಂದ ಆಗಮಿಸಿದ ರಾಜ್ಯಪಾಲರು ಟಿ ಜೆ ಅಬ್ರಹಾಂ ಅವರನ್ನು ಕರೆಸಿ ಮಾತುಕತೆ ಕೂಡ ನಡೆಸಿದ್ದಾರೆ.

ಇವಕ್ಕೆಲ್ಲಾ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಇಂದು ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಮುಡಾದಿಂದ ಬದಲಿ ಭೂಮಿ ಕೊಡುವುದು ಬೇಡ ಎಂದು ನಾನು ಹೇಳಿದ್ದೆ. ನನ್ನ ಪತ್ನಿ ಬದಲಿ ನಿವೇಶನಕ್ಕೆ ಅರ್ಜಿ ಕೊಟ್ಟಾಗ ನಾನು ಸಿಎಂ ಆಗಿದ್ದೆ. ಸಿಎಂ ಆಗಿರುವ ತನಕ ಬದಲಿ ಭೂಮಿ ಕೊಡಬೇಡಿ ಎಂದು ನಾನು ಹೇಳಿದ್ದೆ. ಪ್ರಭಾವ ಬಳಸುವುದಿದ್ದರೆ ಅಂದೇ ಬಳಸುತ್ತಿದೆ ಎಂದು ಹೇಳಿದ್ದಾರೆ.

ಸಿಎಂ ಆಗಿ ಕೊಡಲು ಆಗಿತ್ತಿರಲಿಲ್ಲವಾ, ಬದಲಿ ಸೈಟ್​ಗೆ ಮತ್ತೆ ನನ್ನ ಪತ್ನಿ 2021ರಲ್ಲಿ ಅರ್ಜಿ ಹಾಕಿದಾಗ ಬಿಜೆಪಿ ಸರ್ಕಾರ ಕಾನೂನಾತ್ಮಕವಾಗಿ ಭೂಮಿ ನೀಡಿದೆ. ಮುಡಾ ವಿಚಾರದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ, ಪ್ರಭಾವ ಬಳಸಿಲ್ಲ. ಬಿಎಸ್​ಯಡಿಯೂರಪ್ಪ ಜೈಲಿಗೆ ಹೋಗಿದ್ದ ಪ್ರಕರಣವೇ ಬೇರೆ. ಯಡಿಯೂರಪ್ಪ ಡಿನೋಟಿಫೈ ಮಾಡಿದ್ದರು. ಚೆಕ್ ಮೂಲಕ ಹಣ ಪಡೆದಿದ್ದರು. ಇಲ್ಲಿ ನಾನು ಯಾವುದೇ ಹಣ ಪಡೆದಿಲ್ಲ ಪ್ರಭಾವ ಬೀರಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ರಾಜ್ಯಪಾಲರಿಗೆ ಉತ್ತರ ನೀಡಿದ್ದೇನೆ: ಮುಡಾದಿಂದ ಅಕ್ರಮವಾಗಿ ಸೈಟ್ ಪಡೆದ ಆರೋಪಕ್ಕೆ ಸಂಬಂಧಿಸಿ ರಾಜ್ಯಪಾಲರು ನೀಡಿರುವ ಶೋಕಾಸ್ ನೋಟಿಸ್​​​ಗೆ ಸಮರ್ಪಕವಾದ ದಾಖಲೆ ಸಲ್ಲಿಕೆ ಮಾಡಿದ್ದೇನೆ. ಆದರೆ, ಇದು ರಾಜ್ಯಪಾಲರ ನೋಟಿಸ್​​​ಗೆ ಸಚಿವ ಸಂಪುಟದಲ್ಲಿ ತೆಗೆದುಕೊಂಡ ನಿರ್ಣಯವನ್ನು ಒಳಗೊಂಡಿಲ್ಲ.

ಪ್ರತ್ಯೇಕವಾಗಿ, ವೈಯಕ್ತಿಕವಾಗಿ ದಾಖಲೆಗಳ ಸಮೇತ ವಿವರ ನೀಡಿದ್ದೇನೆ. ರಾಜ್ಯಪಾಲರು ನೋಟಿಸ್​​ನಲ್ಲಿ ಉಲ್ಲೇಖಸಿರುವ ಆರೋಪಗಳು ನಿರಾಧಾರ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ
ಬಿಜೆಪಿ, ಜೆಡಿಎಸ್ ಅವಕಾಶವಾದಿಗಳ ಗುಂಪು: ಡಿಸಿಎಂ ಡಿಕೆ ಶಿವಕುಮಾರ್ ಟೀಕಾ ಪ್ರಹಾರ

ಮುಡಾ ಸೈಟ್ ಹಂಚಿಕೆ ವಿಚಾರದಲ್ಲಿ ನನ್ನ ಪಾತ್ರವಿಲ್ಲ. ಯಾವುದೇ ಪ್ರಭಾವವನ್ನೂ ಬಳಸಿಲ್ಲ. ಕಾನೂನಾತ್ಮಕವಾಗಿಯೇ ಪತ್ನಿಗೆ ಸೈಟ್ ಹಂಚಿಕೆಯಾಗಿದೆ ಎಂದಿರುವ ಸಿದ್ದರಾಮಯ್ಯ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಉತ್ತರದ ಜತೆ ಕಳುಹಿಸಿಕೊಟ್ಟಿದ್ದಾರೆ.

ಮೈಸೂರು ಸಮಾವೇಶದಲ್ಲಿ ಬಿಜೆಪಿ ಹಗರಣಗಳನ್ನು ಬಿಚ್ಚಿಡುತ್ತೇನೆ. ಬಿಜೆಪಿ, ಜೆಡಿಎಸ್​ ಸರ್ಕಾರದ ಎಲ್ಲಾ ಹಗರಣಗಳನ್ನು ಬಿಚ್ಚಿಡ್ತೇನೆ. ಜೆಡಿಎಸ್, ಬಿಜೆಪಿಯವರು ಯಾವ ಹಗರಣಗಳನ್ನು ಮಾಡಿದ್ದಾರೆ. ಎಲ್ಲವನ್ನೂ ಸಂಪೂರ್ಣವಾಗಿ ಸಮಾವೇಶದಲ್ಲಿ ತೆರೆದಿಡುತ್ತೇನೆ. ಇದೆಲ್ಲವನ್ನೂ ಹೇಳಲು ಸುದ್ದಿಗೋಷ್ಠಿಯನ್ನು ನಾನು ಕರೆದಿದ್ದೆ. ಸಮಾವೇಶದಲ್ಲೇ ಹೇಳಬೇಕೆಂದು ಸುದ್ದಿಗೋಷ್ಠಿ ರದ್ದು ಮಾಡಿದೆ. ಬಿಜೆಪಿ ಸರ್ಕಾರದ ಹಗರಣ ಬಗ್ಗೆ ತನಿಖೆಯೂ ನಡೆಯುತ್ತಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com