82ನೇ ವಯಸ್ಸಿನಲ್ಲಿ ಪೋಕ್ಸೋ ಕೇಸ್ ಎದುರಿಸಿದ BSY ಗೆ ನನ್ನ ಬಗ್ಗೆ ಮಾತಾಡುವ ನೈತಿಕತೆ ಏನಿದೆ: ಸಿದ್ದರಾಮಯ್ಯ

ಬಿಜೆಪಿಯವರು ಆಪರೇಷನ್ ಕಮಲ ಮಾಡಲು ಪ್ರಯತ್ನಿಸಿದ್ರು ಆಗಲಿಲ್ಲ. ಈಗ ಬಿಜೆಪಿ-ಜೆಡಿಎಸ್​ ಸೇರಿ ಸರ್ಕಾರ ಅಸ್ಥಿರಗೊಳಿಸಲು ಯತ್ನ ನಡೆಯುತ್ತಿದೆ.
82ನೇ ವಯಸ್ಸಿನಲ್ಲಿ ಪೋಕ್ಸೋ ಕೇಸ್ ಎದುರಿಸಿದ BSY ಗೆ ನನ್ನ ಬಗ್ಗೆ ಮಾತಾಡುವ ನೈತಿಕತೆ ಏನಿದೆ: ಸಿದ್ದರಾಮಯ್ಯ
Updated on

ಮೈಸೂರು: ಬಿ ಎಸ್ ಯಡಿಯೂರಪ್ಪನವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಆಗಿದೆ. ಕೋರ್ಟ್ ದಯೆಯಿಂದ ಬಚಾವಾಗಿದ್ದಾರೆ ಅವರಿಗೆ ನನ್ನ ಬಗ್ಗೆ ಮಾತನಾಡುವ ನೈತಿಕತೆ ಏನು ಉಳಿದಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ನಮ್ಮ ಪಾದಯಾತ್ರೆ ಮುಗಿಯುವಷ್ಟರಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರೆ ಎಂಬ ಬಿಎಸ್​ ಯಡಿಯೂರಪ್ಪ ಹೇಳಿಕೆಗೆ ಗರಂ ಆದ ಸಿಎಂ ಸಿದ್ದರಾಮಯ್ಯ, ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, ಬಿಎಸ್​ವೈಗೆ ನನ್ನ ಬಗ್ಗೆ ಮಾತಾಡುವ ನೈತಿಕತೆ ಇಲ್ಲ ಎಂದರು. ನ್ಯಾಯಾಲಯದ ದಯೆಯಿಂದ ಯಡಿಯೂರಪ್ಪ ಬದುಕಿದ್ದಾರೆ.

ಇಲ್ಲವಾದರೇ ಯಡಿಯೂರಪ್ಪ ಜೈಲಲ್ಲಿ ಇರಬೇಕಿತ್ತು. 82 ವರ್ಷ ವಯಸ್ಸಿನಲ್ಲಿ ಇದು ಬೇಕಿತ್ತಾ, ಚಿಕ್ಕ ಮಗುವಿನ ಮೇಲೆ ಈ ರೀತಿ ಮಾಡಬೇಕಿತ್ತಾ, ಯಡಿಯೂರಪ್ಪಗೆ ಯಾವ ನೈತಿಕತೆ ಇದೆ ನನ್ನ ಬಗ್ಗೆ ಮಾತನಾಡುವುದ್ದಕ್ಕೆ. ಯಡಿಯೂರಪ್ಪ ರಾಜಕೀಯ ಜೀವನದಿಂದ ನಿವೃತ್ತಿಯಾಗಬೇಕಿತ್ತು. ಅವರಿಗೆ ರಾಜಕೀಯ ನಿವೃತ್ತರಾಗಲು ಹೇಳಿ ಎಂದರು.

82ನೇ ವಯಸ್ಸಿನಲ್ಲಿ ಪೋಕ್ಸೋ ಕೇಸ್ ಎದುರಿಸಿದ BSY ಗೆ ನನ್ನ ಬಗ್ಗೆ ಮಾತಾಡುವ ನೈತಿಕತೆ ಏನಿದೆ: ಸಿದ್ದರಾಮಯ್ಯ
MUDA ಸೈಟ್ ಹಂಚಿಕೆಯಲ್ಲಿ ನನ್ನ ಪಾತ್ರವಿಲ್ಲ, ಮೈಸೂರು ಸಮಾವೇಶದಲ್ಲಿ ಬಿಜೆಪಿ-ಜೆಡಿಎಸ್ ಹಗರಣಗಳನ್ನು ಬಿಚ್ಚಿಡುತ್ತೇನೆ: ಸಿದ್ದರಾಮಯ್ಯ

ಬಿಜೆಪಿಯವರು ಆಪರೇಷನ್ ಕಮಲ ಮಾಡಲು ಪ್ರಯತ್ನಿಸಿದ್ರು ಆಗಲಿಲ್ಲ. ಈಗ ಬಿಜೆಪಿ-ಜೆಡಿಎಸ್​ ಸೇರಿ ಸರ್ಕಾರ ಅಸ್ಥಿರಗೊಳಿಸಲು ಯತ್ನ ನಡೆಯುತ್ತಿದೆ. ನಮ್ಮ ಸರ್ಕಾರ ಬಡವರ ಪರ ಕೆಲಸ ಮಾಡುತ್ತಿದೆ. ಹೀಗಾಗಿ ನಮ್ಮ ಸರ್ಕಾರದ ಬಗ್ಗೆ ಬಿಜೆಪಿ-ಜೆಡಿಎಸ್​ಗೆ ಭಯವಿದೆ. ಗ್ಯಾರಂಟಿಗಳನ್ನು ನಿಲ್ಲಿಸುತ್ತಾರೆಂದು ಸುಳ್ಳು ಹೇಳಿಕೆ ನೀಡಿದ್ರು, ನಾವು ಗ್ಯಾರಂಟಿ ಯೋಜನೆಗಳನ್ನು ಎಲ್ಲಿ ನಿಲ್ಲಿಸಿದ್ದೇವೆ ಹೇಳಲಿ. ಬಡವರ ಪರ ನಮ್ಮ ಸರ್ಕಾರ ಕೆಲಸ ಮಾಡುತ್ತಿರುವುದಕ್ಕೆ ಅವರಿಗೆ ಭಯವಿದೆ. ಹೀಗಾಗಿ ಬಿಜೆಪಿ-ಜೆಡಿಎಸ್ ನಮ್ಮ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com