ಜನಪರ ಉದ್ದೇಶವಿಲ್ಲದ ಜೆಡಿಎಸ್-ಬಿಜೆಪಿ ಪಾದಯಾತ್ರೆ ಜನರಿಂದ ತಿರಸ್ಕಾರ: ಡಿಸಿಎಂ ಡಿ.ಕೆ ಶಿವಕುಮಾರ್

ಬಿಜೆಪಿ-ಜೆಡಿಎಸ್ ಪಾದಯಾತ್ರೆಯ ಉದ್ದೇಶವೇನು? ಒಬಿಸಿ ನಾಯಕರೊಬ್ಬರು ಎರಡನೇ ಅವಧಿಗೆ ಸಿಎಂ ಆಗಿರುವುದನ್ನು ಅರಗಿಸಿಕೊಳ್ಳಲಾಗದೇ ಅವರು ಈ ರೀತಿ ಮಾಡುತ್ತಿದ್ದಾರೆ. ಪಾದಯಾತ್ರೆಗೆ ಜನ ಸ್ಪಂದಿಸುತ್ತಿಲ್ಲ.
ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್
Updated on

ಬೆಂಗಳೂರು: ಜನಪರ ಉದ್ದೇಶ, ಅರ್ಥಗರ್ಭಿತ ಕಾರಣವಿಲ್ಲದ ಬಿಜೆಪಿ-ಜೆಡಿಎಸ್ ಪಾದಯಾತ್ರೆಯನ್ನು ಜನ ತಿರಸ್ಕರಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಬಿಜೆಪಿ-ಜೆಡಿಎಸ್ ಪಾದಯಾತ್ರೆಯ ಉದ್ದೇಶವೇನು? ಒಬಿಸಿ ನಾಯಕರೊಬ್ಬರು ಎರಡನೇ ಅವಧಿಗೆ ಸಿಎಂ ಆಗಿರುವುದನ್ನು ಅರಗಿಸಿಕೊಳ್ಳಲಾಗದೇ ಅವರು ಈ ರೀತಿ ಮಾಡುತ್ತಿದ್ದಾರೆ. ಪಾದಯಾತ್ರೆಗೆ ಜನ ಸ್ಪಂದಿಸುತ್ತಿಲ್ಲ ಎಂದರು. ಪಾದಯಾತ್ರೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸುತ್ತಿಲ್ಲ, ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರಿಗೆ ನಿರ್ದಿಷ್ಟ ಪ್ರಶ್ನೆಗಳನ್ನು ಕೇಳಿದ್ದೇವೆ, ಆದರೆ ಅವರು ಆ ಯಾವುದೇ ಪ್ರಶ್ನೆಗಳಿಗೆ ಉತ್ತರ ನೀಡಲಿಲ್ಲ ಎಂದ ಆರೋಪಿಸಿದರು. 2007ರಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಸಂಡೂರಿನಲ್ಲಿ ಅಕ್ರಮವಾಗಿ ಗಣಿಗಾರಿಕೆಗೆ ಅನುಮತಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ನಿರ್ಧಾರಕ್ಕಾಗಿ ಕಾಯುತ್ತಿದ್ದೇವೆ ಎಂದು ಡಿಸಿಎಂ ಹೇಳಿದರು.

ನಾನು ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳನ್ನು ಓದಿದ್ದೇನೆ. ಆರೋಪಪಟ್ಟಿ ಸಲ್ಲಿಕೆಯಾಗಿದೆ ಎಂದು ತಿಳಿಸಲಾಗಿದೆ, ಲೋಕಾಯುಕ್ತರು ಅವರನ್ನು ವಿಚಾರಣೆಗೆ ಒಳಪಡಿಸಲು ರಾಜ್ಯಪಾಲರಿಂದ ಅನುಮತಿ ಕೋರಿದ್ದಾರೆ. ಈ ಮನವಿಗೆ ರಾಜ್ಯಪಾಲರು ಇನ್ನೂ ಅನುಮೋದನೆ ನೀಡಿಲ್ಲ. ಇದರ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ ಆದರೆ ಇದನ್ನು ಸಂಪೂರ್ಣವಾಗಿ ತನಿಖೆ ಮಾಡಬೇಕಾಗಿದೆ. ಈ ವಿಚಾರದಲ್ಲಿ ರಾಜ್ಯಪಾಲರು ಏನು ತೀರ್ಮಾನ ಮಾಡುತ್ತಾರೆ ಎಂಬುದನ್ನು ಕಾದು ನೋಡುತ್ತೇನೆ ಎಂದರು. 2007ರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಎಚ್‌ಡಿ ಕುಮಾರಸ್ವಾಮಿ ಅವರನ್ನು ವಿಚಾರಣೆಗೆ ಒಳಪಡಿಸಲು ಲೋಕಾಯುಕ್ತರು ರಾಜ್ಯಪಾಲರಿಂದ ಅನುಮತಿ ಕೇಳಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ. ದೇವೇಗೌಡರು ನಿನ್ನೆ ಅಮಿತ್ ಶಾ ಅವರನ್ನು ಭೇಟಿ ಮಾಡಿರುವ ಬಗ್ಗೆ ಕೇಳಿದಾಗ, “ತಮ್ಮ ಕುಟುಂಬದವರನ್ನು ರಕ್ಷಣೆ ಮಾಡಿಕೊಳ್ಳಲು ಅವರು ಹೋಗಲೇ ಬೇಕಲ್ಲವೇ?. ನಮ್ಮ ವಿರುದ್ಧ ದೂರು ನೀಡಿ, ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರನ್ನು ಒಳಗೆ ಹಾಕಲೇಬೇಕು ಎಂಬ ಪ್ರಯತ್ನಗಳು ನಡೆಯುತ್ತಲೇ ಇವೆ. ನಾನು ಎಲ್ಲದಕ್ಕೂ ಸಿದ್ಧವಿದ್ದೇನೆ ಎಂದು ಹೇಳಿದ್ದಾರೆ.

ಡಿ.ಕೆ ಶಿವಕುಮಾರ್
'ಗೌಡರ ಗೌಡ ಪ್ರೀತಂ ಗೌಡ'- ಬೆಂಬಲಿಗರ ಘೋಷಣೆ: ಪಾದಯಾತ್ರೆ ವೇಳೆ ಬಿಜೆಪಿ- ಜೆಡಿಎಸ್ ಕಾರ್ಯಕರ್ತರ ಘರ್ಷಣೆ!

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com