ಮೈಸೂರು: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಲು ಸಿದ್ದರಿಲ್ಲ ಎಂದು ಮಾಜಿ ಸಚಿವ ಸಾರಾ ಮಹೇಶ್ ಹೇಳಿದ್ದಾರೆ. ಖಾಸಗಿ ಟಿವಿ ಚಾನೆಲ್ ಜೊತೆ ಮಾತನಾಡಿರುವ ಅವರು, ನಾನು ಚುನಾವಣೆಗೆ ಸ್ಪರ್ಧೆ ಮಾಡಲ್ಲ ಎಂದು ನಿಖಿಲ್ ಸ್ಪಷ್ಟಪಡಿಸಿದ್ದಾರೆ. ದೇವೇಗೌಡರು, ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಅಭಿಪ್ರಾಯ ಕೂಡ ಇದೇ ಆಗಿದೆ ಎಂದು ತಿಳಿಸಿದ್ದಾರೆ.
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ನಿಖಿಲ್ ಮೇಲೆ ಕಾರ್ಯಕರ್ತರ ಒತ್ತಡವಿದೆ. ಆದರೆ ಅವರು ಯಾವ ಒತ್ತಡಕ್ಕೂ ಮಣಿಯುವ ಸ್ಥಿತಿಯಲ್ಲಿ ಇಲ್ಲ ಎಂದು ತಿಳಿಸಿದ್ದಾರೆ. ಇನ್ನೂ ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧಿಸುವುದಾಗಿ ಸಿ.ಪಿ ಯೋಗೇಶ್ವರ್ ಘೋಷಿಸಿಕೊಂಡಿದ್ದಾರೆ. ಪಕ್ಷ ಟಿಕೆಟ್ ನೀಡದಿದ್ದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಅವರು ಹೇಳಿದ್ದಾರೆ.
Advertisement