ನಾಯಕತ್ವ ವಿಚಾರ: ಕಮಲ ಪಾಳಯದಲ್ಲಿ ಒಡಕು; ಮೈತ್ರಿ ಪಕ್ಷ ಜೆಡಿಎಸ್'ಗೂ ಬೇಸರ ತರಿಸಿದ ಆಂತರಿಕ ಕಚ್ಚಾಟ..!

ಬಿಜೆಪಿಯ ಬಂಡಾಯ ನಾಯಕರು ಇತ್ತೀಚೆಗಷ್ಟೇ ಬೆಳಗಾವಿಯಲ್ಲಿ ಪ್ರತ್ಯೇಕ ಸಭೆ ನಡೆಸಿದ್ದು, ವಾಲ್ಮೀಕಿ ನಿಗಮ ಹಗರಣದ ವಿರುದ್ಧ ಕೂಡಲಸಂಗಮ-ಬಳ್ಳಾರಿ ಪಾದಯಾತ್ರೆ ನಡೆಸಲು ನಿರ್ಧಾರ ಕೈಗೊಂಡಿದ್ದರು. ಮಾಜಿ ಸಚಿವ ರಮೇಶ್​ ಜಾರಕಿಹೊಳಿ, ಬಿಜೆಪಿ ಶಾಸಕ ಯತ್ನಾಳ್​ ನೇತೃತ್ವದಲ್ಲಿ ಈ ಸಭೆ ನಡೆದಿತ್ತು.
ಬಿ ವೈ ವಿಜಯೇಂದ್ರ
ಬಿ ವೈ ವಿಜಯೇಂದ್ರ
Updated on

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಆಂತರಿಕ ಬೆಳವಣಿಗೆ ದಿನ ದಿನಕ್ಕೂ ಹೆಚ್ಚಾಗುತ್ತಲೇ ಇದೆ. ಮುಡಾ ಹಗರಣ ಪ್ರಕರಣ ಸಂಬಂಧ ಇತ್ತೀಚೆಗಷ್ಟೇ ಮೈತ್ರಿ ಪಕ್ಷಗಳಾದ ಬಿಜೆಪಿ-ಜೆಡಿಎಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಮೈಸೂರು ಚಲೋ ಪಾದಯಾತ್ರೆ ನಡೆಸಿತ್ತು. ಆದರೆ, ಬಿಜೆಪಿಯ ಮತ್ತೊಂದು ಪಾಳಯ ಪ್ರತ್ಯೇಕ ಪಾದಯಾತ್ರೆ ಕೈಗೊಳ್ಳಲು ಮುಂದಾಗಿದ್ದು, ಈ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಸಮರ ಮುಂದುವರಿಸಿದ್ದಾರೆ.

ಬಿಜೆಪಿಯ ಬಂಡಾಯ ನಾಯಕರು ಇತ್ತೀಚೆಗಷ್ಟೇ ಬೆಳಗಾವಿಯಲ್ಲಿ ಪ್ರತ್ಯೇಕ ಸಭೆ ನಡೆಸಿದ್ದು, ವಾಲ್ಮೀಕಿ ನಿಗಮ ಹಗರಣದ ವಿರುದ್ಧ ಕೂಡಲಸಂಗಮ-ಬಳ್ಳಾರಿ ಪಾದಯಾತ್ರೆ ನಡೆಸಲು ನಿರ್ಧಾರ ಕೈಗೊಂಡಿದ್ದರು. ಮಾಜಿ ಸಚಿವ ರಮೇಶ್​ ಜಾರಕಿಹೊಳಿ, ಬಿಜೆಪಿ ಶಾಸಕ ಯತ್ನಾಳ್​ ನೇತೃತ್ವದಲ್ಲಿ ಈ ಸಭೆ ನಡೆದಿತ್ತು.

ಸಭೆಯಲ್ಲಿ ಬಿಎಸ್​ವೈ ಮಾಜಿ ಆಪ್ತ ಸಹಾಯಕ, ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಂಸದ ಪ್ರತಾಪ್ ಸಿಂಹ, ಅಣ್ಣಾಸಾಹೇಬ್ ಜೊಲ್ಲೆ, ಕುಮಾರ ಬಂಗಾರಪ್ಪ, ಜಿ.ಎಂ.ಸಿದ್ದೇಶ್ವರ. ಜಿ.ಎಂ.ಸಿದ್ದೇಶ್ವರ್, ಬಿ.ಪಿ.ಹರೀಶ್, ಎನ್.ಆರ್.ಸಂತೋಷ್ ಭಾಗಿಯಾಗಿರುವುದು ಕಂಡು ಬಂದಿತ್ತು.

ಈ ಸಭೆಯ ಮೂಲಕ ತಾವು ವಿಜಯೇಂದ್ರ ನಾಯಕತ್ವ ಒಪ್ಪುವುದಿಲ್ಲ ಎಂಬ ಸಂದೇಶವನ್ನು ಸಾರಿದ್ದರು. ಇದೀಗ ಈ ನಾಯಕರು ಪ್ರತ್ಯೇಕ ಪಾದಯಾತ್ರೆಗಾಗಿ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ಗಾಗಿ ಕಾಯುತ್ತಿದ್ದಾರೆಂದು ಮೂಲಗಳು ತಿಳಿಸಿವೆ.

ಪ್ರಸ್ತುತ ಬಂಡಾಯ ನಾಯಕರು ಪಾದಯಾತ್ರೆ ನಡೆಸಲು ನಿರ್ಧರಿಸಿರುವ ಸ್ಥಳ ವೀರಶೈವ-ಲಿಂಗಾಯತರನ್ನು ಹೊರತುಪಡಿಸಿ ಎಸ್‌ಸಿ/ಎಸ್‌ಟಿ/ಒಬಿಸಿ ಜನಸಂಖ್ಯೆ ಹೆಚ್ಚಿರುವ ಪ್ರದೇಶವಾಗಿದೆ. ಯಾವುದೇ ನಾಯಕ ಒಂದು ಪ್ರತ್ಯೇಕ ಸಮುದಾಯಕ್ಕೆ ಸೀಮಿತವಾಗಿರದೆ, ಎಲ್ಲರ ಹಿತ ಕಾಪಾಡುವ ನಾಯಕರನಾಗುವ ಸಾಮರ್ಥ್ಯ ಹೊಂದಿರಬೇಕು. ಯಡಿಯೂರಪ್ಪ ಅವರು ಈ ಹಾದಿಯಲ್ಲಿ ಯಶಸ್ವಿಯಾಗಿದ್ದಾರೆ.

ಬಿ ವೈ ವಿಜಯೇಂದ್ರ
ಮೈಸೂರು ಚಲೋಗೆ ಸೆಡ್ಡು: BSY-BYV ವಿರುದ್ಧ BJP ಬಂಡಾಯ ನಾಯಕರ ಸಭೆ; 'ಕೂಡಲಸಂಗಮ-ಬಳ್ಳಾರಿ ಪಾದಯಾತ್ರೆ'ಗೆ ಪ್ಲ್ಯಾನ್‌..!

ವಿಜಯೇಂದ್ರ ಅವರು ಈಗಾಗಲೇ ವೀಶೈವ ಲಿಂಗಾಯತರು, ಧಾರ್ಮಿಕ ಮುಖಂಡರ ದೊಡ್ಡ ವರ್ಗದ ಜನರ ಸಹಾನುಭೂತಿ ಗಳಿಸಿದ್ದು, ಇದನ್ನು ಗಮನದಲ್ಲಿಟ್ಟುಕೊಂಡೇ ಬಂಡಾಯ ಬಣ ವಿಜಯೇಂದ್ರ ವಿರುದ್ಧ ಸೆಣಸಾಡಲು ತಂತ್ರ ರೂಪಿಸಿದೆ ಎಂದು ಹೇಳಲಾಗುತ್ತಿದೆ.

ಏತನ್ಮಧ್ಯೆ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಬಿಜೆಪಿಯಲ್ಲಿ ಆಂತರಿಕ ವೈಮನಸ್ಸು ಮೂಡಿರುವುದು ನಿಜ. ಈ ಬಗ್ಗೆ ದಹೆಲಿಗೆ ಭೇಟಿ ನೀಡಿದಾಗ ಹೈಕಮಾಂಡ್ ಜೊತೆ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ,

ಈ ವಿಷಯದ ಬಗ್ಗೆ (ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ) ಈಗಾಗಲೇ ಸಾಕಷ್ಟು ಚರ್ಚೆಗಳು ನಡೆದಿವೆ, ಇದನ್ನು ಕೇಂದ್ರ ಬಿಜೆಪಿ ನಾಯಕತ್ವವೂ ಸೂಕ್ಷ್ಮವಾಗಿ ಗಮನಿಸುತ್ತಿದೆ. ಸೂಕ್ತ ಸಮಯದಲ್ಲಿ ನಿರ್ಧರ ಕೈಗೊಳ್ಳುತ್ತಾರೆ. ಸಾಧ್ಯವಾದರೆ ದೆಹಲಿಗೆ ಭೇಟಿ ನೀಡಿ ಇಲ್ಲಿನ ಬೆಳವಣಿಗೆಗಳನ್ನು ಗಮನಕ್ಕೆ ತರುತ್ತೇನೆ. ಶೀಘ್ರವೇ ಸಮಸ್ಯೆ ಬಗೆಹರಿಸುವಂತೆ ಹೈಕಮಾಂಡ್‌ಗೆ ಮನವಿ ಮಾಡುತ್ತೇನೆ. ಪರಿಹಾರ ಸಿಗುವ ವಿಶ್ವಾಸವಿದೆ ಎಂದು ತಿಳಿಸಿದರು.

ಮೈಸೂರು ಪಾದಯಾತ್ರೆಯಂತೆಯೇ ಹೈ ಕಮಾಂಡ್ ಒಪ್ಪಿಗೆ ನೀಡಿದರೆ, ಈ ಪಾದಯಾತ್ರೆಗೂ ಬೆಂಬಲ ನೀಡಲಾಗುವುದು ಎಂದೂ ಇದೇ ವೇಳೆ ಅಶೋಕ್ ತಿಳಿಸಿದರು. ಬಿಎಲ್.ಸಂತೋಷ್ ಸೇರಿದಂತೆ ಕೇಂದ್ರ ಬಿಜೆಪಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ನನಗೆ ಸೂಚಿಸಿದ್ದು, ಇದರಂತೆ ನಾನು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದೆ ಎಂದು ತಿಳಿಸಿದರು.

ಮಾಜಿ ಸಚಿವ ಮಾಧುಸ್ವಾಮಿ ಮಾತನಾಡಿ, ವಿಜಯೇಂದ್ರ ಯುವ ವಯಸ್ಸಿನವರಾಗಿದ್ದು, ರಾಜ್ಯಾಧ್ಯಕ್ಷ ಜವಾಬ್ದಾರಿಯನ್ನು ಬೇಗನೆ ನೀಡಲಾಗಿದೆ. ಹೀಗಾಗಿ ಅವರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ರಾಜ್ಯಧ್ಯಕ್ಷ ಬದಲಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಬಹುದಿತ್ತು. ಇದನ್ನು ಒಪ್ಪಿಕೊಳ್ಳಲು ಅವಕಾಶವಿದೆ ಎಂದು ಹೇಳಿದ್ದಾರೆ.

ಈ ನಡುವೆ ಬಿಜೆಪಿಯಲ್ಲಿನ ಆಂತರಿಕ ಕಚ್ಚಾಟ ಮೈತ್ರಿ ಪಕ್ಷ ಜೆಡಿಎಸ್ ಪಕ್ಷಕ್ಕೂ ಇರಿಸು-ಮುರಿಸು ತರಿಸಿದೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com