ಮುನಿಸು ಮರೆತು ಸಿದ್ದರಾಮಯ್ಯ ಭೇಟಿ ಮಾಡಿದ ಬಿ.ಕೆ ಹರಿಪ್ರಸಾದ್: ಒಂದು ತಾಸಿಗೂ ಹೆಚ್ಚು ಚರ್ಚೆ!

ಎಐಸಿಸಿ ನಾಯಕರು ರಾಜ್ಯಕ್ಕೆ ಭೇಟಿ ನೀಡಿ ವಾಪಸ್ ತೆರಳಿರುವ ಬೆನ್ನಲ್ಲೇ ಸಿಎಂ ಸರ್ಕಾರಿ ನಿವಾಸ ಕಾವೇರಿಗೆ ತೆರಳಿದ ಹರಿಪ್ರಸಾದ್, ಕ್ಲೋಸ್ ಡೋರ್ ಮೀಟಿಂಗ್ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಸಿದ್ದರಾಮಯ್ಯ ಮತ್ತು ಬಿ.ಕೆ ಹರಿಪ್ರಸಾದ್
ಸಿದ್ದರಾಮಯ್ಯ ಮತ್ತು ಬಿ.ಕೆ ಹರಿಪ್ರಸಾದ್
Updated on

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸಿದ್ದರಾಮಯ್ಯ ಅವರನ್ನು ಟೀಕಿಸುತ್ತಲೇ ಬಂದಿದ್ದ ಎಂಎಲ್​ಸಿ ಬಿಕೆ ಹರಿಪ್ರಸಾದ್ ದಿಢೀರಾಗಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಒಂದು ವರ್ಷದ ನಂತರ ಉಭಯ ನಾಯಕರು ಭೇಟಿಯಾಗಿ ಸಮಾಲೋಚನೆ ನಡೆಸಿರುವುದು ಕಾಂಗ್ರೆಸ್ ಪಾಳಯದಲ್ಲಿ ಅಚ್ಚರಿಗೆ ಕಾರಣವಾಗಿದೆ. ಎಐಸಿಸಿ ನಾಯಕರು ರಾಜ್ಯಕ್ಕೆ ಭೇಟಿ ನೀಡಿ ವಾಪಸ್ ತೆರಳಿರುವ ಬೆನ್ನಲ್ಲೇ ಸಿಎಂ ಸರ್ಕಾರಿ ನಿವಾಸ ಕಾವೇರಿಗೆ ತೆರಳಿದ ಹರಿಪ್ರಸಾದ್, ಕ್ಲೋಸ್ ಡೋರ್ ಮೀಟಿಂಗ್ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಸುದೀರ್ಘ ಒಂದುವರೆ ಗಂಟೆಗಳ ಕಾಲ ಸಿಎಂ ಹಾಗೂ ಹರಿಪ್ರಸಾದ್ ಮಾತುಕತೆ ನಡೆಸಿದರು. ಸಚಿವ ಮಹದೇವಪ್ಪ ಕರೆ ಮಾಡಿ ಬಿಕೆ ಹರಿಪ್ರಸಾದ್‌ಗೆ ಆಹ್ವಾನ ನೀಡಿದ್ದರು. ಸಿಎಂ ಸಿದ್ದರಾಮಯ್ಯ ಬಳಿಗೆ ಹರಿಪ್ರಸಾದ್ ಅವರನ್ನು ಆರ್.ಎಲ್ ಜಾಲಪ್ಪ ಅವರ ಅಳಿಯ ನಾಗರಾಜ್ ಕರೆದುಕೊಂಡು ಹೋದರು. ಮೈಸೂರಿನ ಜನಾಂದೋಲನ ಸಮಾವೇಶಕ್ಕೆ ಬರುವಂತೆ ಬಿಕೆ ಹರಿಪ್ರಸಾದ್‌ಗೆ ಸಿದ್ದರಾಮಯ್ಯ ಖುದ್ದು ಆಹ್ವಾನಿಸಿದರು.

ಬಿಜೆಪಿ- ಜೆಡಿಎಸ್ ಪಾದಯಾತ್ರೆಯ ಹಿನ್ನೆಲೆಯಲ್ಲಿ ಯಾವೆಲ್ಲ ಷಡ್ಯಂತ್ರ ತಮ್ಮ ವಿರುದ್ಧ ನಡೆದಿದೆ ಎಂಬ ಅಭಿಪ್ರಾಯವನ್ನು ಹರಿಪ್ರಸಾದ್‌ ಜೊತೆ ಸಿಎಂ ಹಂಚಿಕೊಂಡಿದ್ದಾರೆ. ಇದೀಗ ಮೈಸೂರಿನ ಜನಾಂದೋಲನ ಸಮಾವೇಶಕ್ಕೆ ಹರಿಪ್ರಸಾದ್ ಹೋಗ್ತಾರಾ ಇಲ್ಲವಾ ಎಂಬ ಕುತೂಹಲ ಮೂಡಿದೆ.

ಸಿದ್ದರಾಮಯ್ಯ ಮತ್ತು ಬಿ.ಕೆ ಹರಿಪ್ರಸಾದ್
ಹೊರಗಿನವ ಎಂಬ ಆರೋಪ ಸರಿಯಲ್ಲ, ಮೋದಿಯೇ ಪ್ರಮುಖ ಎದುರಾಳಿ, ತೇಜಸ್ವಿ ಅಲ್ಲ- ಬಿ. ಕೆ. ಹರಿ ಪ್ರಸಾದ್

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com