Muda scam: BJP-JDS ಪಾದಯಾತ್ರೆ ಮುಕ್ತಾಯ; ಸಿದ್ದು ತಲೆದಂಡಕ್ಕೆ ದೋಸ್ತಿ ಪಣ, ಹೋರಾಟ ತಾರ್ಕಿಕ ಅಂತ್ಯಕ್ಕೆ ಒಯ್ಯಲು ಶಪಥ

ಶನಿವಾರ ಸಿದ್ದರಾಮಯ್ಯ ಅವರ ತವರು ಮೈಸೂರಿನಲ್ಲಿ ಬೃಹತ್ ಸಮಾವೇಶದ ಮೂಲಕ ಘರ್ಜಿಸಿದ ಮಿತ್ರಪಕ್ಷಗಳ ಘಟಾನುಘಟಿ ನಾಯಕರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರೆಸುವುದಾಗಿ ಕಾರ್ಯಕರ್ತರ ಸಮ್ಮುಖದಲ್ಲಿ ಶಪಥ ಮಾಡಿದರು.
ಮೈಸೂರಿನಲ್ಲಿ ನಡೆದ ಸಮಾವೇಶದಲ್ಲಿ ಬಿಜೆಪಿ-ಜೆಡಿಎಸ್ ನಾಯಕರು.
ಮೈಸೂರಿನಲ್ಲಿ ನಡೆದ ಸಮಾವೇಶದಲ್ಲಿ ಬಿಜೆಪಿ-ಜೆಡಿಎಸ್ ನಾಯಕರು.
Updated on

ಮೈಸೂರು: ಮುಡಾ ಹಾಗೂ ವಾಲ್ಮೀಕಿ ನಿಗಮ ಹಗರಣವನ್ನೇ ಅಸ್ತ್ರವನ್ನಾಗಿಸಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಪದತ್ಯಾಗಕ್ಕೆ ಆಗ್ರಹಿಸಿ 8 ದಿನಗಳ ಕಾಲ ಬಿಜೆಪಿ-ಜೆಡಿಎಸ್ ನಡೆಸಿದ ಮೈಸೂರು ಚಲೋ ಪಾದಯಾತ್ರೆಯು ಬೃಹತ್ ಸಮಾವೇಶದೊಂದಿಗೆ ಶನಿವಾರ ತೆರೆಬಿದ್ದಿದ್ದು, ಮುಖ್ಯಮಂತ್ರಿಗಳು ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರೆಸುವುದಾಗಿ ಎರಡೂ ಪಕ್ಷಗಳು ಶಪಥ ಮಾಡಿವೆ.

ಶನಿವಾರ ಸಿದ್ದರಾಮಯ್ಯ ಅವರ ತವರು ಮೈಸೂರಿನಲ್ಲಿ ಬೃಹತ್ ಸಮಾವೇಶದ ಮೂಲಕ ಘರ್ಜಿಸಿದ ಮಿತ್ರಪಕ್ಷಗಳ ಘಟಾನುಘಟಿ ನಾಯಕರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರೆಸುವುದಾಗಿ ಕಾರ್ಯಕರ್ತರ ಸಮ್ಮುಖದಲ್ಲಿ ಶಪಥ ಮಾಡಿದರು.

ಎಸ್‌ಸಿ ಮತ್ತು ಎಸ್‌ಟಿಗಳ ಅಭಿವೃದ್ಧಿಗೆ ಮೀಸಲಿಟ್ಟ 25,000 ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸುವ ಮೂಲಕ ಸಿದ್ದರಾಮಯ್ಯ ಅವರು ‘ದ್ರೋಹ’ ಎಸಗಿದ್ದಾರೆ. ಅವರೊಬ್ಬ ‘ಭ್ರಷ್ಟ’ ನಾಯಕ. ಹೀಗಾಗಿ ಸಿಎಂ ಆಗಿ ಮುಂದುವರಿಯುವ ನೈತಿಕ ಹಕ್ಕನ್ನು ಕಳೆದುಕೊಂಡಿದ್ದಾರೆ. ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಮುಕ್ತಗೊಳಿಸಲು ನಮ್ಮ ಪಕ್ಷ ಒಗ್ಗಟ್ಟಿನಿಂದ ಕೆಲಸ ಮಾಡಲಿದೆ. ಪ್ರತಿಪಕ್ಷಗಳ ದಾಳಿಗೆ ಹೆದರಿ ಸಿದ್ದರಾಮಯ್ಯ ಸರ್ಕಾರ ಸದನದಿಂದ ಪಲಾಯನ ಮಾಡಿತು ಎಂದು ವಾಗ್ದಾಳಿ ನಡೆಸಿದರು.

ಇದೇ ವೇಳೆ ಪತ್ನಿಯ ಹೆಸರಿನಲ್ಲಿ 14 ಮುಡಾ ನಿವೇಶನಗಳನ್ನು ನೋಂದಾಯಿಸಲು ನಿಯಮಗಳ ಉಲ್ಲಂಘನೆ ಮತ್ತು ಅಧಿಕಾರವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ ಎಂದು ಆಗ್ರಹಿಸಿದರು.

ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪ ಅವರು ಮಾತನಾಡಿ, ಸಿದ್ದರಾಮಯ್ಯ ಅವರ ರಾಜಕೀಯ ನಿವೃತ್ತಿ ಹೇಳಿಕೆ ವಿರುದ್ಧ ಕಿಡಿಕಾರಿದರು.

ನನ್ನ ಕೊನೆಯ ಉಸಿರು ಇರುವವರೆಗೂ ಸಾರ್ವಜನಿಕ ಜೀವನದಲ್ಲಿ ಇರುತ್ತೇನೆ. ನಾನು ರಾಜ್ಯ ಪ್ರವಾಸ ಮಾಡುತ್ತೇನೆ ಮತ್ತು ನೀವು (ಸಿದ್ದರಾಮಯ್ಯ) ಅಧಿಕಾರದಿಂದ ಕೆಳಗಿಳಿಯುವವರೆಗೂ ವಿರಮಿಸುವುದಿಲ್ಲ ಎಂದು ಶಪಥ ಮಾಡಿದರು.

ಮೈಸೂರಿನಲ್ಲಿ ನಡೆದ ಸಮಾವೇಶದಲ್ಲಿ ಬಿಜೆಪಿ-ಜೆಡಿಎಸ್ ನಾಯಕರು.
ಶೋಷಿತರು ಅಧಿಕಾರ ನಡೆಸೋದನ್ನ ಮನುವಾದಿಗಳು ಸಹಿಸಲ್ಲ; ಬಿಜೆಪಿ, ಜೆಡಿಎಸ್ ಎಷ್ಟೇ ಪಾದಯಾತ್ರೆ ನಡೆಸಿದರೂ ನಾನು ಜಗ್ಗಲ್ಲ, ಬಗ್ಗಲ್ಲ: ಸಿಎಂ

ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳು ನನೆಗುದಿಗೆ ಬಿದ್ದಿವೆ. ಸಿದ್ದರಾಮಯ್ಯ ಅವರು ಸದನ ವಿಸರ್ಜಿಸಿ, ಚುನಾವಣೆಗೆ ನಿಲ್ಲಬೇಕು. ಈಗಲೇ ಚುನಾವಣೆ ನಡೆದರೆ ಬಿಜೆಪಿ 130-140 ಸ್ಥಾನಗಳನ್ನು ಗೆಲ್ಲಲಿದೆ ಎಂದರು.

ಬಳಿಕ ಡಿಕೆ,ಶಿವಕುಮಾರ್ ಕುರಿತು ಮಾತನಾಡಿ, ಅವರು ಅವರ ಭವಿಷ್ಯದ ಬಗ್ಗೆ ಚಿಂತೆ ನಡೆಸಲಿ ಎಂದು ಸಲಹೆ ನೀಡಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ನೇತೃತ್ವದಲ್ಲಿ ಬಿಜೆಪಿ-ಜೆಡಿಎಸ್ ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.

ಕುಮಾರಸ್ವಾಮಿಯವರು ಮಾತನಾಡಿ, ಡಿಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದರು. ಇದೇ ವೇಳೆ 50 ಭೂ ಡಿನೋಟಿಫಿಕೇಷನ್ ಪ್ರಕರಣಗಳಲ್ಲಿ ಎಚ್‌ಡಿಕೆ ಭಾಗಿಯಾಗಿರುವ ಬಗ್ಗೆ ವಿವರ ನೀಡುವುದಾಗಿ ಇತ್ತೀಚೆಗೆ ಹೇಳಿಕೆ ನೀಡಿದ್ದ ಶಿವಕುಮಾರ್ ಅವರ ಸವಾಲನ್ನು ಸ್ವೀಕರಿಸಿಲುವುದಾಗಿ ತಿಳಿಸಿದರು.

ನಿಯಮ ಉಲ್ಲಂಘಿಸಿ ಅಧಿಕಾರ ದುರುಪಯೋಗಪಡಿಸಿಕೊಂಡು ಪತ್ನಿಗೆ ಮಂಜೂರಾದ ಮುಡಾ ನಿವೇಶನಗಳನ್ನು ಹಿಂದಿರುಗಿಸುವುದಾಗಿ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಆದರೆ, ಇದೀಗ ಪಶ್ಚಾತ್ತಾಪ ಪಡುವುದರಲ್ಲಿ ಯಾವುದೇ ಪ್ರಯೋಜನವಿಲ್ಲ ಎಂದು ಹೇಳಿದರು.

ವಿಜಯೇದ್ರ ಅವರು ಮಾತನಾಡಿ, ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com