Muda scam: ಸಿಎಂ ಸಿದ್ದರಾಮಯ್ಯ ಮನೆಗೆ ಹೋಗುವ ಕಾಲ ಹತ್ತಿರವಾಗಿದೆ- ಬಿ.ಎಸ್ ಯಡಿಯೂರಪ್ಪ

ಮುಡಾ ಹಗರಣದ ವಿರುದ್ಧ ಮತ್ತು ಸಿಎಂ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ, ಜೆಡಿಎಸ್‌ನ ಮೈಸೂರು ಚಲೋ ಪಾದಯಾತ್ರೆ 7ನೇ ದಿನಕ್ಕೆ ಕಾಲಿಟ್ಟಿದೆ. ಪಾದಯಾತ್ರೆಯಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದ ಯಡಿಯೂರಪ್ಪ ಅವರು, ಚಾಮುಂಡೇಶ್ವರಿ ದರ್ಶನ ಪಡೆದುಕೊಂಡರು.
ಬಿ.ಎಸ್.ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ
Updated on

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮನೆಗೆ ಹೋಗುವ ಕಾಲ ಹತ್ತಿರವಾಗಿದೆ. ನಿವೃತ್ತಿ ಪಡೆಯುವಾಗ ಇನ್ನೊಬ್ಬರ ಬಗ್ಗೆ ಹೇಳೋದು ಸ್ವಾಭಾವಿಕ. ಸಿದ್ದರಾಮಯ್ಯ ಅವರೂ ಮನಬಂದಂತೆ ಮಾತಾಡುತ್ತಿದ್ದಾರೆ, ಮಾತಾಡಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಹೇಳಿದರು.

ಮುಡಾ ಹಗರಣದ ವಿರುದ್ಧ ಮತ್ತು ಸಿಎಂ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ, ಜೆಡಿಎಸ್‌ನ ಮೈಸೂರು ಚಲೋ ಪಾದಯಾತ್ರೆ 7ನೇ ದಿನಕ್ಕೆ ಕಾಲಿಟ್ಟಿದೆ. ಪಾದಯಾತ್ರೆಗೆ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದ ಯಡಿಯೂರಪ್ಪ ಅವರು, ಚಾಮುಂಡೇಶ್ವರಿ ದರ್ಶನ ಪಡೆದುಕೊಂಡರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡಸಿದರು. ಯಾರು ನಿವೃತ್ತಿಯಾಗುತ್ತಾರೆ? ಏನಾಗುತ್ತಾರೆಂಬುದು ಮುಂದೆ ಗೊತ್ತಾಗುತ್ತದೆ ಎಂದು ಹೇಳಿದರು.

ನಿವೃತ್ತಿ ಪಡೆಯುವಾಗ ಇನ್ನೊಬ್ಬರ ಬಗ್ಗೆ ಹೇಳುವುದು ಸ್ವಾಭಾವಿಕ. ಸಿದ್ದರಾಮಯ್ಯ ಅವರು ಮನಬಂದಂತೆ ಮಾತಾಡುತ್ತಿದ್ದಾರೆ, ಮಾತಾಡಲಿ ಎಂದು ಗುಡುಗಿದರು.

ಬಿ.ಎಸ್.ಯಡಿಯೂರಪ್ಪ
82ನೇ ವಯಸ್ಸಿನಲ್ಲಿ ಪೋಕ್ಸೋ ಕೇಸ್ ಎದುರಿಸಿದ BSY ಗೆ ನನ್ನ ಬಗ್ಗೆ ಮಾತಾಡುವ ನೈತಿಕತೆ ಏನಿದೆ: ಸಿದ್ದರಾಮಯ್ಯ

ಈ ದೇಶದ ಇತಿಹಾಸದಲ್ಲಿ ಒಬ್ಬ ಮುಖ್ಯಮಂತ್ರಿ ತಮ್ಮ ಮನೆಯವರಿಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಬೆಲೆ ಬಾಳುವ ನಿವೇಶನ ಕೊಟ್ಟ ಉದಾಹರಣೆ ಇದೆಯೇ? ಸ್ವಂತ ಪತ್ನಿಗೆ ಸೈಟು ಕೊಟ್ಟಿರುವುದು ಅಕ್ಷಮ್ಯ ಅಪರಾಧ ಎಂದು ಹೇಳಿದರು.

ನನ್ನ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ತೀರ್ಮಾನ ಆದ ಬಳಿಕ ಸತ್ಯ ಸಂಗತಿ ಬಹಿರಂಗ ಆಗುತ್ತದೆ. ಅಲ್ಲಿಯವರೆಗೂ ನಾನು ಏನನ್ನೂ ಮಾತನಾಡುವುದಿಲ್ಲ. ಅಲ್ಲಿಯೇ ಸಿದ್ದರಾಮಯ್ಯ ಅವರಿಗೆ ತಕ್ಕ ಉತ್ತರ ಸಿಗಲಿದೆ ಎಂದು ಇದೇ ವೇಳೆ ತಿರುಗೇಟು ನೀಡಿದರು.

ಬಿಜೆಪಿ–ಜೆಡಿಎಸ್ ಹಮ್ಮಿಕೊಂಡಿರುವ ಜನಾಕ್ರೋಶ ಯಾತ್ರೆಯು ಇತಿಹಾಸದಲ್ಲೇ ಐತಿಹಾಸಿಕ ಪಾದಯಾತ್ರೆ. ಭ್ರಷ್ಟ ಸರ್ಕಾರ ಕಿತ್ತೊಗೆಯಲು ವಿಜಯೇಂದ್ರ ನೇತೃತ್ವದಲ್ಲಿ ಈ ಪಾದಯಾತ್ರೆ ನಡೆದಿದೆ. ಜನರಿಂದ ನಿರೀಕ್ಷೆಗೂ ಮೀರಿ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com